ETV Bharat / state

ಸಿಎಂ ತೀರ್ಮಾನಕ್ಕೆ ನಾನು ಬದ್ಧ: ಸಚಿವ ಬಿ.ಸಿ.ಪಾಟೀಲ್

author img

By

Published : Jan 6, 2021, 6:50 PM IST

Updated : Jan 6, 2021, 7:16 PM IST

ಸಂಪುಟ ವಿಸ್ತರಣೆ ಆದಷ್ಟು ಬೇಗ ಆಗಬೇಕು. ಹಾಗೆಯೇ ಸಿಎಂ ತೆಗದುಕೊಳ್ಳುವ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ ಎಂದು ಸಚಿವ ಬಿ.ಸಿ.ಪಾಟೀಲ್ ಕೋಲಾರದಲ್ಲಿ ಹೇಳಿದರು.

ಸಚಿವ ಬಿ.ಸಿ ಪಾಟೀಲ್- ಅಬಕಾರಿ ಸಚಿವ ನಾಗೇಶ್ ಸ್ಪಷ್ಟನೆ
ಸಚಿವ ಬಿ.ಸಿ ಪಾಟೀಲ್- ಅಬಕಾರಿ ಸಚಿವ ನಾಗೇಶ್ ಸ್ಪಷ್ಟನೆ

ಕೋಲಾರ: ಸಿಎಂ ತೆಗದುಕೊಳ್ಳುವ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ನನ್ನ ಖಾತೆ ಬದಲಾವಣೆ ಮಾಡಿದರೂ ಅಡ್ಡಿ ಇಲ್ಲ ಎಂದು ಸಚಿವ ಸಂಪುಟ ವಿಸ್ತರಣೆ ಕುರಿತು ಸಚಿವ ಬಿ.ಸಿ.ಪಾಟೀಲ್ ಹೇಳಿದರು.

ಕೋಲಾರದಲ್ಲಿ ನಡೆದ ರೈತರೊಂದಿಗೆ ಒಂದು ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. "ಸಂಪುಟ ವಿಸ್ತರಣೆ ಆದಷ್ಟು ಬೇಗ ಆಗಬೇಕು. ನಮ್ಮ ಸ್ನೇಹಿತರಿಗೆ ಸಚಿವ ಸ್ಥಾನ ಸಿಗುವ ಭರವಸೆ ಇದೆ. ಇನ್ನು ಮುನಿರತ್ನ, ಆರ್.ಶಂಕರ್ ಹಾಗೂ ಎಂಟಿಬಿಗೆ ಸಚಿವ ಸ್ಥಾನ ಸಿಗಬೇಕು. ವಿಶ್ವನಾಥ್ ಅವರಿಗೂ ಸಿಗುತ್ತದೆ. ನಮ್ಮ ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ. ತಮ್ಮ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಕೇಳೋದು ಶಾಸಕರ ಹಕ್ಕು. ಸಿಎಂ ಎಲ್ಲಾ ಶಾಸಕರ ಸಮಸ್ಯೆ ಆಲಿಸಿ ಆರ್ಥಿಕ ಸಂಕಷ್ಟದ ನಡುವೆ ಸಮಸ್ಯೆಗೆ ಸ್ಪಂದಿಸುವ ಭರವಸೆ ನೀಡಿದ್ದಾರೆ" ಎಂದರು.

ಸಚಿವ ಬಿ.ಸಿ ಪಾಟೀಲ್- ಅಬಕಾರಿ ಸಚಿವ ನಾಗೇಶ್ ಸ್ಪಷ್ಟನೆ

ಇನ್ನು ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಬಿಜೆಪಿ ಮೇಲೆ ಪ್ರೀತಿ ಹೆಚ್ಚಾಗಿದೆ. ಹಾಗಾಗಿ ನಮ್ಮ ಮೇಲೆ ಸಾಫ್ಟ್ ಕಾರ್ನರ್ ತೋರಿಸುತ್ತಿದ್ದಾರೆ. ಜೆಡಿಎಸ್ ಸಾಫ್ಟ್ ಕಾರ್ನರ್‌ನ ನಾವು ಸ್ವಾಗತ ಮಾಡುತ್ತೇವೆ. ಬಿಜೆಪಿಗೆ ಸಾಕಷ್ಟು ಸಂಖ್ಯಾಬಲವಿದೆ. ಹೊಂದಾಣಿಕೆ ಅವಶ್ಯಕತೆ ಇಲ್ಲ ಎಂದರು.

"ಬಜೆಟ್ ಮೇಲೆ ನಮ್ಮ ನಿರೀಕ್ಷೆ ಹೆಚ್ಚಾಗಿದೆ. ರೈತರು ಆತ್ಮಹತ್ಯೆ ಮಾಡಿಕೊಂಡರೆ 5 ಲಕ್ಷ ಕೊಡಬೇಕು. ಹಾವು ಕಚ್ಚಿ ಸಾವಿಗೀಡಾದ್ರೆ 2 ಲಕ್ಷದಿಂದ 5 ಲಕ್ಷ ಪರಿಹಾರ ನೀಡಬೇಕು. ಕೃಷಿ ವಿಶ್ವವಿದ್ಯಾಲಯದಲ್ಲಿ ರೈತರ ಮಕ್ಕಳಿಗಿರುವ ಮೀಸಲಾತಿಯನ್ನ ಶೇ. 40 ಪರ್ಸೆಂಟ್​ನಿಂದ 50ಕ್ಕೆ ಏರಿಸಲು ಬಜೆಟ್​ನಲ್ಲಿ ಮನವಿ ಮಾಡಿದ್ದೇನೆ ಎಂದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅಬಕಾರಿ ಸಚಿವ ನಾಗೇಶ್, ಸಚಿವ ಸಂಪುಟ ವಿಸ್ತರಣೆ ವೇಳೆ ಸಿಎಂ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧ. ಸಂಕ್ರಾಂತಿ ಮುಗಿದ ಬಳಿಕ ಸಂಪುಟ ವಿಸ್ತರಣೆ ಆಗೋದ್ರಲ್ಲಿ ಅನುಮಾನವಿಲ್ಲ. ಖಾತೆ ಬದಲಾವಣೆ ಆದ್ರೆ ಇಂಧನ ಖಾತೆ ಕೊಡಲಿ. ಇಂಧನ ಇಲಾಖೆಯಲ್ಲಿ ನನಗೆ 34 ವರ್ಷ ಅನುಭವವಿದೆ. ಈ ಹಿಂದೆ ಕಾರಣಾಂತರಗಳಿಂದ ನನಗೆ ಇಂಧನ ಖಾತೆ ತಪ್ಪಿತ್ತು ಎಂದರು.

Last Updated :Jan 6, 2021, 7:16 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.