ಕಾಫಿ ತೋಟಗಳಿಗೆ ನುಗ್ಗಿ ದಾಂಧಲೆ ಮಾಡುತ್ತಿದ್ದ ಪುಂಡಾನೆ ಸೆರೆ.. ನಿಟ್ಟುಸಿರು ಬಿಟ್ಟ ಜನ

author img

By

Published : Jun 6, 2022, 7:50 PM IST

Updated : Jun 6, 2022, 8:42 PM IST

elephant-caught-by-forest-men-in-kodagu

ಕಾಫಿತೋಟಗಳಿಗೆ ನುಗ್ಗಿ ಬೆಳೆ ನಾಶ, ಮನುಷ್ಯರ ಮೇಲೆ ದಾಳಿ ‌ಮಾಡುತ್ತಿದ್ದ ಕಾಡಾನೆಯನ್ನು ಕೊಡಗು ಜಿಲ್ಲೆಯ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಸಾಕಾನೆಗಳ ಸಹಾಯದಿಂದ ಕಾಡಾನೆಯನ್ನು ಸೆರೆಹಿಡಿಯಲಾಗಿದ್ದು, ಸ್ಥಳೀಯರು ಕೊಂಚ ನಿಟ್ಟುಸಿರು ಬಿಡುವಂತಾಗಿದೆ.

ಕೊಡಗು : ಕಾಫಿತೋಟಗಳಿಗೆ ನುಗ್ಗಿ ಬೆಳೆ ನಾಶ, ಮನುಷ್ಯರ ಮೇಲೆ ದಾಳಿ ‌ಮಾಡುತ್ತಿದ್ದ ಕಾಡಾನೆಯನ್ನು ಕೊಡಗು ಜಿಲ್ಲೆಯ ಆರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಸಾಕಾನೆಗಳ ಸಹಾಯದಿಂದ ಕಾಡಾನೆಯನ್ನು ಸೆರೆಹಿಡಿಯಲಾಗಿದ್ದು, ಸ್ಥಳೀಯರು ಕೊಂಚ ನಿಟ್ಟುಸಿರು ಬಿಡುವಂತಾಗಿದೆ.

ಜಿಲ್ಲೆಯಲ್ಲಿ ಆನೆ ಮತ್ತು ಮಾನವ ಸಂಘರ್ಷ ಮುಂದುವರೆದಿದ್ದು, ಹಿಂಡು ಹಿಂಡಾಗಿ ರೈತರ ತೋಟ ಗದ್ದೆಗಳಿಗೆ ಲಗ್ಗೆ ಇಡೋ ಕಾಡಾನೆಗಳು ರೈತರು ಬೆಳೆದ ಬೆಳೆಗಳನ್ನು ನಾಶ ಮಾಡುತ್ತಿವೆ. ಕಾಡಾನೆ ಹಾವಳಿಯಿಂದ ಜಿಲ್ಲೆಯ ರೈತರು ಕಂಗಾಲಾಗಿದ್ದು, ಕಾಡಾನೆಗಳನ್ನು ಸೆರೆ ಹಿಡಿಯುವಂತೆ ಒತ್ತಾಯಿಸಿದ್ದರು. ಹೀಗಾಗಿ ಅರಣ್ಯ ಇಲಾಖೆ ಜಿಲ್ಲೆಯಲ್ಲಿ ಒಟ್ಟು 5 ಆನೆಗಳನ್ನು ಹಿಡಿಯಲು ಅನುಮತಿ ನೀಡಿದ್ದು, ಅರಣ್ಯ ಇಲಾಖೆ ಹಗಲು ರಾತ್ರಿ ಎನ್ನದೆ ಆನೆಗಳ ಜಾಡನ್ನು ಪತ್ತೆ ಮಾಡಿ ಸೆರೆ ಹಿಡಿಯುವ ಪ್ರಯತ್ನ ಮಾಡುತ್ತಿದೆ. ಸದ್ಯ 5 ಆನೆಗಳ ಪೈಕಿ ಇದೀಗ 3 ಆನೆಗಳನ್ನು ಸೆರೆ ಹಿಡಿಯಲಾಗಿದ್ದು, ಒಂದು ಆನೆ ಕಾರ್ಯಾಚರಣೆ ವೇಳೆ ಮೃತಪಟ್ಟಿತ್ತು. ಇದೀಗ ಮತ್ತೊಂದು ಕಾಡಾನೆಯನ್ನು ಸಹ ಸೆರೆ ಹಿಡಿಯಲಾಗಿದೆ.

