ETV Bharat / state

ಕಾಂಗ್ರೆಸ್​ ಸರ್ಕಾರಕ್ಕೆ ಅಭದ್ರತೆ ಕಾಡುತ್ತಿದೆ: ಸಿ.ಟಿ.ರವಿ

author img

By

Published : Aug 18, 2023, 10:02 PM IST

Updated : Aug 18, 2023, 11:02 PM IST

ಸಿ ಟಿ.ರವಿ
ಸಿ ಟಿ.ರವಿ

135 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬಂದ ಎರಡೇ ತಿಂಗಳಲ್ಲಿ ಕಾಂಗ್ರೆಸ್‌ ಶಾಸಕರಲ್ಲಿ ಅಸಮಾಧಾನ ಉಂಟಾಗಿದೆ ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಟೀಕಿಸಿದರು.

ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಎರಡೇ ತಿಂಗಳಿಗೆ ಅವರ ಶಾಸಕರಲ್ಲೇ ಅಸಮಾಧಾನ ಉಂಟಾಗಿದ್ದು, ಇದರಿಂದ ಸರ್ಕಾರಕ್ಕೆ ಅಭದ್ರತೆ ಕಾಡುತ್ತಿದೆ. ಹೀಗಾಗಿ ಅಪರೇಷನ್ ಹಸ್ತಕ್ಕೆ ಮುಂದಾಗಿದ್ದಾರೆ ಎಂದು ಮೈಸೂರಿನಲ್ಲಿ ಬಿಜೆಪಿ ಮುಖಂಡ ಸಿ.ಟಿ.ರವಿ ಹೇಳಿದರು.

ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಜಿಲ್ಲಾವಾರು ಶಾಸಕರ, ಸಚಿವರ ಸಭೆ ನಡೆಸುತ್ತಿದ್ದಾರೆ. ನಮ್ಮ ಪಕ್ಷದ ಮುಖಂಡರಾದ ಬಸವರಾಜ ಪಾಟೀಲ್ ಯತ್ನಾಳ್ ಈ ಸರ್ಕಾರ ಆರು ತಿಂಗಳಲ್ಲಿ ಪತನಗೊಳ್ಳಲಿದೆ ಎಂದಿದ್ದಾರೆ. ಹೀಗಾಗಿ ಕಾಂಗ್ರೆಸ್‌ನವರು ಭಯಗೊಂಡಿದ್ದಾರೆ. ನಮ್ಮಲ್ಲಿರುವ ಯಾರೂ ಕೂಡಾ ಕಾಂಗ್ರೆಸ್​ಗೆ ಹೋಗುವುದಿಲ್ಲ. ಇದರ ಬಗ್ಗೆ ಪಕ್ಷದ ಶಾಸಕರ ಜೊತೆ ಮಾತನಾಡುತ್ತೇನೆ ಎಂದರು.

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ರಾಜ್ಯಕ್ಕೆ ದುರ್ದೆಸೆ ಶುರುವಾಗಿದೆ. 200 ಯುನಿಟ್ ಉಚಿತ ವಿದ್ಯುತ್ ನೀಡಿದ್ದಾರೆ. ಆದರೆ ಅನಿರ್ದಿಷ್ಟಾವಧಿ ಪವರ್ ಕಟ್ ಮಾಡುತ್ತಿದ್ದು, ಮಳೆ ಪ್ರಮಾಣವೂ ಕಡಿಮೆಯಾಗಿದೆ. ನೌಕರರಿಗೆ ಸಂಬಳ ಕೊಡಲು ಸರ್ಕಾರದ ಕೈಯಲ್ಲಿ ಆಗುತ್ತಿಲ್ಲ. ಬಿಜೆಪಿ ಅಧಿಕಾರದಲ್ಲಿದ್ದಾಗ ಕೆಆರ್​ಎಸ್ ಭರ್ತಿಯಾಗಿರುತ್ತಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲ ಕೆಆರ್​ಎಸ್ ಖಾಲಿ, ಪವರ್​ ಕಟ್, ಲೋಡ್ ಶೆಡ್ಡಿಂಗ್ ಆಗುತ್ತವೆ ಎಂದು ಟೀಕಿಸಿದರು.

ನಾಳೆ ಸೋಮಶೇಖರ್ ಜೊತೆ ಮಾತನಾಡುತ್ತೇನೆ: ಮುಂದಿನ ಲೋಕಸಭೆ ಚುನಾವಣೆಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಮೋದಿಯವರ ನಾಯಕತ್ವದಲ್ಲಿ ಮತ್ತೊಮ್ಮೆ ನಾವು ಅಧಿಕಾರಕ್ಕೆ ಬರುತ್ತೇವೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾವು ಮಾಡಿದ ತಪ್ಪಿನಿಂದ ಸೋತಿದ್ದೇವೆ. ಕಾಂಗ್ರೆಸ್​ನ ಗ್ಯಾರಂಟಿ ಹಾಗೂ ಪೇಸಿಎಂ ಅಪಪ್ರಚಾರದಿಂದ ಅವರು ಗೆದ್ದರು. ಆದರೆ ಮುಂದಿನ ಲೋಕಸಭೆಯಲ್ಲಿ, ಮೋದಿಯವರ ನೇತೃತ್ವದಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿದ ಸಿ.ಟಿ.ರವಿ, ಶಾಸಕರಾದ ಸೋಮಶೇಖರ್ ಜೊತೆ ನಾಳೆ ಮಾತನಾಡುತ್ತೇನೆ. ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದುಕೊಂಡು ಉಳಿದವರ ಜೊತೆ ಚರ್ಚಿಸುತ್ತೇನೆ ಎಂದು ಹೇಳಿದರು.

ಕಾಂಗ್ರೆಸ್ ಶಾಸಕರಲ್ಲೇ ಅಸಮಾಧಾನ: ಕಾಂಗ್ರೆಸ್​ಗೆ ಹೋಗುವವರನ್ನು ಬುದ್ಧಿವಂತರು ಎಂದು ಹೇಳಲು ಸಾಧ್ಯವಿಲ್ಲ. ಕಾಂಗ್ರೆಸ್ ಶಾಸಕರಲ್ಲೇ ಸಮಾಧಾನ ಇಲ್ಲ. ಚುನಾವಣೆ ನಡೆದ ಎರಡು ತಿಂಗಳಲ್ಲೇ ಹಿರಿಯ ಶಾಸಕರೆಲ್ಲ ಸಿಎಂಗೆ ಪತ್ರ ಬರೆಯುತ್ತಾರೆ ಎಂದರೆ ಅದರ ಅರ್ಥವೇನು ಎಂದು ಪ್ರಶ್ನಿಸಿದರು. ಬಳಿಕ ಪಕ್ಷದ ಮುಣದಿನ ಜವಾಬ್ದಾರಿ ಬಗ್ಗೆ ಪ್ರತಿಕ್ರಿಯೆ ನೀಡಿ, ಮುಂದಿನ ದಿನಗಳಲ್ಲಿ ಪಕ್ಷ ನನಗೆ ಏನು ಜವಾಬ್ದಾರಿ ಕೊಡುತ್ತದೋ ಅದನ್ನು ನಿರ್ವಹಿಸುತ್ತೇನೆ. ನಾನೊಬ್ಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.
ಇದನ್ನೂ ಓದಿ: ಲೋಕಸಭೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ ಸಚಿವ ಎಸ್​.ಎಸ್.ಮಲ್ಲಿಕಾರ್ಜುನ್​ ಪತ್ನಿ

Last Updated :Aug 18, 2023, 11:02 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.