ETV Bharat / state

ಪ್ರತಿ ಗ್ರಾಮದ 2 ಸ್ತ್ರೀ ಶಕ್ತಿ ಸಂಘಗಳಿಗೆ ತಲಾ 5 ಲಕ್ಷ ರೂ ಸಾಲ ಸೌಲಭ್ಯ: ಸಿಎಂ ಬೊಮ್ಮಾಯಿ

author img

By

Published : Oct 24, 2022, 10:25 PM IST

Updated : Oct 24, 2022, 10:31 PM IST

ರಾಜ್ಯದಲ್ಲಿ ಮಹಿಳೆಯರ ಮತ್ತು ಯುವಕರ ಸಬಲೀಕರಣಕ್ಕಾಗಿ ಸ್ತ್ರೀ ಸಾಮರ್ಥ್ಯ ಯೋಜನೆ ಮತ್ತು ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯನ್ನು ಡಿಸೆಂಬರ್​ನಲ್ಲಿ ಜಾರಿಗೊಳಿಸಲಿದ್ದೇವೆ. ಇದರಿಂದ ಉದ್ಯೋಗಾವಕಾಶಗಳು ಹೆಚ್ಚಾಗಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

women-and-youth-empowerment-scheme-annonced-by-bommai
ಚೆನ್ನಮ್ಮನ ಶಕ್ತಿಯೊಂದಿಗೆ ರಾಜ್ಯದಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆ : ಸಿಎಂ ಬೊಮ್ಮಾಯಿ

ಹಾವೇರಿ: ಚೆನ್ನಮ್ಮನ ಶಕ್ತಿಯೊಂದಿಗೆ ರಾಜ್ಯದಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆ ಜಾರಿ ಮಾಡಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಪ್ರತಿ ಗ್ರಾಮದ ಎರಡು ಸ್ತ್ರೀ ಶಕ್ತಿ ಸಂಘಗಳಿಗೆ ತಲಾ ಐದು ಲಕ್ಷ ರೂ ಸಾಲ ಮತ್ತು ಅನುದಾನ ಕೊಡಲಿದ್ದೇವೆ. ಸುಮಾರು ಐದು ಲಕ್ಷ ಮಹಿಳೆಯರಿಗೆ ಉದ್ಯೋಗ ನೀಡುವ ಕಾರ್ಯಕ್ರಮ ಮಾಡುತ್ತಿದ್ದೇವೆ. ಜೊತೆಗೆ ಮಹಿಳೆಯರು ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.

ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ: ಮಹಿಳೆಯರಿಗೆ ಮಾತ್ರವಲ್ಲದೆ ಯುವಕರಿಗಾಗಿ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ ಜಾರಿಗೆ ಮಾಡುತ್ತಿದ್ದೇವೆ. ಪ್ರತಿ ಗ್ರಾಮದ ಎರಡು ಯುವಶಕ್ತಿ ಸಂಘಗಳಿಗೆ ತಲಾ 5 ಲಕ್ಷ ರೂ ಅನುದಾನ ನೀಡಲಿದ್ದೇವೆ. ಈ ಮೂಲಕ ಸುಮಾರು ಐದು ಲಕ್ಷ ಯುವಕರಿಗೆ ಉದ್ಯೋಗ ನೀಡುವ ಯೋಜನೆ ಇದಾಗಿದೆ. ಈ ಎರಡೂ ಯೋಜನೆಗಳು ಡಿಸೆಂಬರ್‌ನಲ್ಲಿ ಜಾರಿಗೆ ಬರುತ್ತದೆ ಎಂದರು.

