ಕೋಲಾರ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆ ಬೀಗ ಒಡೆದು ಕಳ್ಳತನ ಮಾಡಿರುವಂತಹ ಘಟನೆ ನಗರದಲ್ಲಿ ಜರುಗಿದೆ.
ನಗರದ ಪಿ.ಸಿ.ಬಡಾವಣೆಯ ಮನೆಯೊಂದರಲ್ಲಿ ಕಳ್ಳರ ಕೈಚಳಕ ನಡೆದಿದೆ. ಇನ್ನು ಮನೆ ಬೀಗ ಒಡೆದಿರುವ ಕಳ್ಳರು ಮನೆಯಲ್ಲಿದ್ದ ಲಕ್ಷಾಂತರ ರೂ. ನಗದು ಮತ್ತು ಬೆಲೆ ಬಾಳುವಂತಹ ಚಿನ್ನಾಭರಣಗಳನ್ನ ದೋಚಿ ಪರಾರಿಯಾಗಿದ್ದಾರೆ.
ಪಿ.ಸಿ.ಬಡಾವಣೆಯ ಗಂಗಾಧರ್ ಎಂಬುವರಿಗೆ ಸೇರಿದ ಮನೆ ಇದಾಗಿದ್ದು, ಕುಟುಂಬಸ್ಥರು ಸಂಬಂಧಿಕರ ಮನೆಗೆ ಹೋಗಿದ್ದ ವೇಳೆ ನಗದು ಚಿನ್ನಾಭರಣ ದೋಚಿದ್ದಾರೆ.
ಸ್ಥಳಕ್ಕೆ ಶ್ವಾನ ದಳದ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಕೋಲಾರ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.