ರಾಣೆಬೆನ್ನೂರು: ಅಕ್ರಮವಾಗಿ ಶೇಖರಣೆ ಮಾಡಿಟ್ಟಿದ್ದ ಮದ್ಯವನ್ನು ಹಲಗೇರಿ ಠಾಣೆ ಪೊಲೀಸರು ವಶಪಡಿಸಿಕೊಂಡ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಮಾಳನಾಯಕಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ದುರ್ಗಾದೇವಿ ದೇವಸ್ಥಾನದ ಗೋದಾಮಿನಲ್ಲಿ ಸುಮಾರು 5 ಲಕ್ಷ ರೂ. ಮೌಲ್ಯದ 183 ಬಾಕ್ಸ್ಗಳನ್ನು ಶೇಖರಣೆ ಮಾಡಿದ್ದರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.