ಮಂಡ್ಯದಲ್ಲಿ ನೈತಿಕ ಪೊಲೀಸ್ ಗಿರಿ ಆರೋಪ ಪ್ರಕರಣ: ನಾಲ್ವರ ವಿರುದ್ದ ಕೇಸ್​

author img

By

Published : Oct 12, 2021, 6:05 PM IST

case-registered-against-moral-policing-accused-in-mandya

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಅನ್ಯಕೋಮಿನ ಯುವಕನ‌ ಜೊತೆ ಹೋಗುತ್ತಿದ್ದ ಯುವತಿಯನ್ನು ತಡೆದ ಸಂಘಟನೆಯೊಂದರ ಕಾರ್ಯಕರ್ತರು ಯುವಕನಿಗೆ ಹೊಡೆಯಲು ಯತ್ನಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.

ಮಂಡ್ಯ: ಬೈಕ್​ನಲ್ಲಿ ಹಿಂದೂ ಯುವತಿಯನ್ನು ಕೂರಿಸಿಕೊಂಡು ಹೋಗುತ್ತಿದ್ದ ಅನ್ಯ ಕೋಮಿನ ಯುವಕನನ್ನು ತಡೆದು ಹೆದರಿಸಿದ್ದ ಆರೋಪದ ಮೇಲೆ ನಾಲ್ವರು ಯುವಕರ ವಿರುದ್ದ ಮಂಡ್ಯ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಅನ್ಯಕೋಮಿನ ಯುವಕನ‌ ಜೊತೆ ಹೋಗುತ್ತಿದ್ದ ಯುವತಿಯನ್ನು ತಡೆದ ಸಂಘಟನೆಯೊಂದರ ಕಾರ್ಯಕರ್ತರು ಯುವಕನಿಗೆ ಹೊಡೆಯಲು ಯತ್ನಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

ಶ್ರೀರಂಗಪಟ್ಟಣದಿಂದಲೂ ಮಂಡ್ಯ ತಾಲೂಕಿನವರೆಗೂ ಕಾರ್ಯಕರ್ತರೊಬ್ಬರು ಇಬ್ಬರನ್ನೂ ಹಿಂಬಾಲಿಸಿ ಅಡ್ಡಗಟ್ಟಿ ನೈತಿಕ ಪೊಲೀಸ್​ಗಿರಿ ನಡೆಸಲು ಮುಂದಾಗಿದ್ದರು ಎನ್ನಲಾಗಿತ್ತು. ನಂತರ ಯುವತಿಯನ್ನು ಪೋಷಕರ ವಶಕ್ಕೆ ಒಪ್ಪಿಸಿದ್ದರು. ಅಲ್ಲದೆ, ಯುವತಿ ಕರೆದೊಯ್ಯುತ್ತಿದ್ದ ಯುವಕನಿಗೆ ಎಚ್ಚರಿಕೆ ನೀಡಿ, ವಾಪಸ್ ಕಳುಹಿಸಿದ್ದಾರೆ ಎನ್ನಲಾಗಿತ್ತು. ಈ ನೈತಿಕ ಪೊಲೀಸ್ ಗಿರಿ ವಿಡಿಯೋ ನಾಲ್ಕು ದಿನಗಳ ಬಳಿಕ ಸೋಶಿಯಲ್​ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಈ ಸಂಬಂಧ ಯುವಕ ಮಂಡ್ಯದ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಹೀಗಾಗಿ, ಆರೋಪಿಗಳಾದ ಪುನೀತ್, ಲಂಕೇಶ್ ಸೇರಿ ನಾಲ್ವರ ವಿರುದ್ದ IPC 143,341,504, ಹಾಗೂ 506 ಅಡಿ ಪ್ರಕರಣ ದಾಖಲಿಸಿ ಸಿಬ್ಬಂದಿ ತನಿಖೆ ನಡೆಸುತ್ತಿದ್ದಾರೆ.

ಓದಿ: ಬೆಂಗಳೂರಿನಲ್ಲಿ ಐಟಿ ದಾಳಿ ಪ್ರಕರಣ.. ಬರೋಬ್ಬರಿ 750 ರೂ. ಅಕ್ರಮ ಆಸ್ತಿ ಬಯಲು - ದೃಢಪಡಿಸಿದ ಇಲಾಖೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.