ETV Bharat / state

ವರುಣಾದಲ್ಲಿ ಸಿದ್ದರಾಮಯ್ಯರನ್ನು ಗೆಲ್ಲಿಸಲು ಬಿಜೆಪಿ, ಕಾಂಗ್ರೆಸ್ ಒಳ ಒಪ್ಪಂದ: ಹೆಚ್​ಡಿಕೆ

author img

By

Published : Apr 6, 2023, 5:31 PM IST

ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ವರುಣಾದ ಕ್ಷೇತ್ರದಲ್ಲಿ ಒಳ ಒಪ್ಪಂದ ಮಾಡಿಕೊಂಡಿವೆ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

HD Kumaraswamy
ಪಂಚರತ್ನ ಯಾತ್ರೆಯ ವೇಳೆ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸೇಬು ಹಣ್ಣಿನಿಂದ ಸಿದ್ಧಪಡಿಸಿದ್ದ ಬೃಹತ್​ ಗ್ರಾತದ ಹಾರವನ್ನು ಹಾಕಲಾಯಿತು.

ಪಂಚರತ್ನ ಯಾತ್ರೆಯ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ.ಕುಮಾರಸ್ವಾಮಿ

ಮೈಸೂರು: ''ಬಿಜೆಪಿ ಮತ್ತು ಕಾಂಗ್ರೆಸ್ ವರುಣಾದಲ್ಲಿ ಸಿದ್ದರಾಮಯ್ಯನವರನ್ನು ಗೆಲ್ಲಿಸಲು ಒಳ ಒಪ್ಪಂದ ಮಾಡಿಕೊಂಡಿವೆ. ಅಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ನಾವೇ ಪೈಪೋಟಿ ಮಾಡಬೇಕಾಗಿದೆ'' ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಂಪಲಾಪುರ ಗ್ರಾಮದಲ್ಲಿಂದು ಪಂಚರತ್ನ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು.

''ವರುಣಾದಲ್ಲಿ ಸಿದ್ದರಾಮಯ್ಯ ಗೆಲ್ಲಲು ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಬಿಜೆಪಿ ಸಮರ್ಥ ಅಭ್ಯರ್ಥಿಯನ್ನು ಹಾಕುತ್ತಿಲ್ಲ. ಅಲ್ಲಿ ಜೆಡಿಎಸ್ ಮಾತ್ರ ಸ್ಪರ್ಧೆ ನೀಡುತ್ತದೆ. ಮೈಸೂರು ಜಿಲ್ಲೆಯಲ್ಲಿ ಜನರಿಂದ ಜೆಡಿಎಸ್​ಗೆ ಉತ್ತಮ ಬೆಂಬಲವಿದೆ. ಒಟ್ಟು 11 ಕ್ಷೇತ್ರಗಳಲ್ಲಿ ಪೈಕಿ 8ರಿಂದ 9 ಕ್ಷೇತ್ರಗಳಲ್ಲಿ ಜೆಡಿಎಸ್​ ಗೆಲುವು ಸಾಧಿಸಲಿದೆ'' ಎಂದು ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್ ಟಿಕೆಟ್: ಎರಡನೇ ಪಟ್ಟಿಯಲ್ಲೂ ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಸಸ್ಪೆನ್ಸ್..!

ಜೆಡಿಎಸ್​ನಿಂದ ಹೋದವರಿಗೆ ಕಾಂಗ್ರೆಸ್​ ಟಿಕೆಟ್: ''ಜೆಡಿಎಸ್​ನಿಂದ ಹೊರ ಹೋದವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಇದು ಚುನಾವಣೆ ಸಂದರ್ಭದಲ್ಲಿ ಸಾಮಾನ್ಯ. ಜೆಡಿಎಸ್​ನಿಂದ ಹೋದ ದತ್ತ ಅವರಿಗೆ ಟಿಕೆಟ್ ನೀಡಿಲ್ಲ. ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ'' ಎಂದರು.

ಇದನ್ನೂ ಓದಿ: ಅಳೆದು ತೂಗಿ ಪ್ರಕಟವಾಯ್ತು ಕಾಂಗ್ರೆಸ್ ಎರಡನೇ ಪಟ್ಟಿ..! ಹೀಗಿದೆ ಟಿಕೆಟ್​ ಹಂಚಿಕೆ ಹಿಂದಿನ ಲೆಕ್ಕಾಚಾರ!

