ಕೊಪ್ಪಳ: ರಾಜಕಾರಣಿಗಳಿಗೊಂದು, ಜನಸಾಮಾನ್ಯರಿಗೊಂದು ನಿಯಮವೇಕೆ?

author img

By

Published : Aug 20, 2021, 7:22 AM IST

ಕೇಂದ್ರ ಸಚಿವ ಭಗವಂತ ಖೂಬಾ

ಕೊರೊನಾ ಭೀತಿ ಹಿನ್ನೆಲೆಯಲ್ಲಿ ಆಗಸ್ಟ್ 31ರವರೆಗೂ ಜನಸಾಮಾನ್ಯರು ಹುಲಿಗೆಮ್ಮ ದೇವಿ ದೇವಾಲಯಕ್ಕೆ ಆಗಮಿಸುವುದನ್ನು ನಿಷೇಧಿಸಲಾಗಿದೆ. ಆದರೂ ಸಹ ಕೇಂದ್ರ ಸಚಿವ ಭಗವಂತ ಖೂಬಾ ಸೇರಿದಂತೆ ಸಂಸದರು, ರಾಜಕಾರಣಿಗಳು ನಿನ್ನೆ ದೇವಿಯ ದರ್ಶನ ಪಡೆದುಕೊಂಡರು.

ಕೊಪ್ಪಳ: ಕೋವಿಡ್​ ಮುನ್ನೆಚ್ಚರಿಕೆ ಕ್ರಮವಾಗಿ ಇಲ್ಲಿನ ಹುಲಿಗೆಮ್ಮ ದೇವಿ ದೇವಸ್ಥಾನವನ್ನು ಬಂದ್ ಮಾಡಲಾಗಿದೆ. ಆದರೆ ದೇಗುಲದ ಆಡಳಿತ ಮಂಡಳಿ ನಿನ್ನೆ ಜನಪ್ರತಿನಿಧಿಗಳಿಗೆ ಮಾತ್ರ ದೇವಿಯ ದರ್ಶನಕ್ಕೆ ಅವಕಾಶ ಮಾಡಿಕೊಟ್ಟಿರುವುದನ್ನು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

ಕೊರೊನಾ ಕಾರಣದಿಂದ ಆಗಸ್ಟ್ 31 ರವರೆಗೂ ಜನಸಾಮಾನ್ಯರು ದೇವಾಲಯಕ್ಕೆ ಆಗಮಿಸುವುದನ್ನು ನಿಷೇಧಿಸಿ, ಆಡಳಿತ ಮಂಡಳಿ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ದೇವಸ್ಥಾನದ ಸುತ್ತ 2 ಕಿಲೋ ಮೀಟರ್ ದೂರದವರೆಗೂ ನಿಷೇಧಾಜ್ಞೆ ಜಾರಿಯಲ್ಲಿದೆ. ಆದರೂ ಸಹ ಕೇಂದ್ರ ಸಚಿವ ಭಗವಂತ ಖೂಬಾ ಸೇರಿದಂತೆ ಸಂಸದರು, ರಾಜಕಾರಣಿಗಳು ನಿನ್ನೆ ಹುಲಿಗಿಯ ಹುಲಿಗೆಮ್ಮ ದೇವಿಯ ದರ್ಶನ ಪಡೆದುಕೊಂಡರು.

ಹುಲಿಗೆಮ್ಮ ದೇವಿ ದೇವಾಲಯಕ್ಕೆ ಆಗಮಿಸಿದ ಬಿಜೆಪಿ ಕಾರ್ಯಕರ್ತರ ದಂಡು

ಜನಸಾಮಾನ್ಯರಿಗೆ ದೇವಿ ದರ್ಶನಕ್ಕೆ ಆವಕಾಶ ನೀಡದ ಆಡಳಿತ ಮಂಡಳಿ, ರಾಜಕಾರಣಿಗಳಿಗೆ ಅವಕಾಶ ಮಾಡಿಕೊಟ್ಟಿದ್ದು ಹೇಗೆ?. ಸಾಮಾನ್ಯ ಜನರಿಗೊಂದು ಕಾನೂನು, ರಾಜಕಾರಣಿಗಳಿಗೊಂದು ಕಾನೂನು ಏಕೆ ಎಂದು ಸಾರ್ವಜನಿಕರು ಕೇಳುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.