ರಿಷಿ ಆಯ್ಕೆ ಸುನಕ್​ ಆಗಿದ್ದಕ್ಕೆ ಸಂತಸ ಮತ್ತು ಹೆಮ್ಮೆ: ಬ್ರಿಟನ್ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಆಯ್ಕೆಯಾದ ವಿಚಾರದ ಕುರಿತು ಮಾತನಾಡಿದ ಅವರು, ಭಾರತೀಯ ಮೂಲದ ರಿಷಿ ಆಯ್ಕೆ ಆಗಿದ್ದಕ್ಕೆ ಸಂತಸ ಹಾಗೂ ಹೆಮ್ಮೆ ಆಗುತ್ತಿದೆ. ಬ್ರಿಟಿಷರು ನಮ್ಮನ್ನು ಇನ್ನೂರು ವರ್ಷಗಳ ಕಾಲ ಆಳಿದರು. ಒಬ್ಬ ಭಾರತೀಯ ಪ್ರಧಾನಿ ಆಗುತ್ತಾನೆ ಅನ್ನೋದನ್ನು ಅವರು ಕನಸು ಮನಸಿನಲ್ಲೂ ಅಂದುಕೊಂಡಿರಲಿಲ್ಲ. ಈಗ ಕಾಲಚಕ್ರ ತಿರುಗಿದೆ. ಭಾರತೀಯರು ಎಲ್ಲ ರಂಗದಲ್ಲೂ ಮುಂದಿದ್ದಾರೆ. ಬಹಳ ಜನರು ವಿದೇಶದಲ್ಲಿ ಎಂಪಿಗಳಾಗಿದ್ದಾರೆ. ಈಗ ಬ್ರಿಟನ್ ಪ್ರಧಾನಿ ಆಗಿರುವುದು ವಿಶೇಷ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ವಿಧಾನಸಭೆ ಅಧಿವೇಶನದಲ್ಲಿ ಅನುಮೋದನೆ: ಎಸ್ ಸಿ ಮತ್ತು ಎಸ್ ಟಿ ಮೀಸಲಾತಿ ಹೆಚ್ಚಳದ ವಿಚಾರ ಮಾತನಾಡಿ, ಈಗಾಗಲೇ ಗೆಜೆಟ್ ನೋಟಿಫಿಕೇಷನ್ ಆಗಿದೆ. ಬರುವ ವಿಧಾನಸಭೆ ಅಧಿವೇಶನದಲ್ಲಿ ಅನುಮೋದನೆ ಪಡೆದುಕೊಳ್ಳುತ್ತೇವೆ. ನನಗೆ ಈ ವಿಚಾರದಲ್ಲಿ ಬಹಳ ಸಂತೋಷ ಆಗುತ್ತಿದೆ. ಡಾ.ನಾಗಮೋಹನ ದಾಸ್ ವರದಿಯನ್ನು ಅನುಷ್ಠಾನ ಮಾಡಿಸೋ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಆ ಎಲ್ಲ ಜನಾಂಗದ ಮಕ್ಕಳಿಗೆ ನಾನು ಶುಭಾಶಯಗಳನ್ನು ಹೇಳುತ್ತೇನೆ ಎಂದರು. ಈ ವಿಚಾರದಲ್ಲಿ ಸಿದ್ದರಾಮಯ್ಯನವರ ಹೇಳಿಕೆ ಬಗ್ಗೆ ನಾನು ಮಾತನಾಡುವುದಿಲ್ಲ. ಅದರ ಬಗ್ಗೆ ನಾನು ಚರ್ಚೆ ಮಾಡೋಕೆ ಹೋಗೋದಿಲ್ಲ. ನನ್ನ ಕರ್ತವ್ಯ, ಬದ್ಧತೆ ಏನಿದೆ ಅದನ್ನು ಮಾಡುತ್ತಿದ್ದೇನೆ ಎಂದರು.

ಇದನ್ನೂ ಓದಿ: ಎಸ್ಸಿ ಎಸ್ಟಿ ಮೀಸಲಾತಿ ಕಾಂಗ್ರೆಸ್ ಪಕ್ಷದ ಕೂಸು : ಡಿ ಕೆ ಶಿವಕುಮಾರ್​

Last Updated : Oct 24, 2022, 10:31 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.