ETV Bharat / state

ನಟ ಚೇತನ್ ಹೇಳಿಕೆಗೆ ಖಂಡನೆ: ಮಡಿಕೇರಿಯಲ್ಲಿ ದೂರು ದಾಖಲಿಸಿದ ಯುವ ಸೇನೆ

author img

By

Published : Oct 22, 2022, 9:58 AM IST

ಭೂತಕೋಲ ಕೇವಲ ಹಿಂದೂ ಸಂಸ್ಕೃತಿಗೆ ಸೇರಿಲ್ಲ ಎಂಬ ನಟ ಚೇತನ್ ಹೇಳಿಕೆಗೆ ಖಂಡನೆ ವ್ಯಕ್ತವಾಗುತ್ತಿದ್ದು, ಕೊಡಗು ಯುವಸೇನೆ ಮಡಿಕೇರಿ ಠಾಣೆಯಲ್ಲಿ ದೂರು ದಾಖಲಿಸಿದೆ.

complaint registered against actor chethan
ನಟ ಚೇತನ್ ವಿರುದ್ಧ ದೂರು ದಾಖಲು

ಮಡಿಕೇರಿ: ದೈವಾರಾಧನೆ ಹಿಂದೂ ಸಂಪ್ರದಾಯವಲ್ಲವೆಂದು ಹೇಳಿಕೆ ನೀಡುವ ಮೂಲಕ ನಟ ಚೇತನ್ ಲಕ್ಷಾಂತರ ಭಕ್ತರ ಮನಸ್ಸಿಗೆ ನೋವುಂಟು ಮಾಡಿದ್ದಾರೆ ಮತ್ತು ಸಮಾಜದಲ್ಲಿ ಗೊಂದಲ ಸೃಷ್ಟಿಸಿ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕೊಡಗು ಯುವಸೇನೆ ಮಡಿಕೇರಿ ಠಾಣೆಯಲ್ಲಿ ದೂರು ದಾಖಲಿಸಿದೆ. ಯುವಸೇನೆಯ ಜಿಲ್ಲಾ ಉಪಾಧ್ಯಕ್ಷ ನಡುಮುಟ್ಲು ಪ್ರವೀಣ್ ಅವರು ಡಿವೈಎಸ್‌ಪಿಗೆ ದೂರು ಸಲ್ಲಿಸಿ ಚೇತನ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ನಿರ್ದೇಶಕ, ನಟ ರಿಷಬ್ ಶೆಟ್ಟಿ ನಿರ್ದೇಶನದ ದೈವಾರಾಧನೆಯ ಕಥೆಯಾಧಾರಿತ ಕಾಂತಾರ ಚಿತ್ರ ಹಾದಿ ತಪ್ಪುತ್ತಿರುವ ಯುವ ಜನಾಂಗಕ್ಕೆ ಮಾರ್ಗದರ್ಶನ ಮಾಡುವಲ್ಲಿ ಯಶಸ್ವಿಯಾಗಿದೆ ಮತ್ತು ದೈವಶಕ್ತಿಯನ್ನು ಪ್ರತಿಬಿಂಬಿಸಿದೆ.

ಚಿತ್ರ ಲಕ್ಷಾಂತರ ಭಕ್ತರ ಮನಸೂರೆಗೊಳ್ಳುತ್ತಿರುವ ಹೊತ್ತಿನಲ್ಲೇ ನಟ ಚೇತನ್ ದೈವಾರಾಧನೆಯ ಕುರಿತು ಇಲ್ಲಸಲ್ಲದ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಪ್ರವೀಣ್ ಅಸಮಾಧಾನ ವ್ಯಕ್ತಪಡಿಸಿದರು. ಯವಸೇನೆಯ ಮುಖಂಡ ಕುಲ್ದೀಪ್ ಪೂಣಚ್ಚ ಕೂಡ ಚೇತನ್ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ಇದನ್ನೂ ಓದಿ: ಹಿಂದೂ ಜಾಗರಣ ವೇದಿಕೆ‌ಯಿಂದ ನಟ ಚೇತನ್ ವಿರುದ್ಧ ದೂರು ದಾಖಲು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.