ETV Bharat / state

ಕಲಬುರಗಿ ಪಾಲಿಕೆಯಲ್ಲಿ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಪಕ್ಕಾ: ಡಾ. ಶರಣಪ್ರಕಾಶ ಪಾಟೀಲ್ ವಿಶ್ವಾಸ

author img

By

Published : Sep 11, 2021, 5:13 PM IST

Updated : Sep 11, 2021, 7:57 PM IST

sharanprakash patil reaction on jds congress alliance in kalaburagi palike
ಕಲಬುರಗಿ ಪಾಲಿಕೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಕಾ

ಮಲ್ಲಿಕಾರ್ಜುನ ಖರ್ಗೆ ಅವರು ಈಗಾಗಲೇ‌ ಜೆಡಿಎಸ್ ವರಿಷ್ಠರೊಂದಿಗೆ ಮಾತನಾಡಿದ್ದಾರೆ. ಕಲಬುರಗಿ ಪಾಲಿಕೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಖಚಿತ ಎಂದು ಮಾಜಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ತಿಳಿಸಿದ್ದಾರೆ.

ಕಲಬುರಗಿ: ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಪಕ್ಕಾ ಅಂತ ಮಾಜಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಹಿರಿಯ ಮುಖಂಡ‌ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಪಾಲಿಕೆ ಅಧಿಕಾರ ಹಿಡಿಯಲು ರಣತಂತ್ರ ರೂಪಿಸಲಾಗಿದೆ. ಖರ್ಗೆ ಅವರು ಈಗಾಗಲೇ‌ ಜೆಡಿಎಸ್ ವರಿಷ್ಠರೊಂದಿಗೆ ಮಾತನಾಡಿದ್ದಾರೆ. ಜ್ಯಾತ್ಯತೀತ ನಿಲುವಿನೊಂದಿಗೆ ಕಾಂಗ್ರೆಸ್ ಜೊತೆ ಜೆಡಿಎಸ್ ಕೈ ಜೋಡಿಸಲಿದೆ ಎಂದರು.

ಮಾಜಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಪ್ರತಿಕ್ರಿಯೆ

ಪಾಲಿಕೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು‌ ನೂರಕ್ಕೆ ನೂರರಷ್ಟು ಪಕ್ಕಾ ಎಂದರು. ಇದೇ ವೇಳೆ, ಬಿಜೆಪಿ ವಿರುದ್ಧ ಗುಡುಗಿದ ಪಾಟೀಲ್, ಬಿಜೆಪಿಯವರಿಗೆ ನಾಚಿಕೆಯಾಗಬೇಕು. ಮಾನ ಮರ್ಯಾದೆ ಇಲ್ಲದವರು. ಕುಮಾರಸ್ವಾಮಿ ಸರ್ಕಾರವನ್ನ ಕೆಡವಿ ಇದೀಗ ‌ಪಾಲಿಕೆ ಮೈತ್ರಿಗಾಗಿ ಮತ್ತೆ ಜೆಡಿಎಸ್ ಮನೆ ಬಾಗಿಲಿಗೆ ಹೋಗಿದ್ದಾರೆ ಎಂದು ಶರಣಪ್ರಕಾಶ ಪಾಟೀಲ್ ಕಿಡಿಕಾರಿದ್ದಾರೆ.

sharanprakash patil reaction on jds congress alliance in kalaburagi palike
ಕಲಬುರಗಿ ಪಾಲಿಕೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಕಾ

ಶಾಸಕರನ್ನ ಖರೀದಿ ಮಾಡಿ ವಾಮ‌ಮಾರ್ಗದ ಮೂಲಕ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ಪಾಲಿಕೆಯಲ್ಲಿ ಕಾಂಗ್ರೆಸ್ ಸದಸ್ಯರನ್ನ ಬಿಜೆಪಿ ಖರೀದಿ ಮಾಡಲು ಸಾಧ್ಯವೇ ಇಲ್ಲ ಎಂದ ಪಾಟೀಲ್, ಕಲಬುರಗಿ ಪಾಲಿಕೆಯಲ್ಲಿ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಅಧಿಕಾರಕ್ಕೆ ಬರುವುದು ಖಚಿತ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹು-ಧಾ ಮಹಾನಗರ ಪಾಲಿಕೆ ಮೇಯರ್ ಗಾದಿ: ಬಿಜೆಪಿ ನಾಯಕರ ನಡುವೆ ಮುಸುಕಿನ ಗುದ್ದಾಟ

Last Updated :Sep 11, 2021, 7:57 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.