ETV Bharat / state

ಕೊಡಗಿನಲ್ಲಿ ಭರ್ಜರಿ ಮಳೆ ಸಂಭವ: ಸೂಕ್ಷ್ಮ ಪ್ರದೇಶಗಳ ನಿವಾಸಿಗಳಿಗೆ ಜಿಲ್ಲಾಡಳಿತ ಎಚ್ಚರಿಕೆ

author img

By

Published : Jun 20, 2021, 11:26 AM IST

ಈ ಬಾರಿಯ ಮಳೆಗಾಲ ಎದುರಿಸಲು ಕೊಡಗು ಜಿಲ್ಲಾಡಳಿತ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದೆ. ಜಿಲ್ಲೆಯ 47 ಪ್ರದೇಶಗಳನ್ನು ಪ್ರವಾಹ ಸಂಭವಿಸಬಹುದಾದ ಸೂಕ್ಷ್ಮ ಪ್ರದೇಶಗಳೆಂದು ಜಿಲ್ಲಾಡಳಿತ ಗುರುತಿಸಿದೆ.

Heavy rains District administration notice to evacuate to safe place in Kodagu district
ಕೊಡಗು ಜಿಲ್ಲೆಯಲ್ಲಿ ವರುಣಾರ್ಭಟ

ಕೊಡಗು: ಕಳೆದ ಮೂರ್ನಾಲ್ಕು ವರ್ಷದಿಂದ ಜಿಲ್ಲೆಯಲ್ಲಿ ಉಂಟಾಗುತ್ತಿರುವ ಪ್ರಕೃತಿ ವಿಕೋಪದಿಂದಾಗಿ ಜನತೆ ಭಯದ ವಾತಾವರಣದಲ್ಲೇ ಮಳೆಗಾಲ ಕಳೆಯುವಂತಾಗಿದೆ.

ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಜಿಲ್ಲಾಡಳಿತ ಸೂಚನೆ

ಮಳೆಗಾಲದಲ್ಲಿ ಸಾಕಷ್ಟು ಅನಾಹುತಗಳು ಸಂಭವಿಸುವುದರಿಂದ ಜಿಲ್ಲೆಯ 47 ಪ್ರದೇಶಗಳಲ್ಲಿ ಪ್ರವಾಹ ಸಂಭವಿಸಬಹುದಾದ ಸೂಕ್ಷ್ಮ ಪ್ರದೇಶಗಳು ಎಂದು ಜಿಲ್ಲಾಡಳಿತ ಗುರುತಿಸಿದೆ. ಇದಲ್ಲದೆ ಮೂರು ತಾಲ್ಲೂಕುಗಳ 85 ಪ್ರದೇಶಗಳಲ್ಲಿ ಭೂಕುಸಿತ ಆಗುವ ಸಾಧ್ಯತೆಯೂ ಇದೆ ಎನ್ನುವ ಮಾಹಿತಿ ಇದೆ. ಇದಕ್ಕಾಗಿ ಜಿಲ್ಲೆಯ 77 ಕಡೆಗಳಲ್ಲಿ ಕಾಳಜಿ ಕೇಂದ್ರಗಳನ್ನು ಸ್ಥಾಪನೆ ಮಾಡಲು ಯೋಜನೆ ರೂಪಿಸಲಾಗಿದೆ.

ಇದರ ಜೊತೆಗೆ ಸೂಕ್ಷ್ಮ ಪ್ರದೇಶಗಳಲ್ಲಿ ವಾಸವಿರುವ ಎರಡು ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವಂತೆ ಸೂಚನೆ ನೀಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.