ಕೊಪ್ಪಳದಲ್ಲಿ ಶಾಲೆಗೆ ಹೋಗಲು ವಿದ್ಯಾರ್ಥಿಗಳ ಪರದಾಟ: ಜೀವ ಪಣಕ್ಕಿಟ್ಟು ಹಳ್ಳ ದಾಟುವ ದುಃಸ್ಥಿತಿ

author img

By

Published : Sep 20, 2022, 4:39 PM IST

there-is-no-bridge-to-go-to-school-in-koppal

ಶಾಲೆಗೆ ತೆರಳಲು ಸರಿಯಾದ ಸೇತುವೆ ಇಲ್ಲದೆ, ಹಳ್ಳ ದಾಟಲು ವಿದ್ಯಾರ್ಥಿಗಳು ಪರದಾಡುವ ಪರಿಸ್ಥಿತಿ ಕೊಪ್ಪಳ ತಾಲೂಕಿನ ಮಾದಿನೂರು ಗ್ರಾಮದಲ್ಲಿ ನಿರ್ಮಾಣವಾಗಿದೆ. ಈ ಬಗ್ಗೆ ಸೇತುವೆ ನಿರ್ಮಾಣ ಮಾಡಿಕೊಡುವಂತೆ ಜನಪ್ರತಿನಿಧಿಗಳಲ್ಲಿ ಒತ್ತಾಯಿಸಿದ್ದರೂ ಯಾವುದೇ ಪ್ರಯೋಜನ ಆಗಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.

ಕೊಪ್ಪಳ: ಕೊಪ್ಪಳ ತಾಲೂಕಿನ ಮಾದಿನೂರು ಗ್ರಾಮದ ವಿದ್ಯಾರ್ಥಿಗಳು ದಿನನಿತ್ಯ ಶಾಲೆಗೆ ತೆರಳಲು ಪ್ರಾಣ ಪಣಕ್ಕಿಟ್ಟು ಹಳ್ಳದಾಟುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಾದಿನೂರು ಗ್ರಾಮದಿಂದ ಕಿನ್ನಾಳ ಮತ್ತು ಕಿನ್ನಾಳ ಮಾರ್ಗವಾಗಿ ಕೊಪ್ಪಳಕ್ಕೆ ಶಾಲೆಗೆ ತೆರಳುವ ವಿದ್ಯಾರ್ಥಿಗಳಿಗೆ ಹಳ್ಳ ದಾಟಲು ಸೇತುವೆ ಇಲ್ಲದೇ ಪರದಾಡುವಂತಾಗಿದೆ.

ಈ ಕುರಿತು ಸ್ಥಳೀಯರು ಜನಪ್ರತಿನಿಧಿಗಳಿಗೆ ಸೇತುವೆ ನಿರ್ಮಿಸಲು ಮನವಿ ಮಾಡಿಕೊಂಡರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

ಕೊಪ್ಪಳದಲ್ಲಿ ಶಾಲೆಗೆ ಹೋಗಲು ವಿದ್ಯಾರ್ಥಿಗಳ ಪರದಾಟ: ಜೀವ ಪಣಕ್ಕಿಟ್ಟು ಹಳ್ಳ ದಾಟುವ ದುಸ್ಥಿತಿ

ಇದು ಕೇವಲ ಈ ವರ್ಷದ ಸಮಸ್ಯೆಯಲ್ಲ. ಪ್ರತಿ ವರ್ಷವೂ ಇಂತೆಯೇ ಸಮಸ್ಯೆಯಾಗುತ್ತಿದೆ. ಇದರಿಂದಾಗಿ ಶಾಲೆಗೆ ತೆರಳಲು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ ವಿದ್ಯಾರ್ಥಿಗಳು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಜೊತೆಗೆ ಮರುಳು ದಂಧೆಕೋರರಿಂದ ಹಳ್ಳದಲ್ಲಿ ದೊಡ್ಡ ದೊಡ್ಡ ಕಂದಕಗಳು ನಿರ್ಮಾಣವಾಗಿದ್ದು, ಇದರಲ್ಲಿ ನೀರು ತುಂಬಿಕೊಂಡಿದೆ. ಇದರಿಂದಾಗಿ ಇಲ್ಲಿನ ವಿದ್ಯಾರ್ಥಿಗಳು ನಿತ್ಯ ಕಷ್ಟಪಡುವಂತಾಗಿದೆ. ಈ ಬಗ್ಗೆ ಶೀಘ್ರವಾಗಿ ಕ್ರಮಕೈಗೊಳ್ಳುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಕೋಲಾರ: ಮಳೆಯಿಂದಾಗಿ ಐದು ಕೋಟಿಗೂ ಹೆಚ್ಚು ಮೌಲ್ಯದ ಬೆಳೆಹಾನಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.