ETV Bharat / state

ಅತಿಥಿ ಶಿಕ್ಷಕರಿಗೆ ವೇತನ ಜೊತೆಗೆ ವಿಶೇಷ ಪ್ಯಾಕೇಜ್ ಘೋಷಿಸಲು ಆಗ್ರಹ... ನಾಳೆ ಸಾಂಕೇತಿಕ ಪ್ರತಿಭಟನೆಗೆ ನಿರ್ಧಾರ

author img

By

Published : Jun 24, 2020, 3:53 PM IST

ಎಲ್ಲಾ ವಲಯಕ್ಕೂ ಸರ್ಕಾರ ಪರಿಹಾರ ನೀಡಿದೆ. ಅದೇ ರೀತಿ ಅತಿಥಿ ಶಿಕ್ಷಕ, ಉಪನ್ಯಾಸಕ ಸಮುದಾಯಕ್ಕೂ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಎಐಡಿವೈಒ ಪ್ರತಿನಿಧಿಗಳು ಆಗ್ರಹಿಸಿದರು.

guest teachers
ಅತಿಥಿ ಶಿಕ್ಷಕರಿಗೆ ವೇತನ ಜೊತೆಗೆ ವಿಶೇಷ ಪ್ಯಾಕೇಜ್ ಘೋಷಣೆಗೆ ಆಗ್ರಹ

ಗಂಗಾವತಿ: ರಾಜ್ಯದ ನಾನಾ ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಶಿಕ್ಷಕರ ಬಾಕಿ ವೇತನ ಬಿಡುಗಡೆ ಮಾಡಬೇಕು ಹಾಗೂ ಸಂಕಷ್ಟದಲ್ಲಿರುವ ಶಿಕ್ಷಕ ಸಮುದಾಯವನ್ನು ಕೈಹಿಡಿಯುವ ನಿಟ್ಟಿನಲ್ಲಿ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಶಿಕ್ಷಕರ ಸಂಘದ ಪ್ರತಿನಿಧಿಗಳು ಆಗ್ರಹಿಸಿದರು.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ರಾಜ್ಯ ಅತಿಥಿ ಉಪನ್ಯಾಸಕ, ಶಿಕ್ಷಕ ಹೋರಾಟ ಸಮಿತಿ ಹಾಗೂ ಆಲ್ ಇಂಡಿಯಾ ಡೆಮಾಕ್ರಟಿಕ್ ಆರ್ಗನೈಸೇಷನ್ (ಎಐಡಿವೈಒ) ಪ್ರತಿನಿಧಿ ಶರಣು ಗಡ್ಡಿ ಮಾತನಾಡಿ, ಕಳೆದ ವರ್ಷದ ಜುಲೈ ತಿಂಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಯಾಗಿದೆ. ಆದರೆ ಫೆಬ್ರವರಿಯಲ್ಲಿ ವೇತನ ನೀಡಲಾಗಿದೆ. 8 ರಿಂದ10 ತಿಂಗಳಿಗೊಮ್ಮೆ ವೇತನ ನೀಡಿದರೆ ಜೀವನ ಸಾಗಿಸುವುದು ಹೇಗೆ ಎಂದು ಪ್ರಶ್ನಿಸಿದರು.

ಅತಿಥಿ ಶಿಕ್ಷಕರಿಗೆ ವೇತನ ಜೊತೆಗೆ ವಿಶೇಷ ಪ್ಯಾಕೇಜ್ ಘೋಷಣೆಗೆ ಆಗ್ರಹ

ಎಲ್ಲಾ ವಲಯಕ್ಕೂ ಸರ್ಕಾರ ಪರಿಹಾರ ನೀಡಿದೆ. ಅದೇ ರೀತಿ ಅತಿಥಿ ಶಿಕ್ಷಕ, ಉಪನ್ಯಾಸಕರ ಸಮುದಾಯಕ್ಕೂ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು. ಜೊತೆಗೆ ನಾಳೆ (ಜೂ. 25) ಎಲ್ಲಾ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಶರಣು ಗಡ್ಡಿ ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.