ETV Bharat / state

ಕುಟುಂಬ ಸಮೇತ ವಿವಿಧ ದೇವಾಲಯಗಳಿಗೆ ಭೇಟಿ ನೀಡಿದ ಬಿ.ವೈ.ವಿಜಯೇಂದ್ರ

author img

By

Published : Jul 1, 2021, 9:52 AM IST

ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಂಡ್ಯ ಜಿಲ್ಲೆಯಲ್ಲಿರುವ ವಿವಿಧ ದೇವಾಲಯಗಳಿಗೆ ಕುಟುಂಬ ಸಮೇತರಾಗಿ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.

mandya
ವಿವಿಧ ದೇವಾಲಯಗಳಿಗೆ ಭೇಟಿ ನೀಡಿದ ಬಿ.ವೈ.ವಿಜಯೇಂದ್ರ

ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕಾಪನಹಳ್ಳಿ ಬಳಿ ಇರುವ ಗವಿಮಠದ ಸ್ವತಂತ್ರ ಸಿದ್ದಲಿಂಗೇಶ್ವರ ಗದ್ದುಗೆ ಮತ್ತು ಕಲ್ಲಹಳ್ಳಿಯ ಭೂವರಹನಾಥ ಸ್ವಾಮಿ ದೇವಸ್ಥಾನ ಸೇರಿದಂತೆ ವಿವಿಧ ದೇವಾಲಯಗಳಿಗೆ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಕುಟುಂಬ ಸಮೇತರಾಗಿ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.

ಕಲ್ಲಹಳ್ಳಿಯ ಭೂವರಹನಾಥ ಸ್ವಾಮಿಗೆ ತಂದೆಯ ಪರವಾಗಿ ವಿಶೇಷ ಪೂಜೆ ಸಲ್ಲಿಸಿದ ಅವರು, ಅಲ್ಲಿಂದ ಬಯಲು ಸೀಮೆ ಸುಬ್ರಹ್ಮಣ್ಯ ದೇವಸ್ಥಾನ ಎಂದೇ ಪ್ರಖ್ಯಾತವಾದ ಸಾಸಲು ಗ್ರಾಮದ ಸೋಮೇಶ್ವರ - ಶಂಭುಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು.

ನಂತರ ತಮ್ಮ ಮನೆ ದೇವರು ಕಾಪನಹಳ್ಳಿ ಗವಿಮಠದಲ್ಲಿರುವ ಪವಾಡ ಪುರುಷ ಸ್ವತಂತ್ರ ಸಿದ್ದಲಿಂಗೇಶ್ವರರ ಗದ್ದುಗೆಗೆ ಭೇಟಿ ನೀಡಿ ಮಠದ ಶ್ರೀಗಳೊಂದಿಗೆ ಪ್ರಾರ್ಥನೆ ಸಲ್ಲಿಸಿದರು. ನಂತರ ಸ್ವಗ್ರಾಮ ಬೂಕನಕೆರೆಯಲ್ಲಿ ಗೋಗಲ್ಲಮ್ಮನವರ ದರ್ಶನ ಪಡೆದರು. ಈ ಸಮಯದಲ್ಲಿ ಪಕ್ಷದ ಕಾರ್ಯಕರ್ತರಿಗಾಗಲಿ, ಮಾಧ್ಯಮ ಪ್ರತಿನಿಧಿಗಳಿಗಾಗಲಿ ಭೇಟಿಯ ಬಗ್ಗೆ ಮಾಹಿತಿ ನೀಡಿರಲಿಲ್ಲ.

ಓದಿ: 12 ವರ್ಷ ಮೇಲ್ಪಟ್ಟವರಿಗಾಗಿ ಲಸಿಕೆಯ ತುರ್ತು ಬಳಕೆಗೆ DCIG ಅನುಮೋದನೆ ಕೋರಿದ ಝೈಡಸ್​ ಕ್ಯಾಡಿಲಾ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.