ಭೂಸ್ವಾಧೀನ ಕಾಯ್ದೆ ವಿರೋಧಿಸಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಪ್ರತಿಭಟನೆ

author img

By

Published : Jun 10, 2019, 12:59 PM IST

ಭೂ ಸ್ವಾಧೀನ ಕಾಯಿದೆ ವಿರೋಧಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಬೆಳಗಾವಿ ಹಾಗೂ ಕೋಲಾರದಲ್ಲಿ ರೈತರು ಬೀದಿಗಿಳಿದಿದ್ದರು.

ಚಿಕ್ಕೋಡಿ/ ಕೋಲಾರ : ಭೂಸ್ವಾಧೀನ ಕಾಯ್ದೆ ವಿರೋಧಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಸಂಕೇಶ್ವರ ಜೇವರ್ಗಿ ರಾಜ್ಯ ಹೆದ್ದಾರಿ ತಡೆದು ರೈತರು ಪ್ರತಿಭಟನೆ ನಡೆಸಿದರು.

ರಾಜ್ಯ ಹೆದ್ದಾರಿ ತಡೆದು ಕಬ್ಬು ಬಾಕಿ ಹಣಪಾವತಿ, ಕೃಷ್ಣಾ ನದಿಗೆ ನೀರು, ಭೂಸ್ವಾಧೀನ ಕಾಯ್ದೆ ತಿದ್ದುಪಡಿ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ಮಾಡಿದ್ದಾರೆ. ಕೋಲಾರದಲ್ಲೂ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಮಾಡಲಾಯಿತು. ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಕೋಲಾರ ಹೊರವಲಯದ ಕೊಂಡರಾಜನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ-75 ಬಂದ್ ಮಾಡಿ ಪ್ರತಿಭಟಿಸಿದರು.

ಭೂಸ್ವಾಧೀನ ಕಾಯ್ದೆ ವಿರೋಧಿಸಿ ಪ್ರತಿಭಟನೆ

ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಹೆದ್ದಾರಿ ತಡೆದು ಪ್ರತಿಭಟನೆ ಮಾಡಿದ ರೈತ ಸಂಘದ ಕಾರ್ಯಕಾರ್ತರು ಹಸಿರು ಬಾವುಟಗಳನ್ನ ಹಿಡಿದು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನ ಕೂಗಿದ್ರು.

ಪ್ರತಭಟನೆ ವೇಳೆ ಹಿರಿಯ ಸಾಹಿತಿ, ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ನಿಧನಕ್ಕೆ ಸಂತಾಪ ಸೂಚಿಸಿದ ರೈತ ಸಂಘದ ಕಾರ್ಯಕರ್ತರು, ಪ್ರತಿಭಟನೆ ಮಧ್ಯೆದಲ್ಲಿ ಕೆಲಕಾಲ ಮೌನಾಚರಣೆ ಮಾಡಿ ಗೌರವ ಸಲ್ಲಿಸಿದ್ದು ವಿಶೇಷವಾಗಿತ್ತು. ಸಾರ್ವಜನಿಕರಿಗೆ ತೊಂದರೆಯಾಗುವ ಹಿನ್ನೆಲೆಯಲ್ಲಿ ಎಚ್ಚೆತ್ತ ಪೊಲೀಸರು ರೈತ ಸಂಘದ ಕಾರ್ಯಕರ್ತರನ್ನ ಬಂಧಿಸಿ, ನಂತರ ಅವರನ್ನು ಬಿಡುಗಡೆ ಮಾಡಿದ್ರು.

Intro:ಭೂಸ್ವಾಧೀನ ಕಾಯಿದೆ ವಿರೋಧಿಸಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಪ್ರತಿಭಟನೆ
Body:
ಚಿಕ್ಕೋಡಿ :

ಭೂ ಸ್ವಾಧೀನ ಕಾಯಿದೆ ವಿರೋಧಿಸಿ
ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ದ ನಡೆಯುತ್ತಿರುವ ಪ್ರತಿಭಟನೆಯಲ್ಲಿ ನೂರಕ್ಕು ಹೆಚ್ಚು ರೈತರಿಂದ ರಸ್ತೆ ತಡೆದು ಪ್ರತಿಭಟನೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಸಂಕೇಶ್ವರ ಜೇವರ್ಗಿ ರಾಜ್ಯ ಹೆದ್ದಾರಿ ತಡೆದು ಕಬ್ಬು ಬಾಕಿ ಹಣಪಾವತಿ, ಕೃಷ್ಣಾ ನದಿಗೆ ನೀರು, ಭೂಸ್ವಾಧಿನ ಕಾಯಿದೆ ತಿದ್ದುಪಡಿ ಸೇರಿದಂತೆ ಹಲವು ಕಾರಣಗಳಿಗಾಗಿ ಬಂದ ಮಾಡಿರುವ‌ ಪ್ರತಿಭಟನಾಕಾರರು.

ರೈತರ ಸಂಪೂರ್ಣ ಸಾಲಮನ್ನಾ ,ಕಬ್ಬು ಬೆಳೆ ಬಾಕಿ ಹಣ ಸೇರಿದಂತೆ ಪ್ರಮುಖ ಬೇಡಿಕೆಗಳಿಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಎರಡ ನೂರಕ್ಕೂ ಹೆಚ್ಚು ಪ್ರತಿಭಟನಾಕಾರರು ಭಾಗಿ
Conclusion:
ಸಂಜಯ ಕೌಲಗಿ‌
ಚಿಕ್ಕೋಡಿ

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.