ETV Bharat / state

ಮಡಿಕೇರಿಯಲ್ಲಿ ಕಾರು-ಕೆಎಸ್​ಆರ್​ಟಿಸಿ ಬಸ್​ ನಡುವೆ ಅಪಘಾತ: 6 ಜನ ಸಾವು

author img

By

Published : Apr 14, 2023, 4:24 PM IST

Updated : Apr 15, 2023, 7:48 AM IST

ಕಾರು ಹಾಗೂ ರಾಜ್ಯ ಸಾರಿಗೆ ಬಸ್ ನಡುವೆ ಅಪಘಾತ ಸಂಭವಿಸಿ, 6 ಜನರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಡಿಕೇರಿ ತಾಲೂಕಿನ ಸಂಪಾಜೆ ಬಳಿ‌ ಸಂಭವಿಸಿದೆ.

accident-between-car-and-bus-in-madikeri
ಮಡಿಕೇರಿಯಲ್ಲಿ ಕಾರು - ಕೆಎಸ್​ಆರ್​ಟಿಸಿ ಬಸ್​ ನಡುವೆ ಅಪಘಾತ: 6 ಜನ ಸಾವು

ಕಾರು ಬಸ್ ನಡುವೆ ಅಪಘಾತ

ಕೊಡಗು : ಕಾರು ಹಾಗೂ ರಾಜ್ಯ ಸಾರಿಗೆ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ 6 ಜನರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಜಿಲ್ಲೆಯ ಮಡಿಕೇರಿ ತಾಲೂಕಿನ ಸಂಪಾಜೆಯ ಪೆಟ್ರೋಲ್ ಬಂಕ್ ಬಳಿ‌ ಇಂದು (ಶುಕ್ರವಾರ) ಮಧ್ಯಾಹ್ನ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ತೀವ್ರ ಗಾಯಗೊಂಡ ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಮಂಗಳೂರಿನಿಂದ ಮಡಿಕೇರಿಯತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಇದ್ದವರೆಲ್ಲ ಮೂಲತಃ ಮಂಡ್ಯ ಜಿಲ್ಲೆಯವರು ಎಂದು ತಿಳಿದುಬಂದಿದೆ. ಮಳವಳ್ಳಿ ತಾಲೂಕಿನವರಾದ ಕುಮಾರ (35), ಶೀಲಾ (29), ಪ್ರಿಯಾಂಕ (42), ಮಕ್ಕಳಾದ ಮನಸ್ವಿ (8), ಯಶಸ್ ಗೌಡ (12), ಮಿಷಿಕಾ (ಒಂದೂವರೆ ವರ್ಷ) ಮೃತಪಟ್ಟವರು. ಗಂಭೀರ ಗಾಯಗೊಂಡ ಮಂಜುನಾಥ ಎಂಬುವರು ಮಂಗಳೂರು ಆಸ್ಪತ್ರೆ ಹಾಗೂ ಬಿಯಾನ್ ಗೌಡ ಎಂಬುವರನ್ನು ಚಿಕಿತ್ಸೆಗೆ ಕೆವಿಜಿ ಮೆಡಿಕಲ್ ಕಾಲೇಜಿಗೆ ಸೇರಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳ ಮೃತದೇಹಗಳನ್ನು ಕೆವಿಜಿ ಮೆಡಿಕಲ್ ಕಾಲೇಜಿನಲ್ಲಿ ಇರಿಸಲಾಗಿದೆ. ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಒಬ್ಬರು ಪುರುಷ ಹಾಗೂ ಒಂದು ಮಗುವಿನ ಮೃತದೇಹ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಡಗು ಎಸ್‌ಪಿ ರಾಮರಾಜನ್, ಹೆಚ್ಚುವರಿ ಎಸ್‌ಪಿ ಸುಂದರರಾಜನ್ ಅವರು ಘಟನಾ ಸ್ಥಳ ಮತ್ತು ಸುಳ್ಯ ಆಸ್ಪತ್ರೆಗೆ ಭೇಟಿ‌ ನೀಡಿ ಪರಿಶೀಲನೆ‌ ನಡೆಸಿದ್ದಾರೆ. ಈ ಬಗ್ಗೆ ಮಡಿಕೇರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬಾಬಾಸಾಹೇಬ್​ ಅಂಬೇಡ್ಕರ್​ ಮೆರವಣಿಗೆ ವೇಳೆ ವಿದ್ಯುತ್​ ತಗುಲಿ ಇಬ್ಬರು ಸಾವು

Last Updated :Apr 15, 2023, 7:48 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.