ಕೋಲಾರ: ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಸುಫಾರಿ ಕಿಲ್ಲರ್ ಕಾಲಿಗೆ ಗುಂಡೇಟು

author img

By

Published : Jun 24, 2022, 12:11 PM IST

ಸುಫಾರಿ ಕಿಲ್ಲರ್ ಕಾಲಿಗೆ ಗುಂಡೇಟು

ಕೋಲಾರ ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಹಾಗೂ ಸುಫಾರಿ ಕಿಲ್ಲರ್ ಬಾಲಾಜಿ ಸಿಂಗ್ ಬಲಗಾಲಿಗೆ ಮುಳುಬಾಗಿಲು ಇನ್ಸ್‌ಪೆಕ್ಟರ್ ಲಕ್ಷ್ಮೀಕಾಂತ್​​ ಗುಂಡೇಟು ನೀಡಿದ್ದಾರೆ.

ಕೋಲಾರ: ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ‌ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ಮೇಲೆ ಜಿಲ್ಲೆಯ ಚಲುವನಹಳ್ಳಿ ಬಳಿ ಇಂದು ಬೆಳಗ್ಗೆ ಪೊಲೀಸರು ಫೈರಿಂಗ್​ ಮಾಡಿದ್ದಾರೆ. ಸುಫಾರಿ ಕಿಲ್ಲರ್ ಬಾಲಾಜಿ ಸಿಂಗ್ ಬಲಗಾಲಿಗೆ ಮುಳುಬಾಗಿಲು ಇನ್ಸ್‌ಪೆಕ್ಟರ್ ಲಕ್ಷ್ಮೀಕಾಂತ್​​ ಗುಂಡೇಟು ನೀಡಿದ್ದಾರೆ.

ಇತ್ತೀಚೆಗೆ ಕೋಲಾರ ಜಿಲ್ಲೆಯ ಮುಳುಬಾಗಿಲಿನ ಮುತ್ಯಾಲಪೇಟೆಯಲ್ಲಿ ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ‌ಯಾಗಿದ್ದು, ಆರೋಪಿಗಳನ್ನ ಬಂಧಿಸಲು ಕೋಲಾರ ಎಸ್​ಪಿ ದೇವರಾಜ್ ವಿಶೇಷ ತಂಡ ರಚಿಸಿದ್ದರು. ಈ ಹಿನ್ನೆಲೆ ಪ್ರಕರಣದ ಪ್ರಮುಖ ಆರೋಪಿ ಹಾಗೂ ಸುಫಾರಿ ಕಿಲ್ಲರ್ ಬಾಲಾಜಿ ಸಿಂಗ್​ನನ್ನ ಬಂಧಿಸಿ, ಇಂದು ಬೆಳಗ್ಗೆ ವಿಚಾರಣೆಗೆ ಕರೆದೊಯ್ಯಲಾಗುತ್ತಿತ್ತು.

ಸುಫಾರಿ ಕಿಲ್ಲರ್ ಕಾಲಿಗೆ ಗುಂಡೇಟು

ಕೋಲಾರ ತಾಲೂಕಿನ ಚೆಲುವನಹಳ್ಳಿಯ ರಾಷ್ಟ್ರೀಯ ಹೆದ್ದಾರಿ ಬಳಿ ಆರೋಪಿ ಮೂತ್ರ ವಿಸರ್ಜನೆ ಮಾಡುವುದಾಗಿ ಹೇಳಿದ್ದರಿಂದ ವಾಹನ ನಿಲ್ಲಿಸಲಾಗಿತ್ತು. ಈ ವೇಳೆ, ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ, ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಅಲ್ಲದೇ, ಸ್ಥಳದಲ್ಲೇ ಇದ್ದ ದೊಣ್ಣೆಯಿಂದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಈ ವೇಳೆ, ಮುಳುಬಾಗಿಲು ಇನ್ಸ್‌ಪೆಕ್ಟರ್ ಲಕ್ಷ್ಮೀಕಾಂತ್ ಫೈರಿಂಗ್ ಮಾಡಿದ್ದಾರೆ.

ಮೊದಲು ಇನ್ಸ್‌ಪೆಕ್ಟರ್ ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಸೂಚಿಸಿದರು. ಆದರೆ ಆರೋಪಿ ಪರಾರಿಯಾಗಲು ಯತ್ನಿಸಿದ್ದರಿಂದ ಬಲಗಾಲಿಗೆ ಗುಂಡು ಹಾರಿಸಲಾಗಿದೆ. ಬಾಲಾಜಿ ಸಿಂಗ್​ನನ್ನ ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಳಕ್ಕೆ ಕೋಲಾರ ಎಸ್​ಪಿ ದೇವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಗುಜರಾತ್​ ಗಲಭೆ 2002: ಎಸ್​ಐಟಿ ಕ್ಲೀನ್​ಚಿಟ್ ಎತ್ತಿಹಿಡಿದ ಸುಪ್ರೀಂ ಕೋರ್ಟ್... ಪಿಎಂ ಮೋದಿಗೆ ರಿಲೀಫ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.