ಮಂಡ್ಯದಲ್ಲಿ ಮಳೆ ಆರ್ಭಟ.. ಶಿಂಷಾ ನದಿಗೆ ಅಡ್ಡಲಾಗಿ ನಿರ್ಮಿಸಿದ ತಡೆಗೋಡೆ ಕುಸಿತ

author img

By

Published : Aug 30, 2022, 3:54 PM IST

Collapse of barrier built across Shimshan river

ಶಿಂಷಾ ನದಿಗೆ ಅಡ್ಡಲಾಗಿ ಇತ್ತೀಚೆಗಷ್ಟೇ 2 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ತಡೆಗೋಡೆ ಮಳೆಗೆ ಕುಸಿದು ಬಿದ್ದಿದೆ. ಶ್ರೀ ಹೊಳೆ ಆಂಜನೇಯ ಸ್ವಾಮಿ ದೇವಾಲಯದ ಬಳಿ ತಡೆಗೋಡೆ ನಿರ್ಮಾಣ ಮಾಡಲಾಗಿತ್ತು.

ಮಂಡ್ಯ: ಜಿಲ್ಲೆಯಲ್ಲಿ ವರುಣನ ಆರ್ಭಟ ಮತ್ತೆ ಮುಂದುವರೆದಿದ್ದು, ಸತತ ಮೂರು ದಿನಗಳಿಂದ ಮಳೆಯಾಗುತ್ತಿದೆ. ಇದರಿಂದಾಗಿ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಇತ್ತೀಚೆಗಷ್ಟೇ ಸುಮಾರು ಎರಡು ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಉದ್ಯಾನವನ ಹಾಗೂ ಶಿಂಷಾ ನದಿಯ ತಡೆಗೋಡೆ ಸೋಮವಾರ ಸುರಿದ ಭಾರೀ ಮಳೆಗೆ ಕೊಚ್ಚಿಹೋಗಿದೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಪ್ರಸಿದ್ಧ ಶ್ರೀ ಹೊಳೆ ಆಂಜನೇಯ ಸ್ವಾಮಿ ದೇವಾಲಯದ ಬಳಿ ತಡೆಗೋಡೆ ನಿರ್ಮಾಣ ಮಾಡಲಾಗಿತ್ತು. ಇದನ್ನು ಇತ್ತೀಚೆಗಷ್ಟೇ 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿತ್ತು. ಆದರೆ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿಂಷಾ ನದಿಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಅಪಾರ ಪ್ರಮಾಣದ ಬೆಳೆ ಹಾಗೂ ಆಸ್ತಿಪಾಸ್ತಿಗೆ ನಷ್ಟ ಉಂಟಾಗಿದೆ.

ಶಿಂಷಾ ನದಿಗೆ ಅಡ್ಡಲಾಗಿ ನಿರ್ಮಿಸಿದ ತಡೆಗೋಡೆ ಕುಸಿತ

ರಾತ್ರಿ ವೇಳೆ ಘಟನೆ ನಡೆದಿದ್ದರಿಂದ ಯಾವುದೇ ರೀತಿಯ ಪ್ರಾಣ ಹಾನಿ ಸಂಭವಿಸಿಲ್ಲ. ಇನ್ನು, ಕೃಷ್ಣರಾಜಸಾಗರ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆಯಾಗುತ್ತಿದ್ದು, ಐವತ್ತು ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಬಿಡಲಾಗುತ್ತಿದೆ. ಇದರಿಂದಾಗಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಪ್ರವಾಹ ಪರಿಸ್ಥಿತಿ ಉಂಟಾಗುತ್ತಿದೆ.

ಇದನ್ನೂ ಓದಿ: ಮಂಡ್ಯ ಜಿಲ್ಲೆಯಲ್ಲಿ ಮತ್ತೆ ಮುಂದುವರಿದ ಮಳೆ ಆರ್ಭಟ.. ಶಾಲಾ ಆವರಣಕ್ಕೆ ನುಗ್ಗಿದ ನೀರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.