ETV Bharat / state

ಮಂಡ್ಯ: ಪ್ಲಾಸ್ಟಿಕ್ ಬುಟ್ಟಿಯಲ್ಲಿ ನವಜಾತ ಗಂಡು ಶಿಶು ಪತ್ತೆ

author img

By

Published : Jan 28, 2023, 8:33 PM IST

Updated : Jan 28, 2023, 10:28 PM IST

ಪ್ಲಾಸ್ಟಿಕ್​ ಬುಟ್ಟಿಯೊಂದರಲ್ಲಿ ನವಜಾತ ಗಂಡು ಶಿಶು ಪತ್ತೆ - ಪಾಂಡವಪುರ ತಾಲೂಕಿನ ಚಿಕ್ಕಮರಳಿ ಗೇಟ್ ಬಳಿ ಶಿಶು ಪತ್ತೆ - ಪೊಲೀಸರಿಂದ ಮಗುವಿನ ರಕ್ಷಣೆ

new-born-baby-boy-found
ಪ್ಲಾಸ್ಟಿಕ್ ಬುಟ್ಟಿಯಲ್ಲಿ ನವಜಾತ ಗಂಡು ಶಿಶು ಪತ್ತೆ

ಮಂಡ್ಯ: ಪ್ಲಾಸ್ಟಿಕ್​ ಬುಟ್ಟಿಯಲ್ಲಿ ನವಜಾತ ಗಂಡು ಶಿಶು ಪತ್ತೆಯಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ತರಕಾರಿ ತರುವ ಪ್ಲಾಸ್ಟಿಕ್ ಬುಟ್ಟಿಯಲ್ಲಿ ಮಗುವನ್ನು ಮುಚ್ಚಿಟ್ಟು ಪಾಂಡವಪುರ ತಾಲೂಕಿನ ಚಿಕ್ಕಮರಳಿ ಗೇಟ್ ಬಳಿ ಬಿಟ್ಟು ಹೋಗಲಾಗಿದೆ. ಮಗು ಅಳುತ್ತಿದ್ದ ಶಬ್ದ ಕೇಳಿ ದಾರಿಹೋಕರು ಹೋಗಿ ನೋಡಿದಾಗ ಪ್ಲಾಸ್ಟಿಕ್​ ಬುಟ್ಟಿಯಲ್ಲಿ ಮಗು ಪತ್ತೆಯಾಗಿದೆ. ಕೂಡಲೇ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳೀಯರ ಮಾಹಿತಿ ಮೆರೆಗೆ ಸ್ಥಳಕ್ಕಾಗಮಿಸಿದ ಪೊಲೀಸರು ಮಗುವನ್ನು ರಕ್ಷಣೆ ಮಾಡಿ ಪಾಂಡವಪೂರ ಆಸ್ಪತ್ರಗೆ ಕರೆದೊಯ್ದಿದ್ದಾರೆ.

ಮದ್ದೂರಲ್ಲಿ ತಲೆ ಮೇಲೆ ಕಬ್ಬಿಣದ ರಾಡ್​ ಬಿದ್ದು ರೈತ ಸಾವು: ವಿದ್ಯುತ್ ಪರಿವರ್ತಕ ಅಳವಡಿಸುತ್ತಿದ ವೇಳೆ ಚೈನ್ ಪೋಲ್ ಕಬ್ಬಿಣದ ರಾಡು ತಲೆ ಮೇಲೆ ಬಿದ್ದು ರೈತನೋರ್ವ ಸ್ಥಳದಲ್ಲೇ ಸಾವನ್ನಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಚನ್ನಮ್ಮನ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಚನ್ನಮ್ಮನ ಕೊಪ್ಪಲು ಗ್ರಾಮದ ರೈತ ಕರಿಗೌಡ (60) ಮೃತ ದುರ್ದೈವಿ. ಜಮೀನಿನ ಬಳಿ ಹೊಸ ವಿದ್ಯುತ್ ಪರಿವರ್ತಕ ಅಳವಡಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಚೆಸ್ಕಾಂ ಸಿಬ್ಬಂದಿ ವಿದ್ಯುತ್ ಪರಿವರ್ತಕ ಅಳವಡಿಸಿಕೊಡುತ್ತೇವೆ ಎಂದು ಶುಕ್ರವಾರ ಸಂಜೆ 7 ಗಂಟೆಯ ಸುಮಾರಿಗೆ ರೈತ ಕರಿಗೌಡ ಅವರನ್ನು ಗದ್ದೆಯ ಬಳಿ ಕರೆದೊಯ್ದಿದ್ದಾರೆ.

