ETV Bharat / state

ಶಿಕ್ಷಣ ಇಲಾಖೆಯಿಂದ ಅಂಬೇಡ್ಕರ್​ಗೆ ಅವಮಾನ ಆರೋಪ: ಡಿಎಸ್​ಎಸ್​ ಪ್ರತಿಭಟನೆ

author img

By

Published : Nov 13, 2019, 3:14 PM IST

"ಸಂವಿಧಾನವನ್ನು ಅಂಬೇಡ್ಕರ್ ರಚಿಸಿಲ್ಲ" ಎಂದು ಉಲ್ಲೇಖಿಸಿ ಅಪಮಾನ...?

ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ ಹೊರಡಿಸಿದ ಸುತ್ತೋಲೆಯ ಕೈಪಿಡಿಯಲ್ಲಿ ಸಂವಿಧಾನವನ್ನು ಅಂಬೇಡ್ಕರ್ ಒಬ್ಬರೇ ರಚಿಸಿಲ್ಲ ಎಂದು ನಮೂದಿಸಲಾಗಿದೆ ಎಂದು ಆರೋಪಿಸಿರುವ ದಲಿತ ಸಂಘರ್ಷ ಸಮಿತಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್​ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ಕಲಬುರಗಿ: ಶಿಕ್ಷಣ ಇಲಾಖೆ ಕೈಪಿಡಿಯಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ದಲಿತ ಸಂಘರ್ಷ ಸಮಿತಿ ಸದಸ್ಯರು ಇಂದು ಪ್ರತಿಭಟನೆ ನಡೆಸಿದರು.

"ಸಂವಿಧಾನವನ್ನು ಅಂಬೇಡ್ಕರ್ ಒಬ್ಬರೇ ರಚಿಸಿಲ್ಲ" ಎಂದು ಉಲ್ಲೇಖಿಸಿರುವ ಆರೋಪ- ಡಿಎಸ್​ಎಸ್​ ಪ್ರತಿಭಟನೆ

ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಡಿಎಸ್ಎಸ್ ಕಾರ್ಯಕರ್ತರು ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ ಹೊರಡಿಸಿದ ಸುತ್ತೋಲೆಯ ಕೈಪಿಡಿಯಲ್ಲಿ ಸಂವಿಧಾನವನ್ನು ಅಂಬೇಡ್ಕರ್ ರಚಿಸಿಲ್ಲವೆಂದು ನಮೂದಿಸಲಾಗಿದೆ ಎಂದು ಆರೋಪಿಸಿರುವ ದಲಿತ ಸಂಘರ್ಷ ಸಮಿತಿ ಸದಸ್ಯರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್​ ರಾಜೀನಾಮೆಗೆ ಆಗ್ರಹಿಸಿದರು.

ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಂದ ಪ್ರತಿಭಟನೆ:

ವಿವಿ ಕಾರ್ಯಸೌಧದ ಎದುರು ಗುಲಬರ್ಗಾ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿಧರ ವಿದ್ಯಾರ್ಥಿಗಳು ಕೂಡ ಈ ವಿಚಾರವಾಗಿ ಪ್ರತಿಭಟನೆ ನಡೆಸಿದರು. ಉದ್ದೇಶಪೂರ್ವಕವಾಗಿ ಕೈಪಿಡಿಯಲ್ಲಿ ಸಂವಿಧಾನವನ್ನು ಅಂಬೇಡ್ಕರ್ ರಚಿಸಿಲ್ಲ ಎಂದು ಉಲ್ಲೇಖಿಸಲಾಗಿದೆ. ಆ ಮೂಲಕ ಶಿಕ್ಷಣ ಇಲಾಖೆ ಡಾ. ಬಿ. ಆರ್. ಅಂಬೇಡ್ಕರ್ ಅವರನ್ನು ಅವಮಾನಿಸಿದೆ. ಇದಕ್ಕೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

Intro:ಕಲಬುರಗಿ:ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ ಹೊರಡಿಸಿದ ಸುತ್ತೋಲೆಯಲ್ಲಿ ಕೈಪಿಡಿಯಲ್ಲಿ ನಮೂದಿಸಲಾಗಿದೆ ಎಂದು ಆರೋಪ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ವಜಾಗೋಳಿಸುವಂತೆ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ‌.

ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಡಿಎಸ್ ಎಸ್ ಕಾರ್ಯಕರ್ತರು ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು.ಶಿಕ್ಷಣ ಇಲಾಖೆ ಕೈಪಿಡಿಯಲ್ಲಿ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಲಾಗಿದೆ.ಸಂವಿಧಾನವನ್ನು ಅಂಬೇಡ್ಕರ್ ರಚಿಸಿಲ್ಲ ಎಂದು ಶಿಕ್ಷಣ ಇಲಾಖೆ ಕೈಪಿಡಿಯಲ್ಲಿ ನಮೂದಿಸಿರುವಿದು ಖಂಡನಾರ್ಹವಾಗಿದೆ.ಇದಕ್ಕೆ ಕಾರಣರಾದ ಶಿಕ್ಷಣ ಇಲಾಖೆ ಉಪನಿರ್ದೇಶರನು ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ
ಸುರೇಶ್ ಕುಮಾರ್ ರನ್ನು ಸಂಪುಟದಿಂದ ವಜಾಗೊಳಿಸಲು ಒತ್ತಾಯಿಸಿದರು.

ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಂದ ಪ್ರತಿಭಟನೆ.

ವಿವಿ ಕಾರ್ಯಸೌದದ ಎದುರು ಗುಲಬರ್ಗಾ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿಧರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ.ಉದ್ದೇಶಪೂರ್ವಕವಾಗಿ ಕೈಪಿಡಿಯಲ್ಲಿ ಸಂವಿಧಾನವನ್ನು ಅಂಬೇಡ್ಕರ್ ರಚಿಸಿಲ್ಲ ಎಂದು ಉಲ್ಲೇಖಿಸುವ ಮೂಲಜ ಶಿಕ್ಷಣ ಇಲಾಖೆ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅವಮಾನ ಮಾಡಲಾಗಿದೆ.ಇದಕ್ಕೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿದರು.
Body:ಕಲಬುರಗಿ:ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ ಹೊರಡಿಸಿದ ಸುತ್ತೋಲೆಯಲ್ಲಿ ಕೈಪಿಡಿಯಲ್ಲಿ ನಮೂದಿಸಲಾಗಿದೆ ಎಂದು ಆರೋಪ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ವಜಾಗೋಳಿಸುವಂತೆ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ‌.

ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಡಿಎಸ್ ಎಸ್ ಕಾರ್ಯಕರ್ತರು ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು.ಶಿಕ್ಷಣ ಇಲಾಖೆ ಕೈಪಿಡಿಯಲ್ಲಿ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಲಾಗಿದೆ.ಸಂವಿಧಾನವನ್ನು ಅಂಬೇಡ್ಕರ್ ರಚಿಸಿಲ್ಲ ಎಂದು ಶಿಕ್ಷಣ ಇಲಾಖೆ ಕೈಪಿಡಿಯಲ್ಲಿ ನಮೂದಿಸಿರುವಿದು ಖಂಡನಾರ್ಹವಾಗಿದೆ.ಇದಕ್ಕೆ ಕಾರಣರಾದ ಶಿಕ್ಷಣ ಇಲಾಖೆ ಉಪನಿರ್ದೇಶರನು ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ
ಸುರೇಶ್ ಕುಮಾರ್ ರನ್ನು ಸಂಪುಟದಿಂದ ವಜಾಗೊಳಿಸಲು ಒತ್ತಾಯಿಸಿದರು.

ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಂದ ಪ್ರತಿಭಟನೆ.

ವಿವಿ ಕಾರ್ಯಸೌದದ ಎದುರು ಗುಲಬರ್ಗಾ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿಧರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ.ಉದ್ದೇಶಪೂರ್ವಕವಾಗಿ ಕೈಪಿಡಿಯಲ್ಲಿ ಸಂವಿಧಾನವನ್ನು ಅಂಬೇಡ್ಕರ್ ರಚಿಸಿಲ್ಲ ಎಂದು ಉಲ್ಲೇಖಿಸುವ ಮೂಲಜ ಶಿಕ್ಷಣ ಇಲಾಖೆ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅವಮಾನ ಮಾಡಲಾಗಿದೆ.ಇದಕ್ಕೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿದರು.
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.