ETV Bharat / state

ಮಡಿಕೇರಿ: ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ಅಧಿಕಾರಿ

author img

By

Published : Mar 9, 2023, 9:39 PM IST

ಮಡಿಕೇರಿಯ ಸಾಮಾಜಿಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಪೂರ್ಣಿಮಾ ಅವರು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತದ ಬಲೆಗೆ ಬಿದ್ದಿದ್ದಾರೆ.

ಸಾಮಾಜಿಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಪೂರ್ಣಿಮಾ
ಸಾಮಾಜಿಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಪೂರ್ಣಿಮಾ

ಮಡಿಕೇರಿ: 50 ಸಾವಿರ ರೂ ಲಂಚ ಪಡೆಯುತ್ತಿದ್ದ ವೇಳೆ ಅರಣ್ಯ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ಅರಣ್ಯ ಭವನದಲ್ಲಿ ನಡೆದಿದೆ. ಮಡಿಕೇರಿಯ ಸಾಮಾಜಿಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಪೂರ್ಣಿಮಾ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಇದೀಗ ಅವರನ್ನು ಬಂಧಿಸಲಾಗಿದೆ. ತನ್ನ ಅಧೀನದಲ್ಲಿ ಕೆಲಸಮಾಡುತ್ತಿದ್ದ ಅಧಿಕಾರಿಯಿಂದ ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ.

ಹಣದ ಸಮೇತ ಬಂಧಿಸಿದ ಲೋಕಾಯುಕ್ತ ಅಧಿಕಾರಿಗಳು: ಅರಣ್ಯ ಇಲಾಖೆಯಲ್ಲಿ 1.60 ಲಕ್ಷ ರೂ. ಕಾಮಗಾರಿ ಕೆಲಸ ನಡೆಯುತ್ತಿತ್ತು. ಆದರೆ, ಅಧಿಕಾರಿ ಪೂರ್ಣಿಮಾ ಹಣ ಬಿಡುಗಡೆ ಮಾಡದೆ ತೊಂದರೆ ನೀಡುತ್ತಿದ್ದರು. ನಂತರ ಕೆಲಸಮಾಡಿದ ಅಧಿಕಾರಿ ನೇರವಾಗಿ ಪೂರ್ಣಿಮಾ ಅವರ ಬಳಿ ಬಂದು ಹಣ ಕೇಳಿದಾಗ 1 ಲಕ್ಷ ಹಣಕೊಡುವಂತೆ ಬೇಡಿಕೆ ಇಟ್ಟಿದ್ದರು. ಮಾಡಿದ ಕೆಲಸಕ್ಕೆ ಹಣ ಸಿಗಲಿ ಎಂದು ಅಧಿಕಾರಿ ಹಣ ಕೊಡಲು ಒಪ್ಪಿದ್ದು, ಮುಂಗಡ ಹಣವಾಗಿ 50 ಸಾವಿರ ಪಡೆಯುವಾಗ ಮೈಸೂರು ಮತ್ತು ಮಡಿಕೇರಿ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಹಣದ ಸಮೇತ ಬಂಧಿಸಿದ್ದಾರೆ.

ಯಾವುದೇ ಕಾಮಗಾರಿಗಳಿಗೂ ಶೇ60ರಷ್ಟು ಬೇಡಿಕೆ: ಉಪ ಅರಣ್ಯ ಸಂರಕ್ಷಣಾಧಿಕಾರಿ ಪೂರ್ಣಿಮಾ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಪೂರ್ಣಿಮಾ ಅವರು ಮೊದಲಿನಿಂದಲೂ ಲಂಚವನ್ನು ನೇರವಾಗಿ ಕೇಳಿ ಪಡೆಯುತ್ತಿದ್ದರು. ಲಂಚ ಕೊಡದಿದ್ರೆ ಬೆದರಿಕೆ ಹಾಕಿ ಲಂಚ ಪಡೆಯುತ್ತಿದ್ದರು. ಅರಣ್ಯ ಇಲಾಖೆಯಲ್ಲಿ ನಡೆಯುವ ಯಾವುದೇ ಕಾಮಗಾರಿಗಳಿಗೂ ಶೇ60ರಷ್ಟು ಬೇಡಿಕೆ ಇಡುತ್ತಿದ್ದರು ಎಂದು ಇಲಾಖೆಯಲ್ಲಿ‌ ಕೆಲಸ‌ ಮಾಡುವ ಅಧಿಕಾರಿಗಳು ಆರೋಪ‌ ಮಾಡಿದ್ದಾರೆ.

ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ: ಇನ್ನೊಂದೆಡೆ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆಗೆ (ಕೆಎಸ್ ಡಿಎಲ್) ರಾಸಾಯನಿಕ ಖರೀದಿ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಆರೋಪ ಎದುರಿಸುತ್ತಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಕೆ ಮಾಡಾಳ್ ವಿರೂಪಾಕ್ಷಪ್ಪ ಅವರು ಲೋಕಾಯುಕ್ತ ಕಚೇರಿ ಮುಂದೆ ಇಂದು ಹಾಜರಾಗಿದ್ದಾರೆ.

ನಿರೀಕ್ಷಣಾ ಜಾಮೀನು ಪಡೆದು 48 ಗಂಟೆಯೊಳಗೆ‌ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು ಎಂದು ಕೋರ್ಟ್​​ ಆದೇಶಿತ್ತು‌‌. ಅದರಂತೆ ದಾವಣಗೆರೆಯಿಂದ ಬೆಂಗಳೂರಿಗೆ ಬಂದಿದ್ದ ಮಾಡಾಳ್, ತಮ್ಮ ವಕೀಲ ಸಂದೀಪ್ ಪಾಟೀಲ್ ಅವರನ್ನು ಭೇಟಿ ಮಾಡಿ ಲೋಕಾಯುಕ್ತ ಕಚೇರಿಯತ್ತ ತೆರಳಿದ್ದರು. ತಮ್ಮ ವಕೀಲ ಸಂದೀಪ್ ಪಾಟೀಲ್ ಅವರನ್ನು ಭೇಟಿ ಮಾಡಿರುವ ಮಾಡಾಳ್​ ವಿರೂಪಾಕ್ಷಪ್ಪ ಲೋಕಾಯುಕ್ತ ಪೊಲೀಸರ ಪ್ರಶ್ನೆಗಳಿಗೆ ಹೇಗೆ ಉತ್ತರ ನೀಡಬೇಕು ಎಂಬ ಸಲಹೆ ಪಡೆದುಕೊಂಡಿದ್ದಾರೆ‌.

ಈ ವೇಳೆ ಮಾಧ್ಯಮಗಳೊಂದಿಗೆ ಚುಟುಕಾಗಿ ಪ್ರತಿಕ್ರಿಯಿಸಿದ ಮಾಡಾಳ್ ನಾನು ಹಾರ್ಟ್ ಪೇಶೆಂಟ್, ನನಗೆ ತೊಂದರೆ ಕೊಡಬೇಡಿ.. ಲೋಕಾಯುಕ್ತ ಕಚೇರಿಗೆ ಹಾಜರಾಗುತ್ತೇನೆ ಎಂದಷ್ಟೇ ಹೇಳಿ ನಿರ್ಗಮಿಸಿದರು.

ನಿನ್ನೆಯಷ್ಟೇ ಇನ್ಸ್​ಪೆಕ್ಟರ್​ ಮಹದೇವಯ್ಯ ನೇತೃತ್ವದ ಅಧಿಕಾರಿಗಳ ತಂಡವು ಮಾಡಾಳ್ ವಿರುಪಾಕ್ಷಪ್ಪ ನಿವಾಸಕ್ಕೆ ಬಂದು ಪರಿಶೀಲನೆ ನಡೆಸುತಿತ್ತು. ಲಂಚ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾತಿಗಳ ಬಗ್ಗೆ ಶೋಧಕಾರ್ಯ ಕೈಗೊಂಡಿದ್ದರು. ದಾಳಿ ವೇಳೆ, ಸಿಕ್ಕಿದ್ದ ದಾಖಲಾತಿಗಳಿಗೆ ಸಂಬಂಧಿಸಿದಂತೆ ಪೂರಕ ಹೆಚ್ಚುವರಿ ದಾಖಲಾತಿ ಹಾಗೂ ಸಾಕ್ಷ್ಯಾಧಾರಗಳ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ. ಮತ್ತೊಂದೆಡೆ‌ ಕೆಎಸ್​ಡಿಎಲ್​ಗೂ ಭೇಟಿ ನೀಡಿದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು.

ಇದನ್ನೂ ಓದಿ : ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.