ETV Bharat / state

ಶ್ರೀರಂಗಪಟ್ಟಣದಲ್ಲಿಂದು ಹನುಮ ಸಂಕೀರ್ತನಾ ಯಾತ್ರೆ: ಬಿಗಿ ಪೊಲೀಸ್ ಬಂದೋಬಸ್ತ್

author img

By ETV Bharat Karnataka Team

Published : Dec 24, 2023, 1:26 PM IST

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಇಂದು ಹಿಂದೂ ಜಾಗರಣಾ ವೇದಿಕೆ ಕರೆಕೊಟ್ಟಿರುವ ಹನುಮ ಸಂಕೀರ್ತನಾ ಯಾತ್ರೆ ನಡೆಯಲಿದೆ.

hanuma-sankirtana-yatra-in-srirangapatna
ಹನುಮ ಸಂಕೀರ್ತನಾ ಯಾತ್ರೆ

ಹನುಮ ಸಂಕೀರ್ತನಾ ಯಾತ್ರೆ: ಬಿಗಿ ಪೊಲೀಸ್ ಬಂದೋಬಸ್ತ್

ಮಂಡ್ಯ: ಶ್ರೀರಂಗಪಟ್ಟಣದಲ್ಲಿ ಸಾವಿರಾರು ಹನುಮ ಮಾಲಾಧಾರಿಗಳಿಂದ ಬೃಹತ್ ಸಂಕೀರ್ತನಾ ಯಾತ್ರೆ ಇಂದು ನಡೆಯಲಿದ್ದು, ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಪೊಲೀಸ್​​ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ. ಗಂಜಾಂನ ಶ್ರೀ ನಿಮಿಷಾಂಬ ದೇವಸ್ಥಾನದ ಬಳಿಯ ಆಂಜನೇಯ ಸ್ವಾಮಿ‌ ದೇಗುಲದಿಂದ ಸಂಕೀರ್ತನಾ ಯಾತ್ರೆ ಆರಂಭಗೊಂಡು, ಪಟ್ಟಣದ ಮುಖ್ಯ ದ್ವಾರದ ಮೂಲಕ‌ ಪುರಸಭೆ ವೃತ್ತ ಸೇರಿದಂತೆ ಮುಖ್ಯ ರಸ್ತೆಯಲ್ಲಿನ‌‌ ಮೂಡಲ ಬಾಗಿಲು‌ ಆಂಜನೇಯ ದೇವಾಲಯದ ಮಾರ್ಗವಾಗಿ ತೆರಳಿ ಬಳಿಕ ಶ್ರೀರಂಗನಾಥಸ್ವಾಮಿ‌ ದೇಗುಲದ‌ ಬಳಿ ಅಂತ್ಯಗೊಳ್ಳಲಿದೆ.

ಗಂಜಾಂನ ನಿಮಿಷಾಂಬ ದೇವಾಲಯದ ಬಳಿಯ ಆಂಜನೇಯ ಸ್ವಾಮಿ‌ ದೇವಾಲಯದ ಆವರಣ, ಪಟ್ಟಣದ ಪುರಸಭೆ ವೃತ್ತ ಹಾಗೂ ಅಂಬೇಡ್ಕರ್ ವೃತ್ತ ಸೇರಿದಂತೆ ಮೆರವಣಿಗೆ ಸಾಗುವ ಪ್ರಮುಖ ವೃತ್ತಗಳಲ್ಲಿ ಹನುಮ ಮಾಲಾಧಾರಿಗಳು ಕೇಸರಿ ಬಣ್ಣದ ಬಾವುಟಗಳನ್ನು ಕಟ್ಟಿ, ತಳಿರು ತೋರಣಗಳಿಂದ ಸಿಂಗಾರಗೊಳಿಸಿದ್ದಾರೆ.

ಪೊಲೀಸ್ ಪರೇಡ್ : ಮಂಡ್ಯ, ಮೈಸೂರು ಸೇರಿದಂತೆ ರಾಜ್ಯದ ನಾನಾ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಹನುಮ ಮಾಲಾಧಾರಿಗಳು ಆಗಮಿಸುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾ ವರಿಷ್ಠಾಧಿಕಾರಿ ಯತೀಶ್ ನೇತೃತ್ವದಲ್ಲಿ ಸಾವಿರಾರು ಪೊಲೀಸರು ಮೆರವಣಿಗೆ ಸಾಗುವ ಮಾರ್ಗದಲ್ಲಿ ಪಥ ಸಂಚಲನ‌‌ ನಡೆಸಿ ಜಾಗೃತಿ ಮೂಡಿಸಿದರು.

ಇದನ್ನೂ ಓದಿ : ದತ್ತ ಜಯಂತಿ: ಮೂಡಿಗೆರೆಯಲ್ಲಿ ಬೃಹತ್ ಶೋಭಾಯಾತ್ರೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.