ETV Bharat / state

ಬಿಸಿಯೂಟ ಸೇವಿಸಿ 30 ವಿದ್ಯಾರ್ಥಿಗಳು ಅಸ್ವಸ್ಥ:ಆಸ್ಪತ್ರೆಗೆ ದಾಖಲು

author img

By

Published : Feb 14, 2020, 10:01 PM IST

ಬಿಸಿಯೂಟ ಸೇವಿಸಿ 30 ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಶಿಲಾರಕೋಟ ಗ್ರಾಮದಲ್ಲಿ ನಡೆದಿದೆ.

30-students-are-admitted-to-hospital-in-kalburgi
ಬಿಸಿಯೂಟ ಸೇವಿಸಿ 30 ವಿದ್ಯಾರ್ಥಿಗಳು ಅಸ್ವಸ್ಥ..ಆಸ್ಪತ್ರೆಗೆ ದಾಖಲು!

ಕಲಬುರಗಿ: ಬಿಸಿಯೂಟ ಸೇವಿಸಿ 30 ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಸೇಡಂ ತಾಲೂಕಿನ ಶಿಲಾರಕೋಟ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಮಕ್ಕಳಲ್ಲಿ ಸಂಜೆ 4 ಗಂಟೆಗೆ ವಾಂತಿ ಭೇದಿ ಕಾಣಿಸಿಕೊಂಡಿದೆ. ಇದರಿಂದ ಗಾಬರಿಗೊಂಡ ಶಿಕ್ಷಕರು ಮತ್ತು ಪಾಲಕರು ಮಕ್ಕಳನ್ನು ಮುಧೋಳ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದು, ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ.

ಬಿಸಿಯೂಟ ಸೇವಿಸಿ 30 ವಿದ್ಯಾರ್ಥಿಗಳು ಅಸ್ವಸ್ಥ..ಆಸ್ಪತ್ರೆಗೆ ದಾಖಲು

ನಂತರ ಹೆಚ್ಚಿನ ಚಿಕಿತ್ಸೆಗಾಗಿ ಸೇಡಂನ ಸಾರ್ವಜನಿಕ ಆಸ್ಪತ್ರೆಗೆ ಅಂಬುಲೆನ್ಸ್ ಮೂಲಕ ತರಲಾಗಿದೆ. 30 ವಿದ್ಯಾರ್ಥಿಗಳ ಪೈಕಿ 28 ಜನರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದ್ದು, ಇಬ್ಬರು ವಿದ್ಯಾರ್ಥಿಗಳು ತೀವ್ರ ಅಸ್ವಸ್ಥರಾಗಿದ್ದಾರೆ ಎಂದು ತಿಳಿದು ಬಂದಿದೆ.

ಮಧ್ಯಾಹ್ನದ ಬಿಸಿಯೂಟ ತಯಾರಿಕೆಯಲ್ಲಿ ಅಡುಗೆಯವರು ಮತ್ತು ಶಿಕ್ಷಕರ ನಿರ್ಲಕ್ಷ್ಯದಿಂದಲೇ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಅನೇಕ ದಿನಗಳಿಂದ ಬಿಸಿಯೂಟದಲ್ಲಿ ಹುಳುಗಳು ಸಹ ಕಾಣಿಸಿಕೊಳ್ಳುತ್ತಿದ್ದವು ಎಂದು ಕೆಲವರು ದೂರಿದ್ದಾರೆ. ಮುಧೋಳ ಆಸ್ಪತ್ರೆಗೆ ಪಿಐ ತಮ್ಮಾರಾಯ ಪಾಟೀಲ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.