ETV Bharat / state

ಕೊಲೆ ಪ್ರಕರಣದ ಪರಿಹಾರದಲ್ಲಿ ಸರ್ಕಾರದಿಂದ ತಾರತಮ್ಯ: ಡಾ.ಯತೀಂದ್ರ ಸಿದ್ದರಾಮಯ್ಯ

author img

By

Published : Aug 1, 2022, 5:57 PM IST

ಸರ್ಕಾರದ ಅನ್ಯಾಯಗಳನ್ನು ಎತ್ತಿ ತೋರಿಸುವುದೇ ವಿರೋಧಪಕ್ಷಗಳ ಕರ್ತವ್ಯ. ಆ ನಿಟ್ಟಿನಲ್ಲಿ ಸಿದ್ದರಾಮಯ್ಯನವರು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದಾರೆ ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ
ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಒಂದು ಕೊಲೆ ಪ್ರಕರಣದಲ್ಲಿ ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡಿ, ಮತ್ತೆರಡು ಕುಟುಂಬಗಳಿಗೆ ಪರಿಹಾರ ನೀಡದಿರುವುದು ಮಲತಾಯಿ ಧೋರಣೆ ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.


ನಗರದಲ್ಲಿ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಸರ್ಕಾರ ಸಾವಿನಲ್ಲಿಯೂ ರಾಜಕೀಯ ಮಾಡಬಾರದು. ಕೊಲೆಯಾದ ಯುವಕರ ಕುಟುಂಬಗಳಿಗೆ ಪರಿಹಾರ ಕೊಡಬೇಕು. ಸರ್ಕಾರದ ಅನ್ಯಾಯಗಳನ್ನು ಎತ್ತಿ ತೋರಿಸುವುದೇ ವಿರೋಧಪಕ್ಷಗಳ ಕರ್ತವ್ಯ. ಆ ನಿಟ್ಟಿನಲ್ಲಿ ಸಿದ್ದರಾಮಯ್ಯನವರು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದಾರೆ. ವಿಪಕ್ಷ ನಾಯಕರ ಸಲಹೆಗಳನ್ನು ಸ್ವೀಕರಿಸಿದರೆ ಒಳ್ಳೆಯದು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯದ ಜನತೆ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ" ಎಂದರು.

ನಂಜನಗೂಡು ತಾಲೂಕಿನ ವರುಣ ಕ್ಷೇತ್ರಕ್ಕೆ ಸೇರುವ ಬೊಕ್ಕಳ್ಳಿ ಗ್ರಾಮದಲ್ಲಿ ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಯುವಕನ ಕುಟುಂಬಕ್ಕೆ ಸಾಂತ್ವನ ಹೇಳಿರುವ ಅವರು ಧನಸಹಾಯ ನೀಡಿದರು.

ಇದನ್ನೂ ಓದಿ: 'ಸಿದ್ದರಾಮಯ್ಯ ಅವರೇ ಮುಂದಿನ ಸಿಎಂ’: ಹುಬ್ಬಳ್ಳಿ ಅಭಿಮಾನಿ ಬಳಗದಿಂದ ಆಲ್ಬಂ ಸಾಂಗ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.