ETV Bharat / state

COVID: ಕೊಡಗಿನ ಒಂದೇ ಶಾಲೆಯ 9 ಮಕ್ಕಳಲ್ಲಿ ಕೊರೊನಾ ಪಾಸಿಟಿವ್

author img

By

Published : Dec 4, 2021, 2:13 AM IST

Kodagu Students tested COVID Positive, ಕೊಡಗಿನಲ್ಲಿ ಶಾಲಾ ಮಕ್ಕಳಿಗೆ ಕೊರೊನಾ
ಕೊಡಗಿನ ಒಂದೇ ಶಾಲೆಯ 9 ಮಕ್ಕಳಲ್ಲಿ ಕೊರೊನಾ ಪಾಸಿಟಿವ್

ಕೊಡಗು ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚಾಗಿವೆ. ಶಾಲೆಯ 9 ಮಕ್ಕಳಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಸಮುದಾಯಕ್ಕೆ ಹರಡಿರುವ ಶಂಕೆ ವ್ಯಕ್ತವಾಗುತ್ತಿದೆ.

ಕೊಡಗು: ಜಿಲ್ಲೆಯಲ್ಲಿ ಕೋವಿಡ್ ಮತ್ತೆ ವಕ್ಕರಿಸಿದೆ. ಒಂದೇ ಶಾಲೆಯ 9 ಮಕ್ಕಳಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಪೋಷಕರಲ್ಲಿ ಆತಂಕ ಮೂಡಿದೆ.

ಮಡಿಕೇರಿಯ ಭಾರತೀಯ ವಿದ್ಯಾ ಭವನ ಕೊಡಗು ವಿದ್ಯಾಲಯದ 8 ನೇ ತರಗತಿಯ ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ. ಸೋಂಕಿತ ಮಕ್ಕಳನ್ನು ಅವರ ಮನೆಯಲ್ಲೇ ಕ್ವಾರಂಟೈನ್ ಮಾಡಿ, ಚಿಕಿತ್ಸೆ ನೀಡಲಾಗುತ್ತಿದೆ.

ಶಾಲಾ ಸಿಬ್ಬಂದಿಯಲ್ಲಿ ಮೊದಲು ಸೋಂಕು ಕಾಣಿಸಿಕೊಂಡಿದ್ದು, ನಂತರ ವಿದ್ಯಾರ್ಥಿಗಳಿಗೆ ಹರಡಿದೆ. ಇನ್ನೂ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಪರೀಕ್ಷೆ ಮಾಡಲಾಗುತ್ತದೆ. ರೋಗ ಲಕ್ಷಣಗಳು ಕಾಣಿಸಿಕೊಳ್ಳುವ ವಿದ್ಯಾರ್ಥಿಗಳನ್ನು ಪ್ರತ್ಯೇಕವಾಗಿ ಇರಿಸಿ, ಸೋಂಕು ಹರಡದಂತೆ ತಡೆಯಲು ಪ್ರಯತ್ನ ಮಾಡುತ್ತಿದ್ದೇವೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ವೆಂಕಟೇಶ್ ತಿಳಿಸಿದ್ದಾರೆ.

ಕೊಡಗಿನ ಒಂದೇ ಶಾಲೆಯ 9 ಮಕ್ಕಳಲ್ಲಿ ಕೊರೊನಾ ಪಾಸಿಟಿವ್

ಜಿಲ್ಲೆಯ ಎಲ್ಲಾ ಶಾಲಾ ವಿದ್ಯಾರ್ಥಿಗಳ ಮೇಲೆ ನಿಗಾವಹಿಸಲಾಗಿದೆ. ಮಕ್ಕಳಲ್ಲಿ ರೋಗ ಲಕ್ಷಣಗಳು ಕಂಡು ಬಂದ್ರೆ ಕೂಡಲೇ ಟೆಸ್ಟ್ ಮಾಡಿಸಲಾಗುವುದು. ಇನ್ನು ಕರ್ನಾಟಕ ಮತ್ತು ಕೇರಳ ಗಡಿ ಭಾಗದ ಮಾಕುಟ್ಟ ಗಡಿ ಭಾಗದಲ್ಲಿ ಹೈ ಅಲರ್ಟ್ ಮಾಡಲಾಗಿದೆ. ಕೇರಳದಿಂದ ಬರುವ ಎಲ್ಲರಿಗೂ ಕೋವಿಡ್ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಮಾಹಿತಿ ನೀಡಿದರು.

ಇನ್ನು ರಾಜ್ಯದಲ್ಲಿ ದಕ್ಷಿಣ ಆಫ್ರಿಕಾದಿಂದ ಬಂದ ಇಬ್ಬರಿಗೆ ಒಮಿಕ್ರೋನ್ ರೂಪಾಂತರಿ ಪತ್ತೆಯಾಗಿರುವ ಹಿನ್ನೆಲೆ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.

(ಇದನ್ನೂ ಓದಿ: MLC Election: ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ನಾಮಪತ್ರ ರದ್ದು ಕೋರಿ ಹೈಕೋರ್ಟ್​ಗೆ ಅರ್ಜಿ)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.