ETV Bharat / state

ಮುಂದಿನ ಡಿಸೆಂಬರ್ - ಜನವರಿಯಲ್ಲಿ ಕಾಂಗ್ರೆಸ್​ ಸರ್ಕಾರ ಪತನ ಖಚಿತ: ಸಂಸದ ಮುನಿಸ್ವಾಮಿ ಭವಿಷ್ಯ

author img

By

Published : Jul 15, 2023, 9:03 PM IST

MP Muniswamy spoke to reporters.
ಸುದ್ದಿಗಾರರೊಂದಿಗೆ ಸಂಸದ ಮುನಿಸ್ವಾಮಿ ಮಾತನಾಡಿದರು.

ಕಾಂಗ್ರೆಸ್ ಸರ್ಕಾರ ವಿರುದ್ಧ ಸಂಸದ ಎಸ್ ಮುನಿಸ್ವಾಮಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರ ವಾಗ್ದಾಳಿ ನಡೆಸಿದರು.

ಸುದ್ದಿಗಾರರೊಂದಿಗೆ ಸಂಸದ ಮುನಿಸ್ವಾಮಿ ಮಾತನಾಡಿದರು.

ಕೋಲಾರ: ಕಾಂಗ್ರೆಸ್​ ಸರ್ಕಾರಕ್ಕೆ ಆಯುಷ್ಯ ಇಲ್ಲ. ಮುಂದಿನ ಡಿಸೆಂಬರ್, ಜನವರಿಗೆ ಸರ್ಕಾರ ಬೀಳುವುದು ಖಚಿತ ಎಂದು ಸಂಸದ ಎಸ್.ಮುನಿಸ್ವಾಮಿ ಭವಿಷ್ಯ ನುಡಿದರು. ಕೋಲಾರದ ಮಾಲೂರಲ್ಲಿ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡಿದ್ದ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಎಂ ಬಿ ಪಾಟೀಲ್, ದೇಶಪಾಂಡೆ, ಮಹಾದೇವಪ್ಪ, ಜಮೀರ್ ಅವರು ಐದು ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಇರುತ್ತಾರೆ ಎಂದು ಹೇಳುತ್ತಿದ್ದು, ಅಧಿಕಾರಕ್ಕಾಗಿ ಕದನ ಸೃಷ್ಟಿಯಾಗಿ ಈ ಸರ್ಕಾರಕ್ಕೆ ಭವಿಷ್ಯವಿಲ್ಲ. ಮುಂದೆ ಎಂದಿಗೂ ಬಿಜೆಪಿ ಪಕ್ಷವೂ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ. ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಭವಿಷ್ಯ ಇಲ್ಲ ಎನ್ನುವುದು ಕಾಂಗ್ರೆಸ್ ನಾಯಕರಿಗೆ ​​ಗೊತ್ತಿದೆ ಎಂದು ಹೇಳಿದರು

