ಕಲ್ಯಾಣ ಕರ್ನಾಟಕದ ನವ ನಗರವಾಗಿ ಕಲಬುರಗಿ ನಿರ್ಮಾಣ ಆಗಲಿದೆ: ಸಿ ಎಂ ಬೊಮ್ಮಾಯಿ

author img

By

Published : Sep 17, 2022, 7:47 PM IST

kalyana karnataka amrit  mahotsav program Kalaburagi

ಕಲ್ಯಾಣ ಕರ್ನಾಟಕ ಅಮೃತ‌ ಮಹೋತ್ಸವ ಪ್ರಯುಕ್ತ ಮುಂಜಾನೆಯಿಂದ ಸಿಎಂ ಕಲಬುರಗಿಯಲ್ಲಿ ವಿವಿಧ ಯೋಜನೆಗೆ ಚಾಲನೆ ನೀಡಿದ್ದು ನವ ನಗರ ನಿರ್ಮಾಣ ರೂಪರೇಷೆ ಬಿತ್ತದರು.

ಕಲಬುರಗಿ : ಕಲ್ಯಾಣ ಕರ್ನಾಟಕ ಅಮೃತ‌ ಮಹೋತ್ಸವ ನಿಮಿತ್ತ ಕಲಬುರಗಿಯಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಇಂದು ಬೆಳಗ್ಗೆ 8 ಗಂಟೆಗೆ ನಗರಕ್ಕೆ ಆಗಮಿಸಿದ ಸಿಎಂ ಬಸವರಾಜ‌ ಬೊಮ್ಮಾಯಿ ಸಾಯಂಕಾಲದ ವರೆಗೆ ನಗರದಲ್ಲಿದ್ದು, ನಾನಾ ಕಾರ್ಯಕ್ರಮಗಳಲ್ಲಿ ಭಾಗಿಯಾದರು.

ಅಂದಿನ ಹೈದರಾಬಾದ್​ ಪ್ರಾಂತ್ಯ ಇಂದಿನ‌ ಕಲ್ಯಾಣ ಕರ್ನಾಟಕ, ಹೈದರಾಬಾದ್​ ನಿಜಾಮನ ಕಪಿಮುಷ್ಠಿಯಿಂದ ಹೊರಬಂದ ದಿನ ಸಪ್ಟೆಂಬರ್​ 17 ಈ ಹಿನ್ನೆಲೆ ವಿಮೋಚನಾ ದಿನವಾಗಿ ಆಚರಿಸಲಾಗುತ್ತದೆ. ಕಳೆದ ಎರಡು ವರ್ಷಗಳಿಂದ ವಿಮೋಚನ ದಿನದ ಬದಲಾಗಿ ವಿಮೋಚನಾ ಉತ್ಸವ ದಿನವಾಗಿ ಆಚರಿಸಲಾಗುತ್ತಿದೆ.‌

ನಾನಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಸಿಎಂ : ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಪಟೇಲರ ಪ್ರತಿಮೆಗೆ ಮಾಲಾರ್ಪಣೆ, ಪೊಲೀಸ್ ಪರೇಡ ಮೈದಾನದಲ್ಲಿ ತ್ರೀವರ್ಣ ಧ್ವಜಾರೋಹಣದ ಮೂಲಕ ಉತ್ಸವಕ್ಕೆ ಸಿಎಂ ಚಾಲನೆ ನೀಡಿದರು. ಪರೇಡ್​ ಮೂಲಕ‌ ಗೌರವ ವಂದನೆ ಸ್ವಿಕರಿಸಿದರು. ನಂತರ ಮಕ್ಕಳ ಸಾಂಸ್ಕೃತಿಕ‌ ಕಾರ್ಯಕ್ರಮವನ್ನು ಸಿಎಂ ವೀಕ್ಷಿಸಿದರು.

