ETV Bharat / state

ಚುರುಕು ಪಡೆದ ಮುಂಗಾರು: ಕೆಆರ್​ಎಸ್​​​ನಲ್ಲಿ 104.38 ಅಡಿ ನೀರು ಸಂಗ್ರಹ

author img

By

Published : Jul 24, 2021, 7:33 AM IST

ರಾಜ್ಯದಲ್ಲಿ ಮಳೆಯಾರ್ಭಟ ಜೋರಾಗಿದ್ದು, ಹಲವು ಜಲಾಶಯಗಳು ಭರ್ತಿಯಾಗುವ ಹಂತ ತಲುಪಿವೆ. ಇತ್ತ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೆಆರ್​ಎಸ್​ ಜಲಾಶಯದ ಒಳಹರಿವಿನಲ್ಲಿ ಹೆಚ್ಚಳವಾಗಿದೆ.

krs-getting-close-to-full-in-wake-of-heavy-rain-in-part-of-mandya
ಕೆಆರ್​ಎಸ್​​​ನಲ್ಲಿ 104.38 ಅಡಿ ನೀರು ಸಂಗ್ರಹ

ಮಂಡ್ಯ: ರಾಜ್ಯದಲ್ಲಿ ಮುಂಗಾರು ಚುರುಕಾಗಿರುವುದರಿಂದ ಪ್ರಮುಖ ಜಲಾಶಯಗಳ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ. ಕೆಆರ್‌ಎಸ್ ಜಲಾಶಯದಲ್ಲಿ 104.38 ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಕಾವೇರಿ ಜಲಾನಯನ ಭಾಗದಲ್ಲೂ ಉತ್ತಮ ಮಳೆಯಾಗುತ್ತಿದ್ದು, ಕೃಷ್ಣರಾಜ ಸಾಗರ ಜಲಾಶಯಕ್ಕೆ 25,915 ಕ್ಯೂಸೆಕ್ ಒಳಹರಿವಿದೆ.

124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಜಲಾಶಯದಲ್ಲಿ 104.38 ಅಡಿ ನೀರು ಸಂಗ್ರಹವಾಗಿದೆ. ಅಣೆಕಟ್ಟೆಗೆ 25,915 ಕ್ಯೂಸೆಕ್ ಒಳಹರಿವಿದ್ದು, ಜಲಾಶಯದಿಂದ 6,415 ಕ್ಯೂಸೆಕ್‌ ನೀರನ್ನು ಕಾವೇರಿ ನದಿಗೆ ಬಿಡಲಾಗುತ್ತಿದೆ.

ಕಳೆದ ಒಂದು ವಾರದ ಹಿಂದೆ 22 ಸಾವಿರಕ್ಕೂ ಅಧಿಕ ಕ್ಯೂಸೆಕ್‌ ನೀರು ಜಲಾಶಯಕ್ಕೆ ಹರಿದು ಬರುತಿತ್ತು. ಆದರೆ, ಕೊಡಗು, ಭಾಗಮಂಡಲ ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಪ್ರಮಾಣ ಹೆಚ್ಚಾಗಿರುವುದರಿಂದ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಕೆಲದಿನಗಳಲ್ಲೇ ಜಲಾಶಯ ಭರ್ತಿಯಾಗುವ ಸಾಧ್ಯತೆ ಇದೆ.

KRS ಡ್ಯಾಂ ನೀರಿನ ಮಟ್ಟ

ಗರಿಷ್ಠ ಮಟ್ಟ ಈಗಿನ ಮಟ್ಟ ಒಳಹರಿವು ಹೊರಹರಿವುಪ್ರಸ್ತುತ ನೀರಿನ ಸಂಗ್ರಹಸಂಗ್ರಹ ಸಾಮರ್ಥ್ಯ
124.80 (ಅಡಿ) 104.38 (ಅಡಿ)25,915 (ಕ್ಯೂಸೆಕ್) 6,415 (ಕ್ಯೂಸೆಕ್)26.442 (ಟಿಎಂಸಿ)49.452 (ಟಿಎಂಸಿ)
ETV Bharat Logo

Copyright © 2024 Ushodaya Enterprises Pvt. Ltd., All Rights Reserved.