ETV Bharat / state

ಹಾನಗಲ್​ನಿಂದ ಬಿ.ವೈ. ವಿಜಯೇಂದ್ರ ಸ್ಪರ್ಧೆ ವಿಚಾರ.. ಸಂಸದ ಶಿವಕುಮಾರ್ ಏನಂತಾರೆ?

author img

By

Published : Jun 30, 2021, 7:09 PM IST

Updated : Jun 30, 2021, 7:20 PM IST

ನಾನು ಉಪಚುನಾವಣೆಗೆ ಸ್ಪರ್ಧಿಸುವ ಕುರಿತು ಆಲೋಚನೆ ಮಾಡಿಲ್ಲ. ಹಾನಗಲ್​ನಿಂದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಉಪಚುನಾವಣೆಗೆ ಸ್ಪರ್ಧಿಸುವ ವಿಚಾರ ನನಗೆ ಗೊತ್ತಿಲ್ಲ ಎಂದು ಸಂಸದ ಶಿವಕುಮಾರ ಉದಾಸಿ ತಿಳಿಸಿದ್ದಾರೆ.

Shivakumar Udasi
ಶಿವಕುಮಾರ್ ಉದಾಸಿ

ಹಾವೇರಿ: ಶಾಸಕ ಸಿಎಂ ಉದಾಸಿ ಅವರ ನಿಧನವಾದ್ದರಿಂದ ಹಾನಗಲ್​ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಬೇಕಿದೆ. ಈ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಆದ್ರೆ ವಿಚಾರ ತನಗೆ ಗೊತ್ತಿಲ್ಲ ಎಂದು ಸಂಸದ ಶಿವಕುಮಾರ ಉದಾಸಿ ಹೇಳಿದ್ದಾರೆ.

ಹಾವೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಿವಕುಮಾರ್ ಉದಾಸಿ

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಮ್ಮ ತಂದೆ ತೀರಿಕೊಂಡು 20 ದಿನಗಳಷ್ಟೇ ಕಳೆದಿವೆ. ನಾನು ಉಪಚುನಾವಣೆಗೆ ಸ್ಪರ್ಧಿಸುವ ಕುರಿತು ಆಲೋಚನೆ ಮಾಡಿಲ್ಲ. ಸಂಸದನಾಗಿ ಉತ್ತಮವಾಗಿ ಕೆಲಸ ಮಾಡುತ್ತಿದ್ದೇನೆ. ಸಂಸದನಾಗಿಯೇ ಮುಂದುವರೆಯುತ್ತೇನೆ ಎಂದು ತಿಳಿಸಿದರು.

ಕೇಂದ್ರ ಸಚಿವ ಸಂಪುಟ ವಿಸ್ತರಣೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಅದು ಪ್ರಧಾನ ಮಂತ್ರಿಗಳ ಪರಮಾಧಿಕಾರ. ಪ್ರಧಾನಿಯವರ ವಿವೇಚನೆಗೆ ಬಿಟ್ಟಿದ್ದು. ಹೊಸದಾಗಿ ಯಾರಿಗೇ ಸಚಿವ ಸ್ಥಾನ ಕೊಟ್ಟರು ನನಗೆ ಸಂತೋಷವಾಗುತ್ತದೆ ಎಂದರು.

Last Updated : Jun 30, 2021, 7:20 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.