ETV Bharat / state

ಅಕ್ರಮವಾಗಿ ಜಾನುವಾರು ಸಾಗಾಟ: ಲಾರಿ ತಡೆದ ಹಿಂದೂ ಸಂಘಟನೆ ಕಾರ್ಯಕರ್ತರು

author img

By

Published : Jul 28, 2020, 11:23 AM IST

ಜಾನುವಾರುಗಳನ್ನು ಸಾಗಿಸುತ್ತಿರುವ ಕುರಿತಂತೆ ಖಚಿತ ಮಾಹಿತಿ ಪಡೆದಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತರು, ಕೊಪ್ಪಳ ನಗರದ‌ ಲೇಬರ್ ಸರ್ಕಲ್​​​ನಲ್ಲಿ ಲಾರಿ ತಡೆದಿದ್ದಾರೆ.

Koppal
ಅಕ್ರಮ ಜಾನುವಾರು ಸಾಗಾಟ: ಲಾರಿ ತಡೆದ ಹಿಂದೂ ಸಂಘಟನೆ ಕಾರ್ಯಕರ್ತರು

ಕೊಪ್ಪಳ: ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಹಿಂದೂ ಸಂಘಟನೆ ಕಾರ್ಯಕರ್ತರು ತಡೆ ಹಿಡಿದಿದ್ದಾರೆ.‌

ಅಕ್ರಮವಾಗಿ ಜಾನುವಾರು ಸಾಗಾಟ: ಲಾರಿ ತಡೆದ ಹಿಂದೂ ಸಂಘಟನೆ ಕಾರ್ಯಕರ್ತರು

ಕೊಪ್ಪಳ ನಗರದ ಲೇಬರ್ ಸರ್ಕಲ್​​​ನಲ್ಲಿ ತಡರಾತ್ರಿ ಈ ಘಟನೆ ನಡೆದಿದೆ. ಜಿಲ್ಲೆಯ ಕುಕನೂರು ಪಟ್ಟಣದಿಂದ ಬೆಂಗಳೂರಿಗೆ ಈ ಲಾರಿಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಕಸಾಯಿಖಾನೆಗೆ ಸಾಗಿಸಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.‌ ಲಾರಿಯಯಲ್ಲಿ ಜಾನುವಾರುಗಳನ್ನು ಸಾಗಿಸುತ್ತಿರುವ ಕುರಿತಂತೆ ಖಚಿತ ಮಾಹಿತಿ ಪಡೆದಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತರು, ನಗರದ‌ ಲೇಬರ್ ಸರ್ಕಲ್​ನಲ್ಲಿ ಲಾರಿ ತಡೆದಿದ್ದಾರೆ.

ಲಾರಿ ತಡೆಯುತ್ತಿದ್ದಂತೆ ಚಾಲಕ ಸೇರಿದಂತೆ ಲಾರಿಯಲ್ಲಿದ್ದವರು ಪರಾರಿಯಾಗಿದ್ದಾರೆ. ಸ್ಥಳಕ್ಕಾಗಮಿಸಿದ ನಗರ ಠಾಣೆಯ ಪೊಲೀಸರು ಲಾರಿಯನ್ನು ಠಾಣೆಗೆ ತೆಗೆದುಕೊಂಡು ಹೋಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.