2 ದಿನಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಅಂತಿಮ: ''ಕಾದು ನೋಡುವ ತಂತ್ರವಿಲ್ಲ. ನಾನು ಒಬ್ಬನೇ ಎಲ್ಲವನ್ನೂ ನೋಡಿಕೊಳ್ಳಬೇಕು. ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದಿಂದ ಸಿದ್ಧತಾ ಕಾರ್ಯಗಳು ಜರುಗುತ್ತಿವೆ. ನಿರಂತರವಾಗಿ ನಡೆಯುತ್ತಿರುವ ಕಾರ್ಯಕ್ರಮಗಳ ಒತ್ತಡ, ಸಮಯದ ಅಭಾವದಿಂದ ಎರಡನೇ ಪಟ್ಟಿ ತಡವಾಗಿದ್ದು, ಇನ್ನೆರೆಡು ದಿನಗಳಲ್ಲಿ ಉಳಿದೆಲ್ಲಾ ಅಭ್ಯರ್ಥಿಗಳನ್ನು ಒಂದೇ ಪಟ್ಟಿಯಲ್ಲಿ ಅಂತಿಮಗೊಳಿಸಲಾಗುವುದು'' ಎಂದು ತಿಳಿಸಿದರು.

ಪಂಚರತ್ನ ಯೋಜನೆಗಳನ್ನು ಜಾರಿಗೆ ತರಲು ಜನರ ಮೇಲೆ ನಾನು ಒಂದು ರೂಪಾಯಿಯನ್ನೂ ತೆರಿಗೆ ಹಾಕುವುದಿಲ್ಲ. ಒಂದು ರೂಪಾಯಿ ಕೂಡಾ ಸಾಲ ತರೋದಿಲ್ಲ ಎಂದು ಹೆಚ್.ಡಿ.ಕುಮಾರಸ್ವಾಮಿ ಈಗಾಗಲೇ ತಿಳಿಸಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಿನ್ನೆ ಸಂಜೆ ನಡೆದ ಪಂಚರತ್ನ ರಥಯಾತ್ರೆ ಕಾರ್ಯಕ್ರಮದಲ್ಲಿ ಅವರು ಈ ಬಗ್ಗೆ ಮಾತನಾಡಿದ್ದರು. ''ಬೆಂಗಳೂರಿನಲ್ಲಿ ಬಡತನ ನಿವಾರಿಸುವ ಕುರಿತು ನಾನು ರೂಪಿಸಿರುವ ಪಂಚರತ್ನ ಯೋಜನೆಗಳು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತವೆ. ವಿಶ್ವದಲ್ಲೇ ಹೆಸರು ಮಾಡಿರುವ ಮಹಾನಗರದಲ್ಲಿ ಬಡತನ ಮಾತ್ರ ಇನ್ನೂ ಕಡಿಮೆಯಾಗದೇ ಇರುವುದು ದುರ್ದೈವ. ಬಡತನಕ್ಕೆ ಪರಿಹಾರವನ್ನು ಒದಗಿಸಲು ಪಂಚರತ್ನಗಳು ಪೂರಕವಾಗಿದೆ'' ಎಂದಿದ್ದರು.

ಇದನ್ನೂ ಓದಿ: ಅಳೆದು ತೂಗಿ ಪ್ರಕಟವಾಯ್ತು ಕಾಂಗ್ರೆಸ್ ಎರಡನೇ ಪಟ್ಟಿ..! ಹೀಗಿದೆ ಟಿಕೆಟ್​ ಹಂಚಿಕೆ ಹಿಂದಿನ ಲೆಕ್ಕಾಚಾರ!

ಗುರುಮಠಕಲ್ ಕ್ಷೇತ್ರ: ಬಾಬುರಾವ್ ಚಿಂಚನಸೂರ್‌ಗೆ ಕಾಂಗ್ರೆಸ್‌ ಟಿಕೆಟ್‌

ETV Bharat Logo

Copyright © 2024 Ushodaya Enterprises Pvt. Ltd., All Rights Reserved.