ವಿವಿಧ ಯೋಜನೆಗೆ ರೂಪುರೇಷೆ : ಎನ್.ವಿ.ಮೈದಾನದಲ್ಲಿ‌ ಹಮ್ಮಿಕೊಳ್ಳಲಾಗಿದ್ದ ಬೃಹತ್ ವೇದಿಕೆ ಕಾರ್ಯಕ್ರದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಸಿ ಎಂ, ಮುಂದಿನ ಬಜೆಟ್ ನಲ್ಲಿ ಕೆಕೆಆರ್​ಡಿಬಿಗೆ 5 ಸಾವಿರ ಕೋಟಿ ಅನುದಾನ‌ ನೀಡುವದಾಗಿ ಘೋಷಣೆ ಮಾಡಿದರು.

ಸಾರಿಗೆ ಸಂಪರ್ಕಕ್ಕೆ ಒತ್ತು: ಬೀದರ-ಶ್ರೀರಂಗಪಟ್ಟಣ ಹೆದ್ದಾರಿ, ಬೀದರ - ಬಳ್ಳಾರಿ ಹೆದ್ದಾರಿಯನ್ನು ಚತುಷ್ಪಥ ಎಕ್ಸ್‌ಪ್ರೆಸ್ ಹೈವೇಯಾಗಿ ಮಾಡುವುದು, ರಾಯಚೂರು, ಕೊಪ್ಪಳ ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಕೇಂದ್ರದ ನೆರವಿನೊಂದಿಗೆ ಯಾದಗಿರಿ, ರಾಯಚೂರಿನಲ್ಲಿ ರಿಂಗ್ ರಸ್ತೆ ಮತ್ತು ಕಲಬುರಗಿಯಲ್ಲಿ ಎರಡನೇ ರಿಂಗ್ ರಿಂಗ್ ರೋಡ್ ನಿರ್ಮಿಸಲಾಗುವುದು ಎಂದು ತಿಳಿಸಿದರು.

ಕೈಗಾರಿಕೆ ಸ್ಥಾಪನೆಗೆ ಒತ್ತು : ಈ ಭಾಗದಲ್ಲಿ ಕೈಗಾರಿಕೆ ಸ್ಥಾಪಿಸಲು ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದೇವೆ. ಕೇಂದ್ರ ಸರ್ಕಾರದಿಂದ ಕಲಬುರಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್, ರಾಜ್ಯ ಸರ್ಕಾರದಿಂದ ರಾಯಚೂರು, ವಿಜಯಪುರದಲ್ಲಿ ಟೆಕ್ಸ್​​​ಟೈಲ್ ಪಾರ್ಕ್ ಮಾಡಲಾಗುವುದು. ಇದರಿಂದ ಕನಿಷ್ಠ 25 ಸಾವಿರ ಜನರಿಗೆ ಉದ್ಯೋಗ ದೊರೆಯಲಿದೆ. ಶೀಘ್ರವೇ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಇದಲ್ಲದೆ ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್, ಯಾದಗಿರಿಯಲ್ಲಿ ಫಾರ್ಮಾಕ್ಯೂಟಿಕಲ್ ಕ್ಲಸ್ಟರ್ ನಿರ್ಮಿಸಲಾಗುವುದು. ಕೊಪ್ಪಳದಲ್ಲಿ ಈಗಾಗಲೇ ಆಟಿಕೆಗಳ ಕ್ಲಸ್ಟರ್ ನಿರ್ಮಾಣವಾಗುತ್ತಿದೆ. ಬೀದರನಲ್ಲಿ ಕೇಂದ್ರದ ನೆರವಿನೊಂದಿಗೆ 90 ಕೋಟಿ ರೂ. ವೆಚ್ಚದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಕುರಿತ ಸಿಪೆಟ್ ಸಂಸ್ಥೆ ಪ್ರಾರಂಭಿಸಲಾಗುವುದು ಎಂದು ಯೋಜನೆಯ ಚಿತ್ರಣ ನೀಡಿದರು.

