ETV Bharat / state

ಮೈಸೂರು ದಸರಾ ಸಂಭ್ರಮ: ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆ

author img

By

Published : Oct 7, 2021, 10:47 PM IST

Cultural Program in mysore
ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ

ನಾಡಹಬ್ಬ ದಸರಾ ಹಿನ್ನೆಲೆಯಲ್ಲಿ ಇಂದು ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ಇದಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಚಾಲನೆ ನೀಡಿದರು.

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ನಿಮಿತ್ತ ಅರಮನೆ ಆವರಣದಲ್ಲಿ ಆಯೋಜಿಸಿದ್ದ ದಸರಾ ಸಾಂಸ್ಕ್ರತಿಕ ಕಾರ್ಯಕ್ರಮಗಳಿಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಉದ್ಘಾಟಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಬಳಿಕ ಬಸವರಾಜ ಹೊರಟ್ಟಿ ಮಾತನಾಡಿ ಸಂಸ್ಕಾರ, ಸಂಸ್ಕೃತಿಗೆ ಮೈಸೂರು ಹೆಸರು ವಾಸಿಯಾಗಿದೆ. ದಸರಾ ಮಹೋತ್ಸವ ಕರ್ನಾಟಕದಲ್ಲಿ ಮಾತ್ರವಲ್ಲದೇ ದೇಶ, ವಿದೇಶಗಳಲ್ಲಿ ಎಲ್ಲರೂ ನೋಡುವಂತಹ ವೈವಿಧ್ಯಮಯವಾದ ಹಬ್ಬವಾಗಿದೆ. ಇಂತಹ ಅಪರೂಪದ ಸಮಾರಂಭದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿರುವುದು ಚಿರಸ್ಮರಣೀಯ ಎಂದು ಹರ್ಷ ವ್ಯಕ್ತಪಡಿಸಿದರು.

ಸಾಂಸ್ಕೃತಿಕತೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ಇಡೀ ರಾಷ್ಟ್ರಕ್ಕೆ ಮೈಸೂರು ಮಾದರಿಯಾಗಿದೆ. ಇದಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಅಪಾರವಾಗಿದೆ. ಮೈಸೂರಿನ ರಾಜರಾಗಿ ಪ್ರಜಾಪ್ರಭುತ್ವದ ಆಡಳಿತ ನೀಡುತ್ತಾ ನಾಡಿಗೆ ಶಕ್ತಿ ತುಂಬಿದ್ದು, ಅವಿಸ್ಮರಣೀಯ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಸರ್ಕಾರ ಕಲೆ ಮತ್ತು ಸಂಸ್ಕೃತಿಗೆ ಮಹತ್ವ ನೀಡಿ ದಸರಾ ಮಹೋತ್ಸವದಲ್ಲಿ ಸಾಂಸ್ಕೃತಿಕ ಅಲೆ ನಿರ್ಮಾಣ ಮಾಡುವ ಪ್ರಯತ್ನ ನಡೆಸಿರುವುದು ಸಂತಸದ ಸಂಗತಿ‌ಯಾಗಿದೆ. ಮೈಸೂರಿನ ಸಂಸ್ಕೃತಿ ಸೇರಿದಂತೆ ಹತ್ತು- ಹಲವು ವಿಶೇಷತೆಗಳನ್ನು ವೇದಿಕೆಯಲ್ಲಿ ಸ್ಮರಿಸುವ ಮೂಲಕ ಉನ್ನತ ಸಂಸ್ಕೃತಿಯನ್ನು ಮೈಗೂಡಿಸಿಕೊಂಡು ನಾಡನ್ನು ಇನ್ನಷ್ಟು ಸಮೃದ್ಧಿಗೊಳಿಸಲು ಎಲ್ಲರೂ ಮುಂದಾಗಬೇಕೆಂದು ಆಶಯ ವ್ಯಕ್ತಪಡಿಸಿದರು.

Delegates honored AV Anand
ಖ್ಯಾತ ಮೃದಂಗ ವಿದ್ವಾಂಸಕ ಎ.ವಿ.ಆನಂದ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದ ಗಣ್ಯರು

ಇದೇ ಸಂದರ್ಭದಲ್ಲಿ ಖ್ಯಾತ ಮೃದಂಗ ವಿದ್ವಾಂಸರಾದ ಎ.ವಿ.ಆನಂದ್ ಅವರಿಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವ ವಿ. ಸುನಿಲ್ ಕುಮಾರ್, ಶಾಸಕ ಎಸ್.ಎ.ರಾಮದಾಸ್, ಜಿ.ಟಿ.ದೇವೇಗೌಡ, ಎಲ್.ನಾಗೇಂದ್ರ, ಮೇಯರ್ ಸುನಂದಾ ಪಾಲನೇತ್ರ, ನಿಗಮ ಮಂಡಳಿ ಅಧ್ಯಕ್ಷರಾದ ಹೆಚ್.ವಿ. ರಾಜೀವ್, ರಘು ಆರ್.ಕೌಟಿಲ್ಯ, ಎನ್.ವಿ.ಫಣೀಶ್, ಅಪ್ಪಣ್ಣ , ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿಲ್ಲಾ ಪಂಚಾಯತ್ ಸಿಇಒ ಎ.ಎಂ.ಯೋಗೀಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ರಂಗಪ್ಪ, ಸಹಾಯಕ ನಿರ್ದೇಶಕ ಹೆಚ್. ಚೆನ್ನಪ್ಪ, ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ: ಕಳೆಗಟ್ಟಿದ ಸಂಪ್ರದಾಯ ದಸರಾ,ಅರಮನೆ ಖಾಸಗಿ ದರ್ಬಾರ್ ಸೊಬಗು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.