ETV Bharat / state

ರಾಜ್ಯ ಸರ್ಕಾರ ಬೆಲೆ ಏರಿಕೆ ಮಾಡಿ ಜನರಿಂದ ಪಿಕ್ ಪಾಕೇಟ್ ಮಾಡುತ್ತಿದೆ: ಬಿಜೆಪಿ ವಿರುದ್ಧ ಡಿಕೆಶಿ ವಾಗ್ದಾಳಿ

author img

By

Published : Mar 25, 2022, 7:46 AM IST

ರಾಜ್ಯದಲ್ಲಿ ದಿನವೂ ಪಿಕ್ ಪಾಕೇಟ್ ನಡೆಯುತ್ತಿದೆ. ಪೆಟ್ರೋಲ್, ಡೀಸೆಲ್​, ದಿನಸಿ ದರ ಹೆಚ್ಚಳವಾಗಿದೆ. ನಾವು ಒಳ್ಳೆಯ ಸರ್ಕಾರ ಮಾಡಿದರೂ ಜನರಿಗೆ ತಿಳಿಸಲಿಲ್ಲ. ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ. ಪೆಟ್ರೋಲ್, ಡೀಸೆಲ್​, ದಿನಸಿ ದರ ಹೆಚ್ಚಳವಾಗಿದ್ದು, ನಿತ್ಯವೂ ಪಿಕ್ ಪ್ಯಾಕೇಟ್ ನಡೆಯುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಡಿಕೆಶಿ
ಡಿಕೆಶಿ

ಕೊಪ್ಪಳ: ಬಿಜೆಪಿಯವರು ಪೆಟ್ರೋಲ್, ಗ್ಯಾಸ್ ಬೆಲೆ ಏರಿಕೆ ಮಾಡುವ ಮೂಲಕ ಜನರಿಂದ ಪಿಕ್ ಪಾಕೇಟ್ ಮಾಡುತ್ತಿದ್ದಾರೆ. ಪುನೀತ್ ರಾಜ್​ಕುಮಾರ್ ಅಭಿನಯದ ಜೇಮ್ಸ್​​ ಸಿನಿಮಾವನ್ನ ಚಿತ್ರಮಂದಿರಗಳಿಂದ ತೆಗೆಸಲು ಹೊರಟಿದ್ದಾರೆ. ನಮ್ಮಲ್ಲಿ ಭಿನ್ನಾಭಿಪ್ರಾಯವಿಲ್ಲ. ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ನಗರದ ಶಿವಶಾಂತವೀರ ಮಂಗಲ ಭವನದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವ ಪರಿಶೀಲನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾವು ಒಳ್ಳೆಯ ಸರ್ಕಾರ ಮಾಡಿದರೂ ಜನರಿಗೆ ತಿಳಿಸಲಿಲ್ಲ. ಬಿಜೆಪಿ ಸರ್ಕಾರ ವಿದ್ಯುತ್ ಕಟ್ ಮಾಡುತ್ತಿದೆ. ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ. ಕೊಪ್ಪಳ ಜಿಲ್ಲೆಯಲ್ಲಿ ನಾವು ಐದಕ್ಕೆ ಐದೂ ಸ್ಥಾನ ಗೆಲ್ಲುತ್ತೇವೆ ಎಂದು ಡಿ ಕೆ ಶಿವಕುಮಾರ್​ ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಡಿಕೆಶಿ

ಇದೇ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ, ಸದಸ್ಯತ್ವ ಹೆಚ್ಚು ಮಾಡಿಸಲು ಎಲ್ಲ ಕಾರ್ಯಕರ್ತರು ಹೆಚ್ಚು ಸಹಕಾರ ನೀಡಿದ್ದಾರೆ. ಬಿಜೆಪಿ ಪಕ್ಷದಿಂದ ನಮಗೆ ಮೋಸವಾಗಿದೆ ಎಂದು ನೋಂದಣಿಕಾರರಿಗೆ ತಿಳಿಸುತ್ತಿದ್ದಾರೆ. ಪಕ್ಷದಲ್ಲಿ ಕೆಲವರು ವಿರೋಧಿಗಳಿದ್ದು, ಅವರು ನನ್ನ ಬಗ್ಗೆ ಸುಳ್ಳು ಮಾಹಿತಿ ಹಬ್ಬಿಸುತ್ತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವರಾಜ ತಂಗಡಗಿ, ಮಾಜಿ ಸಚಿವ ಬಸವರಾಜ ರಾಯರಡ್ಡಿ, ಶಾಸಕರಾದ ಅಮರೇಗೌಡ ಪಾಟೀಲ್ ಬಯ್ಯಾಪುರ, ಕೆ. ರಾಘವೇಂದ್ರ ಹಿಟ್ನಾಳ್, ಮಾಜಿ ಶಾಸಕ ಹಸನಸಾಬ ದೋಟಿಹಾಳ, ಮಲ್ಲಿಕಾರ್ಜುನ ನಾಗಪ್ಪ, ಸುದರ್ಶನ ನಾಚಿಯಪ್ಪನ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೂ ಮುನ್ನ ಕೊಪ್ಪಳಕ್ಕೆ ಆಗಮಿಸಿದ ಡಿ.ಕೆ. ಶಿವಕುಮಾರ್​ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು.

ಇದನ್ನೂ ಓದಿ: G-20ಯಿಂದ ಹೊರ ಹೋಗಿ: ರಷ್ಯಾಗೆ ಬೈಡನ್​​ ಒತ್ತಾಯ, ಉಕ್ರೇನ್​​ಗೆ ಮಾನವೀಯ ನೆರವಿಗೆ ನ್ಯಾಟೋ ಸನ್ನದ್ಧ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.