ETV Bharat / state

ಕಾವೇರಿ ಉಗಮ ಸ್ಥಾನ ಕೊಡಗಿನಲ್ಲಿ ಬಿರುಸಿನ ಮಳೆ: KRSಗೆ ಒಳ ಹರಿವು ಹೆಚ್ಚಳ

author img

By

Published : Jul 20, 2021, 12:04 PM IST

ಕೊಡಗಿನಲ್ಲಿ ವರುಣ ಅಬ್ಬರಿಸುತ್ತಿದ್ದು, ಎಲ್ಲೆಡೆ ನೀರು ತುಂಬಲಾರಂಭಿಸಿ ರೈತರ ಮೊಗದಲ್ಲಿ ಮಂದಹಾಸ ಬೀರಿದೆ. ಅತಿಯಾದ ಮಳೆಯ ಪರಿಣಾಮ KRS​ ಡ್ಯಾಂಗೆ ಒಳಹರಿವು ಹೆಚ್ಚಾಗಿದೆ.

KRS
KRSಗೆ ಒಳ ಹರಿವು ಹೆಚ್ಚಳ

ಮಂಡ್ಯ: ಕಾವೇರಿ ಉಗಮ ಸ್ಥಾನ ಕೊಡಗಿನಲ್ಲಿ ಕಳೆದ ಎರಡು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಹೀಗಾಗಿ, ಕಾವೇರಿ ನದಿ ಮೈದುಂಬಿ ಹರಿಯುತ್ತಿದ್ದು, ಕೃಷ್ಣರಾಜ ಸಾಗರ ಜಲಾಶಯ(KRS)ಕ್ಕೆ ನೀರಿನ ಒಳ ಹರಿವು ಹೆಚ್ಚಾಗಿದೆ.

ಕೆಆರ್‌ಎಸ್‌ ಡ್ಯಾಂನ ಒಳ ಹರಿವು 13,892 ಕ್ಯೂಸೆಕ್​ಗೆ ಏರಿಕೆಯಾಗಿದೆ. ಅಣೆಕಟ್ಟಿನ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಿದ್ದು, ಇಂದು 99.52 ಅಡಿ ನೀರು ಸಂಗ್ರವಾಗಿದೆ. ಪ್ರಸ್ತುತ 22.437 ಟಿಎಂಸಿ ನೀರು ಸಂಗ್ರಹವಾಗಿದೆ.

ಕೇರಳದ ವಯನಾಡಿನಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಕೂಡ ತುಂಬಿದ್ದು, ಹೆಚ್ಚಳವಾದ ನೀರನ್ನು ನದಿಗೆ ಹರಿಬಿಡಲಾಗಿದೆ. ಇತ್ತ ಜಿಲ್ಲೆಯಲ್ಲೂ ಆಗಾಗ ಮಳೆ ಸುರಿಯುತ್ತಿರುವುದರಿಂದ ರೈತರು ಭೂಮಿಯನ್ನು ಹದಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಇದನ್ನೂ ಓದಿ: ಮನೆ ಮೇಲೆ ಬೃಹತ್ ಕಾಂಪೌಂಡ್ ಕುಸಿದು ಅಣ್ಣ - ತಂಗಿ ಬಲಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.