ಕಾಫಿ ತೋಟಗಳಿಗೆ ನುಗ್ಗಿ ದಾಂಧಲೆ ಮಾಡುತ್ತಿದ್ದ ಪುಂಡಾನೆ ಸೆರೆ.. ನಿಟ್ಟುಸಿರು ಬಿಟ್ಟ ಜನ

50ಕ್ಕೂ ಹೆಚ್ಚು ಅರಣ್ಯ ಇಲಾಖೆ ಸಿಬ್ಬಂದಿಯಿಂದ 48 ಗಂಟೆಗಳ ಕಾಲ ಕಾರ್ಯಾಚರಣೆ : ಇಷ್ಟು ದಿನಗಳ ಕಾಲ ಪುಂಡಾಟ ಮಾಡುತ್ತಿದ್ದ, ಸಿದ್ದಾಪುರ ಭಾಗದ ಜನರ ನಿದ್ದೆಗೆಡಿಸಿದ್ದ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಸುಮಾರು 50ಕ್ಕೂ ಹೆಚ್ಚು ಅರಣ್ಯ ಇಲಾಖೆ ಸಿಬ್ಬಂದಿಯ 48 ಗಂಟೆಗಳ ಕಾರ್ಯಾಚರಣೆಯಿಂದ ಸುಮಾರು 22 ವರ್ಷ ಪ್ರಾಯದ ಗಂಡಾನೆಯನ್ನು ಸೆರೆ ಹಿಡಿಯಲಾಗಿದೆ.

ಕಳೆದ ಹಲವು ದಿನಗಳ ಹಿಂದೆ ಬಿಬಿಟಿಸಿ ಕಾಫಿ ಎಸ್ಟೇಟ್ ಕಾವಲುಗಾರನ ಮೇಲೆ ದಾಳಿ ಮಾಡಿದ್ದ ಆನೆ ಆತನನ್ನು ಕೊಂದು ಹಾಕಿತ್ತು. ಹೀಗಾಗಿ ಆನೆಯನ್ನು ಸೆರೆ ಹಿಡಿಯುವಂತೆ ಸ್ಥಳೀಯರಿಂದ ಒತ್ತಾಯ ಕೇಳಿ ಬಂದಿತ್ತು. ಕೊಡಗಿನಲ್ಲಿ ಕಾಡಾನೆಗಳನ್ನು ಹಿಡಿಯಲು ಒಪ್ಪಿಗೆ ಸಿಕ್ಕ ಬೆನ್ನಲ್ಲೇ ಈ ಪುಂಡಾನೆಯನ್ನು ವಿರಾಜಪೇಟೆ ತಾಲೂಕಿನ ಸಿದ್ದಾಪುರದ ಹಾಲಿತೋಪು ಎಸ್ಟೇಟ್ ನಲ್ಲಿ ಹಿಡಿಯಲಾಗಿದೆ.

ಕಾರ್ಯಾಚರಣೆಯಲ್ಲಿ ಮತ್ತಿಗೋಡು ಸಾಕಾನೆ ಶಿಬಿರದ ಅಭಿಮನ್ಯು, ಅರ್ಜುನ, ದುಬಾರೆ ಆನೆ ಶಿಬಿರದ ಅಜಯ, ಧನಂಜಯ, ಪ್ರಶಾಂತ್ ಸಾಕಾನೆಗಳು ಇದ್ದವು. ಸೆರೆ ಸಿಕ್ಕ ಆನೆಯನ್ನು ಕ್ರೇನ್ ಸಹಾಯದಿಂದ ಲಾರಿಗೆ ಹತ್ತಿಸಲಾಗಿದ್ದು, ಬಂಡಿಪುರದ ಮೂಲೆಹೊಳೆ ಅರಣ್ಯಕ್ಕೆ ಬಿಡಲಾಗಿದೆ.

ಓದಿ : ಮಳಲಿ ಮಸೀದಿ ವಿವಾದ: ಮತ್ತೆ ಮೇ 9ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್​​

Last Updated :Jun 6, 2022, 8:42 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.