ETV Bharat / state

ರಾಜ್ಯದಲ್ಲಿ ಅಕ್ಟೋಬರ್ ತಿಂಗಳಿನಿಂದ ಮತ್ತೆ ಯಶಸ್ವಿನಿ ಯೋಜನೆ ಜಾರಿಗೆ ಚಿಂತನೆ

author img

By

Published : Jun 28, 2022, 8:54 AM IST

ರಾಜ್ಯದಲ್ಲಿ ಸುಮಾರು 9 ಲಕ್ಷ ಮಹಿಳಾ ಹಾಲು ಉತ್ಪಾದಕರು ಸೇರಿದಂತೆ ಒಟ್ಟು 26 ಲಕ್ಷ ಹಾಲು ಉತ್ಪಾದಕರಿಗೆ ಸುಗಮವಾಗಿ ಸಾಲ ಸೌಲಭ್ಯ ದೊರೆಯುವಂತಾಗಲು ಅಗತ್ಯ ಕ್ರಮವಹಿಸಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

The centenary ceremony of Kushalanagar Co-operative Society was held
ಕುಶಾಲನಗರ ಸಹಕಾರ ಸಂಘದ ಶತಮಾನೋತ್ಸವ ಸಮಾರಂಭ ನಡೆಯಿತು.

ಮಡಿಕೇರಿ: ರಾಜ್ಯದಲ್ಲಿ ಅಕ್ಟೋಬರ್ ತಿಂಗಳಿನಿಂದ ಮತ್ತೆ ಯಶಸ್ವಿನಿ ಯೋಜನೆ ಜಾರಿಗೆ ಚಿಂತಿಸಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ತಿಳಿಸಿದ್ದಾರೆ. ಕುಶಾಲನಗರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ರೈತ ಸಹಕಾರ ಭವನದಲ್ಲಿ ಸೋಮವಾರ ನಡೆದ ‘ಕುಶಾಲನಗರ ಸಹಕಾರ ಸಂಘದ ಶತಮಾನೋತ್ಸವ’ ಸಮಾರಂಭ ಹಾಗೂ ನೂತನ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಮಾದರಿಯಲ್ಲಿ ಕೆಲವು ಬದಲಾವಣೆಗಳೊಂದಿಗೆ ಸುಲಭ ವ್ಯವಸ್ಥೆಯಲ್ಲಿ ಆರೋಗ್ಯ ವಿಮಾ ಯೋಜನೆಯನ್ನು ಜಾರಿಗೆ ತರಲು ಯೋಚಿಸಲಾಗಿದೆ. ರಾಜ್ಯದಲ್ಲಿ ಸುಮಾರು 9 ಲಕ್ಷ ಮಹಿಳಾ ಹಾಲು ಉತ್ಪಾದಕರು ಸೇರಿದಂತೆ ಒಟ್ಟು 26 ಲಕ್ಷ ಹಾಲು ಉತ್ಪಾದಕರಿಗೆ ಸುಗಮವಾಗಿ ಸಾಲ ಸೌಲಭ್ಯ ದೊರೆಯುವಂತಾಗಲು ಅಗತ್ಯ ಕ್ರಮವಹಿಸಲಾಗಿದೆ ಎಂದರು.

ರಾಜ್ಯದಲ್ಲಿ 6 ಸಾವಿರ ಕೋಟಿ ರೂ. ಗೂ ಹೆಚ್ಚು ಸಾಲ ಮನ್ನಾ ಮಾಡಲಾಗಿದೆ. ಇನ್ನೂ 31 ಸಾವಿರ ರೈತರ ಸಾಲ ಮನ್ನಾಕ್ಕೆ ಬಾಕಿ ಇದ್ದು, ಈ ಸಂಬಂಧ ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗಿದೆ. ರಾಜ್ಯದಲ್ಲಿ 21 ಡಿಸಿಸಿ ಬ್ಯಾಂಕ್‍ಗಳು ಇದ್ದು, 5,477 ಪ್ಯಾಕ್ಸ್ ಸಹಕಾರ ಸಂಘಗಳು ಇವೆ. ಎಲ್ಲ ಸಹಕಾರ ಸಂಘಗಳು ಉತ್ತಮವಾಗಿ ನಡೆಯುತ್ತಿದ್ದು, ಶೇ.99 ರಷ್ಟು ಸಾಲ ಮರುಪಾವತಿ ಮಾಡಲಾಗುತ್ತಿದೆ ಎಂದರು.

3 ಲಕ್ಷ ಹೊಸ ರೈತರಿಗೆ ಸಾಲ ನೀಡಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಆ ನಿಟ್ಟಿನಲ್ಲಿ ಮುಖ್ಯಮಂತ್ರಿ ಅವರು ಬಜೆಟ್​ನಲ್ಲಿ ಪ್ರಕಟಿಸಿದ್ದಾರೆ. ಸ್ವಸಹಾಯ ಗುಂಪುಗಳಿಗೆ ಹಾಗೂ ಇತರರಿಗೆ ಸಾಲ ನೀಡಲಾಗುತ್ತದೆ ಎಂದು ಸಹಕಾರ ಸಚಿವರು ಹೇಳಿದರು.

ಇದನ್ನೂ ಓದಿ : ಜಿ-20 ಸಭೆ ಆಯೋಜನೆಗೆ ರಾಜ್ಯದಿಂದ ಅಗತ್ಯ ಸಹಕಾರ : ಬಸವರಾಜ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.