ETV Bharat / state

ಕೊಡಗಿನಲ್ಲಿ 4 ದಿನ ಭಾರಿ ಮಳೆ ಸಾಧ್ಯತೆ: ಜಿಲ್ಲಾಡಳಿತದಿಂದ ಆರೆಂಜ್, ರೆಡ್ ಅಲರ್ಟ್ ಘೋಷಣೆ

author img

By

Published : Jul 9, 2021, 7:41 PM IST

heavy-rain-in-kodagu
ಕೊಡಗು ಜಿಲ್ಲೆಯಲ್ಲಿ ಬಾರೀ ಮಳೆ

ಕೊಡಗು ಜಿಲ್ಲೆಯಲ್ಲಿ ಜು. 9 ಮತ್ತು 10 ರಂದು ಆರೆಂಜ್ ಅಲರ್ಟ್, 11ರಿಂದ 13ರವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕೊಡಗು: ಜಿಲ್ಲೆಯಲ್ಲಿ ಮೂರು ದಿನಗಳಿಂದ ಸಾಧಾರಣ ಮಳೆಯಾಗುತ್ತಿದ್ದು, ಮುಂದಿನ 4 ದಿನ ಭಾರೀ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಆರೆಂಜ್, ರೆಡ್ ಅಲರ್ಟ್ ಅ​ನ್ನು ಜಿಲ್ಲಾಡಳಿತ ಘೋಷಣೆ ಮಾಡಿದೆ.

ಜು.9 ಮತ್ತು 10 ರಂದು ಆರೆಂಜ್ ಅಲರ್ಟ್‌, 11ರಿಂದ 13ರವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕಳೆದ ಮೂರು ವರ್ಷಗಳಲ್ಲಿ ಸಂಭವಿಸಿದ ಜಲಪ್ರಳಯದಿಂದ ಬೆಚ್ಚಿರುವ ಜನರಲ್ಲಿ‌ ಮತ್ತೆ ಆತಂಕ ಶುರುವಾಗಿದೆ. ಈಗಾಗಲೇ ಅಪಾಯದ ಸ್ಥಳದಲ್ಲಿರುವ ಜನರು, ಬೆಟ್ಟ-ಗುಡ್ಡಗಳಲ್ಲಿ ವಾಸ ಮಾಡುತ್ತಿರುವ ಜನರು ನದಿ ಅಂಚಿನಲ್ಲಿರುವ ಜನರನ್ನು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಆದೇಶ ಮಾಡಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಮಳೆ

ಜಿಲ್ಲೆಯಲ್ಲಿ ಅನಾಹುತ ಸಂಭವಿಸಿದಂತೆ ಎಚ್ಚರವಹಿಸಲು ಎನ್‌ಡಿಆರ್‌ಎಫ್ ತಂಡವನ್ನು ನಿಯೋಜನೆ ಮಾಡಲಾಗಿದೆ. ಈಗಾಗಲೇ ಸುರಿಯುತ್ತಿರುವ ಮಳೆಯಿಂದ ಕಾವೇರಿ ನೀರಿನ ಮಟ್ಟ ಏರಿಕೆಯಾಗಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಹಾರಂಗಿ ನೀರಿನ ಮಟ್ಟ ಏರಿಕೆಯಾಗಿದ್ದು, ಜನ ಆತಂಕದಲ್ಲಿ ಜೀವನ ಕಳೆಯುತ್ತಿದ್ದಾರೆ.

ಇದನ್ನೂ ಓದಿ: ಅಧಿಕಾರಿಗಳ ಸಹಕಾರ ಇಲ್ಲದೆ ಅಕ್ರಮ ಗಣಿಗಾರಿಕೆ ಸಾಧ್ಯವಿಲ್ಲ: ಸಚಿವ ಕೆ.ಸಿ.ನಾರಾಯಣ ಗೌಡ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.