ETV Bharat / state

ಈ ವರ್ಷ ಬಾಲ್ಯ ವಿವಾಹಗಳು ಕಡಿಮೆಯಾಗಿವೆ : ಸಚಿವೆ ಶಶಿಕಲಾ‌ ಜೊಲ್ಲೆ

author img

By

Published : Jun 19, 2021, 8:12 PM IST

ಕೋವಿಡ್ 3ನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಸರ್ಕಾರ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ. 2ನೇ ಅಲೆಯಲ್ಲಿ ರಾಜ್ಯದಲ್ಲಿ 48 ಮಕ್ಕಳು ಕೋವಿಡ್​ನಿಂದ ತಂದೆ-ತಾಯಿಯನ್ನು ಕಳೆದುಕೊಂಡಿದ್ದಾರೆ..

hild-marriages-are-down-this-year
ಸಚಿವೆ ಶಶಿಕಲಾ‌ ಜೊಲ್ಲೆ

ಮೈಸೂರು : ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಕಡಿಮೆ ಬಾಲ್ಯವಿವಾಹ ಪ್ರಕರಣಗಳು ರಾಜ್ಯದಲ್ಲಿ‌ ಬೆಳಕಿಗೆ ಬಂದಿವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅಂಕಿ-ಅಂಶಗಳ ಸಮೇತ ವಿವರಿಸಿದ್ದಾರೆ.

ಬಾಲ್ಯ ವಿವಾಹ ಪ್ರಕರಣಗಳು ಇಳಿಕೆ ಕಂಡಿವೆ ಅಂತಾರೆ ಸಚಿವೆ ಶಶಿಕಲಾ‌ ಜೊಲ್ಲೆ

ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ತಮ್ಮ ಇಲಾಖೆಗೆ ಸಂಬಂಧಿಸಿದ ಸಭೆಯ ನಂತರ ಮಾತನಾಡಿದ ಅವರು, ಈ ವರ್ಷ ರಾಜ್ಯಾದ್ಯಂತ 3589 ಬಾಲ್ಯವಿವಾಹ ಬಗ್ಗೆ ದೂರು ಬಂದಿದ್ದು, ಅದರಲ್ಲಿ 3279 ಬಾಲ್ಯವಿವಾಹಗಳನ್ನು ಇಲಾಖೆ ವತಿಯಿಂದ ತಡೆಯಲಾಗಿದೆ.

ಈ ಸಂಬಂಧ 2008 ಎಫ್‌ಐಆರ್‌ ದಾಖಲಿಸಲಾಗಿದೆ. ಬಾಲ್ಯವಿವಾಹ ತಪ್ಪು ಎಂದು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ NGOಗಳು ಕೆಲಸ ಮಾಡುತ್ತಿದ್ದಾರೆ ಎಂದರು.

ಕೋವಿಡ್ 3ನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಸರ್ಕಾರ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ. 2ನೇ ಅಲೆಯಲ್ಲಿ ರಾಜ್ಯದಲ್ಲಿ 48 ಮಕ್ಕಳು ಕೋವಿಡ್​ನಿಂದ ತಂದೆ-ತಾಯಿಯನ್ನು ಕಳೆದುಕೊಂಡಿದ್ದಾರೆ.

900 ಮಕ್ಕಳು ಏಕಪೋಷಕ ಮಕ್ಕಳಾಗಿದ್ದಾರೆ. ರಾಜ್ಯ ಸರ್ಕಾರ ಬಾಲ ಸೇವಾ ಯೋಜನೆಯನ್ನು ಜಾರಿಗೊಳಿಸಿದ್ದು, ಮಕ್ಕಳನ್ನು ದತ್ತು ಪಡೆದರು. ಇಲಾಖೆ ಕೊಂಡಿಯಾಗಿ ಅನಾಥ ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಕೆಲಸ ಮಾಡಲಿದೆ ಎಂದರು.


ಓದಿ: Covid Update: ರಾಜ್ಯದಲ್ಲಿಂದು 5,815 ಸೋಂಕಿತರು ಪತ್ತೆ.. 161 ಮಂದಿ ಬಲಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.