ETV Bharat / state

ಕೊಡಗಿನಲ್ಲಿ ಇಂದು-ನಾಳೆ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ

author img

By

Published : May 14, 2021, 6:39 AM IST

kodagu
ಕೊಡಗಿನಲ್ಲಿ ಇಂದು-ನಾಳೆ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ

ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಬೀಸುತ್ತಿದ್ದು ಕೊಡಗು ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೊಡಗು: ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಜಡಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜಿಲ್ಲೆಯಲ್ಲಿ ಇಂದು 64 ಮಿ.ಮೀ ಹಾಗು ನಾಳೆ 115 ಮಿ.ಮೀ ಗಿಂತ ಹೆಚ್ಚು ಮಳೆಯಾಗಲಿದೆ. ಮಳೆಯಿಂದ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪ ಎದುರಿಸಲು ಜಿಲ್ಲಾಡಳಿತ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಅಪಾಯದ ಸ್ಥಳಗಳನ್ನು ಗುರುತಿಸಿ, ಅಲ್ಲಿ ವಾಸಿಸುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.

ಅತಿ ಹೆಚ್ಚು ಮಳೆ ಬೀಳುವ ಭಾಗಮಂಡಲ ಗ್ರಾ.ಪಂ ವ್ಯಾಪ್ತಿಯ ಕೊರಂಗಾಲ ಹಾಗೂ ಚೇರಂಗಾಲ ಗ್ರಾಮಗಳ ಜನರು ಮಳೆಯಾಗುವ ಈ 2 ದಿನಗಳ ಕಾಲ ಎಚ್ಚರಿಕೆಯಿಂದಿರಲು ತಿಳಿಸಲಾಗಿದೆ. ವಿರಾಜಪೇಟೆ ನಗರದ ಅಯ್ಯಪ್ಪಬೆಟ್ಟ, ನೆಹರು ನಗರ, ಅರಸುನಗರ ಹಾಗು ಮಲೇತಿರಿಕೆ ಬೆಟ್ಟದ ನಿವಾಸಿಗಳು ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಪಟ್ಟಣ ಪಂಚಾಯಿತಿಯಿಂದಲೂ ನೋಟಿಸ್ ನೀಡಲಾಗಿದೆ.

ಇದನ್ನೂ ಓದಿ: ಮಾನವೀಯತೆ ಬತ್ತಿಹೋದ ಕಾಲದಲ್ಲಿ... ಲಾಠಿ ಹಿಡಿಯುವ ಕೈಯಲ್ಲಿ ಹಸಿದವರಿಗೆ ಅನ್ನ ವಿತರಣೆ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.