ETV Bharat / state

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷಗಿರಿ: 'ಸಿಎಂ ಜೊತೆ ಚರ್ಚಿಸಿ ತೀರ್ಮಾನ'

author img

By

Published : Aug 16, 2020, 4:59 PM IST

ಮುಖ್ಯಮಂತ್ರಿಗಳ ಜೊತೆಗೆ ಚರ್ಚಿಸಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಸ್ಥಾನದ ಅಧಿಕಾರ ವಹಿಸಿಕೊಳ್ಳುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಹೇಳಿದ್ದಾರೆ.

Mla rajkumar patila telkura statement
ಸಿಎಂ ಬಳಿ ಚರ್ಚಿಸಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷಗಿರಿ ಬಗ್ಗೆ ತೀರ್ಮಾನಿಸುವೆ..!

ಸೇಡಂ (ಕಲಬುರಗಿ): ಸರ್ಕಾರವಿದೆ ಎಂದ ಮಾತ್ರಕ್ಕೆ ಸಚಿವನಾಗುವ ಆಸೆ ಬರುವುದು ಸಾಮಾನ್ಯ. ಆದರೂ ಮುಖ್ಯಮಂತ್ರಿಗಳ ಜೊತೆಗೆ ಚರ್ಚಿಸಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಸ್ಥಾನದ ಅಧಿಕಾರ ವಹಿಸಿಕೊಳ್ಳುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಹೇಳಿದ್ದಾರೆ.

'ಸಿಎಂ ಬಳಿ ಚರ್ಚಿಸಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷಗಿರಿ ಬಗ್ಗೆ ತೀರ್ಮಾನಿಸುವೆ'

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷನ್ನಾಗಿ ಸಿಎಂ ನೇಮಿಸಿದ್ದರೂ ಸಹ ಅಧಿಕಾರ ವಹಿಸಿಕೊಳ್ಳದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಮುಖ್ಯಮಂತ್ರಿಗಳಿಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ, ಅವರ ಭೇಟಿ ಸಾಧ್ಯವಾಗಿರಲಿಲ್ಲ. ಕೆಕೆಆರ್‌ಡಿಬಿ ಆಗಲಿ, ಬೇರೆ ನಿಗಮಗಳಾಗಲಿ ಎಲ್ಲವೂ ನಮ್ಮ ಆತ್ಮೀಯರಿಗೆ ದೊರೆತಿವೆ.

ನನ್ನ ಮೇಲೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸವಿಟ್ಟು ಈಶಾನ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ. ಶೀಘ್ರವೇ ಅವರ ಜೊತೆಗೆ ಮುಂದಿನ ನಿರ್ಧಾರದ ಬಗ್ಗೆ ಸಮಾಲೋಚನೆ ನಡೆಸುವುದಾಗಿ ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.