ETV Bharat / state

ಕೋಲಾರ: ಕೆಎಸ್​ಆರ್​ಟಿಸಿ ಬಸ್ ಕಂಡಕ್ಟರ್ ಆತ್ಮಹತ್ಯೆಗೆ ಶರಣು..

author img

By

Published : Jul 21, 2023, 7:45 PM IST

crime-ksrtc-bus-conductor-commits-suicide-in-kolar
ಕೋಲಾರ: ಕೆಎಸ್​ಆರ್​ಟಿಸಿ ಬಸ್ ಕಂಡಕ್ಟರ್ ಆತ್ಮಹತ್ಯೆಗೆ ಶರಣು..

ಪೆರಾಲಿಸಿಸ್ ಕಾಯಿಲೆಯಿಂದ ಬಳಲುತ್ತಿದ್ದ ಕೆಎಸ್​ಆರ್​ಟಿಸಿ ಬಸ್ ಕಂಡಕ್ಟರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಕೋಲಾರ: ಮಂಡ್ಯದಲ್ಲಿ ಇತ್ತೀಚೆಗೆ ಕೆಲ ಕಾರಣಗಳಿಂದ ಮನನೊಂದು ಸಿಬ್ಬಂದಿಯೊಬ್ಬರು ಆತ್ಮಹತ್ಯೆ ಯತ್ನ ಮಾಡಿದ್ದರು. ಇದು ರಾಜ್ಯಾದ್ಯಂತ ಸದ್ದು ಮಾಡಿತ್ತು. ಆ ಪ್ರಕರಣ ಮಾಸುವ ಮುನ್ನವೇ ಕೋಲಾರದ ಶ್ರೀನಿವಾಸಪುರದಲ್ಲಿ ಆತ್ಮಹತ್ಯೆ ಪ್ರಕರಣವೊಂದು ವರದಿ ಆಗಿದೆ. ಕೆಎಸ್​ಆರ್​ಟಿಸಿ ಬಸ್ ಕಂಡಕ್ಟರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಉಪ್ಪುಕುಂಟೆ ಗ್ರಾಮದಿಂದ ವರದಿ ಆಗಿದೆ. ಉಪ್ಪುಕುಂಟೆ ಗ್ರಾಮದ ಸೋಮಾಚಾರಿ ಆತ್ಮಹತ್ಯೆ ಮಾಡಿಕೊಂಡ ಬಸ್ ಕಂಡಕ್ಟರ್ ಎಂದು ಗುರುತಿಸಲಾಗಿದೆ.

ಮೃತ ಕಂಡಕ್ಟರ್​ ಇತ್ತೀಚೆಗೆ ಪ್ಯಾರಾಲಿಸಸ್​ ಕಾಯಿಲೆಗೆ ತುತ್ತಾಗಿದ್ದರು. ಚಿಕಿತ್ಸೆ ಪಡೆದು ಗುಣಮುಖರಾದ ಮೇಲೆ ಅವರನ್ನು ಶ್ರೀನಿವಾಸಪುರ ಡಿಪೋದಲ್ಲಿಯೇ ಕೆಲಸಕ್ಕೆ ನಿಯೋಜನೆ ಮಾಡಲಾಗಿತ್ತು. ಆದರೆ ಕಂಡೆಕ್ಟರ್​​ ಸೋಮಾಚಾರಿ ಇಂದು ಬೆಳಗ್ಗೆ ಅವರ ತೋಟದಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಾವಿನ ಕಾರಣಗಳ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಅವರ ತನಿಖೆ ಬಳಿಕವೇ ಆತ್ಮಹತ್ಯೆಗೆ ಕಾರಣ ಏನು ಎಂಬುದಕ್ಕೆ ಸ್ಪಷ್ಟ ಕಾರಣ ತಿಳಿದು ಬರಲಿದೆ.

ಅವಮಾನ ತಾಳಲಾರದೇ ವಿದ್ಯಾರ್ಥಿ ಆತ್ಮಹತ್ಯೆ: ಜೂ.17ರಂದು ಪರೀಕ್ಷೆ ವೇಳೆ ನಕಲು ಮಾಡಲು ಹೋಗಿ ಶಿಕ್ಷಕರ ಕೈಗೆ ಸಿಕ್ಕಿಬಿದ್ದಿದ್ದರಿಂದ ಅವಮಾನ ತಾಳಲಾರದೇ ವಿದ್ಯಾರ್ಥಿಯೊಬ್ಬ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. ಖಾಸಗಿ ಕಾಲೇಜಿನಲ್ಲಿ 2ನೇ ಸೆಮಿಸ್ಟರ್ ಓದುತ್ತಿದ್ದ ಆದಿತ್ಯ ಪ್ರಭು ಪರೀಕ್ಷೆ ವೇಳೆ ನಕಲು ಮಾಡಲು ಹೋಗಿ ಶಿಕ್ಷಕರ ಕೈಗೆ ಸಿಕ್ಕಿಬಿದ್ದಿದ್ದ. ಇದರಿಂದ ನೊಂದ ಆದಿತ್ಯ ಪ್ರಭು ಪೋಷಕರಿಗೆ ಹಾಗೂ ಸ್ನೇಹಿತರಿಗೆ ಗೊತ್ತಾದರೆ ಮಾರ್ಯಾದೆ ಹೋಗಲಿದೆ ಎಂದು ಭಾವಿಸಿ ಕೊಠಡಿಯಿಂದ ಹೊರ ಬಂದು ಕಾಲೇಜು ಕಟ್ಟಡದ 8ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದ.

ಇತ್ತೀಚಿಗೆ ಆತ್ಮಹತ್ಯೆಗೆ ಶರಣಾಗಿದ್ದ ಪೊಲೀಸ್ ಕಾನ್ಸ್‌ಸ್ಟೇಬಲ್: ಮತ್ತೊಂದೆಡೆ, ಜೂ.13ರಂದು ಪೊಲೀಸ್ ಕಾನ್ಸಸ್ಟೇಬಲ್​ ಒಬ್ಬರು ಆತ್ಮಹತ್ಯೆಗೆ ಶರಣಾಗಿದ್ದ ಘಟನೆ ಹುಬ್ಬಳ್ಳಿಯ ಬೆಂಡಿಗೇರಿಯ ದೊಡ್ಡಮನಿ ಕಾಲೋನಿಯಲ್ಲಿ ನಡೆದಿತ್ತು. ಮಲ್ಲಿಕಾರ್ಜುನ ರುದ್ರಾಪೂರ್ (30) ಸಾವಿಗೀಡಾಗಿದ್ದರು. ಇವರು ಬೆಳಗಾವಿಯ ಸಂಗೊಳ್ಳಿ ಗ್ರಾಮದ ನಿವಾಸಿಯಾಗಿದ್ದು, ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ವಾಸದ ಮನೆಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ಘಟನೆಗೆ ಕಾರಣ ತಿಳಿದುಬಂದಿಲ್ಲ. ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಪತಿಯನ್ನು ಪ್ರಿಯಕರನಿಂದ ಕೊಲ್ಲಿಸಿ ಮಿಸ್ಸಿಂಗ್ ಕೇಸು ದಾಖಲಿಸಿದ ಪತ್ನಿ, ಇಬ್ಬರ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.