ಕತ್ತಲೆಯಲ್ಲಿ ಟಿ.ಸಿ.ಅಳವಡಿಸುವಾಗ ಮೇಲಿಂದ ಚೈನ್ ಪೋಲ್ ಕಬ್ಬಿಣದ ರಾಡು ರೈತ ಕರಿಗೌಡ ಅವರ ತಲೆಯ ಮೇಲೆ ಬಿದ್ದ ಪರಿಣಾಮ ತೀವ್ರ ರಕ್ತಸ್ತ್ರಾವವಾಗಿ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಕರಿಗೌಡರು ಮೃತರಿಂದ ಆಕ್ರೋಶಗೊಂಡಿರುವ ಕುಟುಂಬಸ್ಥರು, ಇದು ಚೆಸ್ಕಾಂ ಇಲಾಖೆಯ ಅಧಿಕಾರಿಗಳ ಲೋಪವಾಗಿದ್ದು, ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಅಮಾನತ್ತು ಮಾಡಬೇಕು. ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ಮತ್ತು ಕುಟುಂಬದ ಒಬ್ಬರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಆಗ್ರಹಿಸಿ ಪತ್ನಿ ಶಿವನಂಜಮ್ಮ ಅವರು ಕೊಪ್ಪ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಬೆಳ್ತಂಗಡಿಯಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಶಂಕೆ(ಬೆಳ್ತಂಗಡಿ): ಇನ್ನು ಬೆಳ್ತಂಗಡಿಯ ಮನೆಯೊಂದರಲಿ ಶೌಚಾಲಯಕ್ಕೆ ಹೋದ ಶಾಲಾ ವಿದ್ಯಾರ್ಥಿನಿಯೊಬ್ಬಳು ಅಸಜ ಸ್ಥಿತಿಯಲ್ಲಿ ಮೃತಪಟ್ಟಿರುವ ಘಟನೆ ಬೆಳ್ತಂಗಡಿಯ ಗೇರುಕಟ್ಟೆಯಲ್ಲಿ ನಡೆದಿದ್ದು ಆತ್ಮಹತ್ಯೆ ಎಂದು ಶಂಕಿಸಲಾಗಿದೆ. ಕಳಿಯ ಗ್ರಾಮದ ಗೇರುಕಟ್ಟೆಯಲ್ಲಿರುವ ಮನ್ಸಾರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಇಂದು ಶಾಲಾ ಸಮೀಪದ ಮನೆಯೊಂದಕ್ಕೆ ಹೋಗಿ ಮನೆಯ ಮಹಿಳೆಗೆ ಶೌಚಾಲಯಕ್ಕೆ ಹೋಗಬೇಕು ಎಂದು ಕೇಳಿಕೊಂಡು ಶೌಚಾಲಯಕ್ಕೆ ಹೋಗಿದ್ದಾಳೆ.

ತುಂಬಾ ಹೊತ್ತಾದರೂ ವಿದ್ಯಾರ್ಥಿನಿ ಹೊರಗೆ ಬಾರದೇ ಇದ್ದಾಗ ಅನುಮಾನಗೊಂಡು ಮಹಿಳೆ ಬಾಗಿಲು ಬಡಿದಿದ್ದಾರೆ ಅದರೂ ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳೀಯರು ಬಂದು ಬಾಗಿಲು ಮುರಿದಾಗ ವಿದ್ಯಾರ್ಥಿನಿ ಅಸಹಜ ಸ್ಥಿತಿಯಲ್ಲಿ ಮೃತಪಟ್ಟಿರುವುದು ಕಂಡು ಬಂದಿದ್ದು ಆತ್ಮಹತ್ಯೆ ಎಂದು ಶಂಕಿಸಲಾಗಿದೆ. ಮೃತ ವಿದ್ಯಾರ್ಥಿನಿ ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಪ್ಪೆಟ್ಟಿಯ ಉದ್ಯಮಿಯೊಬ್ಬರ ಮಗಳು ಎನ್ನಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಮಂಗಳೂರು:ಅನಾರೋಗ್ಯ ಪೀಡಿತ ಪತ್ನಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ!

Last Updated : Jan 28, 2023, 10:28 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.