ETV Bharat / state

ಹಾನಗಲ್ ಬಳಿ ಬೈಕ್​ಗಳಿಗೆ ಕಾರು ಡಿಕ್ಕಿ.. ಸ್ಥಳದಲ್ಲೇ ಇಬ್ಬರ ದುರ್ಮರಣ

author img

By

Published : May 7, 2022, 10:58 PM IST

two-killed-in-road-accident-in-haveri
ಹಾನಗಲ್ ಬಳಿ ಬೈಕ್​ಗಳಿಗೆ ಕಾರು ಡಿಕ್ಕಿ

ಎರಡು ಬೈಕ್​​ಗಳಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಹಾವೇರಿ ಜಿಲ್ಲೆಯಲ್ಲಿ ಸಂಭವಿಸಿದೆ.

ಹಾವೇರಿ: ಎರಡು ಬೈಕ್​​ಗಳಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಆಡೂರು ಗ್ರಾಮದ ಬಳಿ ನಡೆದಿದೆ. ಮೃತರನ್ನು ಗಣೇಶ ಲಮಾಣಿ (35) ಮತ್ತು ರಮೇಶ ಲಮಾಣಿ (40) ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಮತ್ತೋರ್ವನನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರಿನ ಟೈರ್ ಸ್ಫೋಟಗೊಂಡು, ಎರಡು ಬೈಕ್​ಗಳಿಗೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಆಡೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ತರಕಾರಿ ವ್ಯಾಪಾರದಲ್ಲಿನ ಲಾಭವೇ ಮುಳುವಾಯ್ತಾ?.. ಕ್ಯಾಪ್ಸಿಕಂ ರವಿ ಕೊಲೆ ಆರೋಪಿಗಳ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.