ಕಾಂಗ್ರೆಸ್​​ನಲ್ಲಿ ಎರಡು ಮೂರು ಗುಂಪುಗಳಾಗಿವೆ. ಬಿಜೆಪಿ ಕಡೆ ಅವರೆಲ್ಲರೂ ಎದುರು ನೋಡುತ್ತಿದ್ದಾರೆ. ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ಇನ್ನು ಎನ್‌ಡಿಎ ಪಕ್ಷಗಳ ಸಭೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಜನ ಕೊಟ್ಟಿರುವ ಯೋಜನೆಗಳನ್ನು ನೋಡಿ ಹಲವಾರು ಪಕ್ಷಗಳು ಬೆಂಬಲ ನೀಡುತ್ತಿವೆ. ಕಾನೂನು ಸಿವಿಲ್ ಕೋಡ್ ಬಗ್ಗೆ ಆಮ್​ - ಆದ್ಮಿ ಪಕ್ಷ ಸಹ ಬೆಂಬಲ ವ್ಯಕ್ತಪಡಿಸಿದೆ ಎಂದು ಸಮರ್ಥನೆ ಮಾಡಿಕೊಂಡರು. ಮಹಾರಾಷ್ಟ್ರ, ಬಿಹಾರ, ಗೋವಾ ರಾಜ್ಯಗಳಲ್ಲಿ ಸಹ ಅನೇಕ ಪಕ್ಷಗಳು ಎನ್‌ಡಿಎ ಜೊತೆ ಸೇರಿಕೊಂಡಿವೆ. ಬಿಜೆಪಿ ಪಕ್ಷದ ಅಭಿವೃದ್ದಿ ಕಾರ್ಯಗಳನ್ನು ನೋಡಿ ಹಲವಾರು ಪಕ್ಷಗಳು ಮನ ಸೋತಿವೆ. ಮತ್ತೆ ಮುಂದಿನ ದಿನಗಳಲ್ಲಿ ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ವಿರುದ್ಧ ಕೇಂದ್ರ ಸಚಿವ ಕರಂದ್ಲಾಜೆ ವಾಗ್ದಾಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದರು. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಬಂದ ಮೇಲೆ ರಾಜ್ಯಾದ್ಯಂತ ಕೊಲೆಯಾಗುತ್ತಿದೆ. ಕಾಂಗ್ರೆಸ್ ನೇತೃತ್ವ, ಕೃಪಾ ಕಟಾಕ್ಷದಲ್ಲಿ ರಾಜ್ಯದಲ್ಲಿ ಕೊಲೆಯಾಗುತ್ತಿದೆ. ದಿಗಂಬರ ಜೈನ ಮುನಿ ಕೊಲೆ, ಬೆಂಗಳೂರಲ್ಲಿ ಹಾಡಹಗಲೇ ಟೆಕ್ಕಿ ಸಾಯ್ತಾರೆ. ಉಳ್ಳಾಲದಲ್ಲಿ ನಮ್ಮ ಕಾರ್ಯಕರ್ತನ ಶವ ನೀರಲ್ಲಿ ಸಿಗುತ್ತೆ. ಹನುಮ ಜಯಂತಿ ಯಶಸ್ವಿ ಯಾಗಿದ್ದಕ್ಕೆ ವೇಣು ಗೋಪಾಲ್ ಕೊಲೆಯಾಗಿದೆ. ಎರಡೇ ತಿಂಗಳಿಗೆ ಸರ್ಕಾರ ನೈತಿಕತೆ ಕಳೆದು ಕೊಂಡಿದೆ ಎಂದು ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಗ್ಯಾರಂಟಿ ಎಲ್ಲೋದ್ವು, ಮೊದಲ ಕ್ಯಾಬಿನೆಟ್​​ನಲ್ಲೇ ಗ್ಯಾರಂಟಿ ಎಂದಿದ್ರಿ. ನಿಮ್ಮ ಮೊದಲ ಕ್ಯಾಬಿನೇಟ್ ಯಾವಾಗ, ಮೊದಲು ಅದನ್ನ ಹೇಳಿ. A4 ಅಪರಾಧಿಯನ್ನು A1 ಮಾಡ್ತಾರೆ, A1 ಅಪರಾಧಿಯನ್ನು ರಕ್ಷಣೆ ಮಾಡ್ತಾರೆ. ಇಂದು ಇಂದಿನ ಕಾಂಗ್ರೆಸ್ ಸರ್ಕಾರದ ನೀತಿ ರಾಜಕೀಯ. 136 ಸೀಟ್ ಗೆದ್ದಿದ್ದೇವೆಂದು ದರ್ಪದಿಂದಿದ್ದಾರೆ. ಮುಂದೆ ಜನ ಪಾಠ ಕಲಿಸ್ತಾರೆ ಎಂದು ತಿರುಗೇಟು ನೀಡಿದರು.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ, ವಿಪಕ್ಷ ನಾಯಕರ ಆಯ್ಕೆಗೆ ಸಂಬಂಧಿಸಿದಂತೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಲು ಶೋಭಾ ನಕಾರ ವ್ಯಕ್ತಪಡಿಸಿದರು.

ಇದನ್ನೂಓದಿ:ಚಿರತೆ ದಾಳಿಗೆ ಬಲಿಯಾದ ಬಾಲಕಿಯ ಕುಟುಂಬಕ್ಕೆ 15 ಲಕ್ಷ ರೂಪಾಯಿ ಪರಿಹಾರ: ಸಚಿವ ಈಶ್ವರ್​ ಖಂಡ್ರೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.