ಕೊಪ್ಪಳ: ಪ್ರಮುಖ ದೇಗುಲಗಳು ಸೋಮವಾರದಿಂದ‌ ಭಕ್ತರಿಗೆ ಮುಕ್ತ

author img

By

Published : Sep 26, 2021, 4:18 PM IST

Koppal

ಕಳೆದ ಏಪ್ರಿಲ್, ಮೇ ಹಾಗೂ ಜೂನ್ ತಿಂಗಳಲ್ಲಿ ಶೇ.30 ಕ್ಕಿಂತ ಅಧಿಕ ಕೋವಿಡ್‌ ಪಾಸಿಟಿವಿಟಿ ದರವಿದ್ದ ಕೊಪ್ಪಳ ಜಿಲ್ಲೆಯಲ್ಲಿ ಈಗ ಪಾಸಿಟಿವಿಟಿ ದರ ಶೂನ್ಯಕ್ಕೆ ಕುಸಿದಿದೆ.

ಕೊಪ್ಪಳ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವಿಕೆ ತಗ್ಗಿದ್ದು ಸಾರ್ವಜನಿಕರ ದರ್ಶನಕ್ಕೆ ನಿರ್ಬಂಧ ವಿಧಿಸಿದ್ದ ದೇವಸ್ಥಾನಗಳು ಭಕ್ತರಿಗೆ ಮುಕ್ತಗೊಳ್ಳುತ್ತಿವೆ. ಸೋಮವಾರದಿಂದ ದೇವಸ್ಥಾನಗಳಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲು ಜಿಲ್ಲಾಡಳಿತ ತೀರ್ಮಾನಿಸಿದೆ.

ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಮಾಹಿತಿ

ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೂನ್ಯಕ್ಕಿಳಿದಿದೆ. ಜಿಲ್ಲೆಯಲ್ಲೀಗ ಕೇವಲ ಮೂರು ಜನ ಮಾತ್ರ ಕೊರೊನಾ ಸೋಂಕಿತರಿದ್ದಾರೆ. ಕೊರೊನಾ ಸೋಂಕು ಕಡಿಮೆಯಾಗಿದ್ದು ಪ್ರಮುಖ ಧಾರ್ಮಿಕ ಯಾತ್ರಾ ಸ್ಥಳಗಳಾದ ತಾಲೂಕಿನ ಹುಲಗಿಯ ಶ್ರೀ ಹುಲಿಗೆಮ್ಮದೇವಿ ದೇವಸ್ಥಾನ, ಗಂಗಾವತಿ ತಾಲೂಕಿನ ಅಂಜನಾದ್ರಿ ಹಾಗೂ ಕನಕಗಿರಿಯ ಶ್ರೀ ಕನಕಾಚಲ ಲಕ್ಷ್ಮೀ ನರಸಿಂಹ ದೇವಸ್ಥಾನದಲ್ಲಿ ಭಕ್ತರ ದರ್ಶನಕ್ಕೆ ಹೇರಲಾಗಿದ್ದ ನಿರ್ಬಂಧ ಹಿಂಪಡೆಯಲಾಗಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.