ಶಿಕ್ಷಣ ಮತ್ತು ಆರೋಗ್ಯದ ಭರವಸೆ : ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಸಕ್ತ ವರ್ಷ 2,100 ಶಾಲಾ ಕೊಠಡಿಗಳ ನಿರ್ಮಾಣ, 2,500 ಅಂಗನವಾಡಿ ಕೇಂದ್ರಗಳು ತೆರೆಯಲು ಕ್ರಮ ಕೈಗೊಳ್ಳಲಾಗಿದೆ. ಕಲ್ಯಾಣ ಕರ್ನಾಟಕದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಮುಂದಿನ ಆಗಸ್ಟ್ ರೊಳಗಾಗಿ ಶೌಚಾಲಯ ನಿರ್ಮಿಸಲಾಗುವುದು. ಆರೋಗ್ಯ ಸೇವೆ ಉತ್ತಮಪಡಿಸಲು 68 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರ, 14 ಪಿ.ಎಚ್.ಸಿ‌ಗಳನ್ನು, ಸಿ.ಎಚ್.ಸಿ. ಗಳಾಗಿ ಉನ್ನತೀಕರಿಸಲಾಗುತ್ತಿದೆ ಎಂದು ಹೇಳಿದರು.

ಕೃಷಿ ಮತ್ತು ನೀರಾವರಿಗೂ ಬೆಂಬಲ : ಬೀದರ್, ಬಳ್ಳಾರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ನೀರಾವರಿ ಯೋಜನೆ. ಸುಮಾರು 2 ಲಕ್ಷ ಎಕರೆಗಿಂತ ಹೆಚ್ಚು ಬಂಜರು ಭೂಮಿಯನ್ನು ಕೃಷಿ ಯೋಗ್ಯ ಮಾಡಲು ಕ್ರಮ ಕೈಗೊಳ್ಳಲಾಗುವುದು. ಕೊಪ್ಪಳದಿಂದ ಕಲಬುರಗಿ, ಬಳ್ಳಾರಿಯಿಂದ ರಾಯಚೂರುವರೆಗೆ ಗ್ರೀನ್ ಕಾರಿಡಾರ್ ಮಾಡಲು ತೀರ್ಮಾನಿಸಿದ್ದೇವೆ. ಇದಕ್ಕಾಗಿ ಅರಣ್ಯ ಇಲಾಖೆಗೆ 10 ಕೋಟಿ ನೀಡಲಾಗಿದೆ ಎಂದು ತಿಳಿಸಿದರು.

ಅಭಿನಂದನೆ : ನಾಲ್ಕು ಜನ ಸ್ವಾತಂತ್ರ್ಯ ಹೋರಾಟಗಾರರಿಗೆ, 10 ಜನ ಪತ್ರಕರ್ತರಿಗೆ ಗೌರವಿಸಲಾಯಿತು. ಇಂಡಿಯಾ‌ ಬುಕ್ ಆಫ್ ರೆಕಾರ್ಡ್ಸ ನಲ್ಲಿ ದಾಖಲೆ ಪಡೆದ ಕಲಬುರಗಿಯ 10 ವರ್ಷದ ವಿಸ್ಮಿತಾ ಅವರಿಗೆ ಸಿ.ಎಂ.ಅಭಿನಂದಿಲ್ಲಿಸಲಾಯಿತು.

ಕೇಂದ್ರ ಸಚಿವ‌ ಭಗವಂತ ಖೂಬಾ, ಗೃಹ ಸಚಿವ ಆರಗ ಜ್ಞಾನೇಂದ್ರ,‌ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ, ಸಚಿವ ಮುನಿರತ್ನ, ಶಾಸಕರುಗಳು, ಅಪಾರ ಪ್ರಮಾಣದಲ್ಲಿ ಸಾರ್ವಜನಿಕು‌ ಪಾಲ್ಗೊಂಡು‌ ಸಮಾರಂಭ ಅಭೂತಪೂರ್ಣ ಯಶಸ್ಸಿಗೆ ಕಾರಣರಾದರು.

ಇದನ್ನೂ ಓದಿ : ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ: ಸಿಎಂ ಬೊಮ್ಮಾಯಿ ಅಭಿವೃದ್ಧಿ ಭಾಷಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.