ETV Bharat / state

ಚುನಾವಣೆ ಯಾವಾಗ ಬಂದರೂ ಎದುರಿಸಲು ಕಾಂಗ್ರೆಸ್ ಸಿದ್ಧ: ಡಿಕೆಶಿ

author img

By

Published : Jul 15, 2022, 5:27 PM IST

ಸರ್ಕಾರದ ವಿರುದ್ಧ ಜನರಿಗೆ ಆಕ್ರೋಶವಿದೆ. ಈ ಆಕ್ರೋಶ ಹೆಚ್ಚಾಗುವ ಮುನ್ನ ಚುನಾವಣೆ ಮಾಡುವ ಪ್ಲಾನ್​ ಇದೆಯೆನಿಸುತ್ತಿದೆ. ಆದರೆ ಯಾವುದೇ ಸಂದರ್ಭದಲ್ಲೂ ಚುನಾವಣೆ ಬಂದರೆ ಎದುರಿಸಲು ಕಾಂಗ್ರೆಸ್ ಸಿದ್ಧವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಖಡಕ್​ ಸಂದೇಶ ರವಾನಿಸಿದ್ದಾರೆ.

KPCC President DK Shivakumar
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್

ಮೈಸೂರು: ಚುನಾವಣೆ ಯಾವಾಗ ಬಂದರೂ ನಾವು ಎದುರಿಸಲು ಸಿದ್ಧರಿದ್ದೇವೆ ಎಂದು ಮೈಸೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ಜಲದರ್ಶಿನಿ ಅತಿಥಿ ಗೃಹದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಅವಧಿಗೂ ಮುನ್ನ ಚುನಾವಣೆ ಬರುವ ಸಾಧ್ಯತೆಯಿದೆ ಎಂಬ ವಂದಂತಿ ಇದ್ದು, ಬಿಜೆಪಿ ಎರಡು ದಿನಗಳ ಕಾರ್ಯಾಗಾರ ನಡೆಸುತ್ತಿದೆ. ಅವರಿಗೆ ಸೋಲುವ ಭಯವಿದೆ. ಸರ್ಕಾರದ ವಿರುದ್ಧ ಜನರಿಗೆ ಆಕ್ರೋಶವಿದೆ. ಈ ಆಕ್ರೋಶ ಹೆಚ್ಚಾಗುವ ಮುನ್ನ ಚುನಾವಣೆ ಮಾಡುವ ಪ್ಲಾನ್​​ ಇದೆಯೆನಿಸುತ್ತಿದೆ. ಆದರೆ, ಯಾವುದೇ ಸಂದರ್ಭದಲ್ಲೂ ಚುನಾವಣೆ ಬಂದರೆ ಎದುರಿಸಲು ಕಾಂಗ್ರೆಸ್ ಸಿದ್ಧವಿದೆ ಎಂದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್

ಸರ್ಕಾರದ ವಿರುದ್ಧ ಜನರ ಆಕ್ರೋಶ: ಬಾಗಲಕೋಟೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೀಡಿದ ಹಣವನ್ನು ವಾಪಸ್ ನೀಡಿದ ಬಗ್ಗೆ ಪ್ರತಿಕ್ರಿಯಿಸಿ, ಆ ಘಟನೆ ಸಂಬಂಧ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ರಾಜ್ಯದ ಅಲ್ಪಸಂಖ್ಯಾತರು, ಸಾಮಾನ್ಯ ಜನರು ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ. ಅವರ ನೋವನ್ನು ಸರ್ಕಾರ ಗಮನಿಸಬೇಕು. ಕರ್ನಾಟಕ ಶಾಂತಿಯ ತೋಟ ಅದಕ್ಕೆ ಧಕ್ಕೆ ಬಾರದ ರೀತಿಯಲ್ಲಿ ಸರ್ಕಾರ ಕೆಲಸ ಮಾಡಬೇಕು ಎಂದು ಹೇಳಿದರು.

ಬಿಜೆಪಿ ಅಸೂಯೆಗೆ ಮದ್ದಿಲ್ಲ: ಸಿದ್ದರಾಮೋತ್ಸವದ ಬಗ್ಗೆ ಬಿಜೆಪಿ ಅವರ ಅಸೂಯೆಗೆ ಮದ್ದಿಲ್ಲ. ಚುನಾವಣಾ ಸಂದರ್ಭದಲ್ಲಿ ಬಿಜೆಪಿ ಅವರು ನೀಡಿದ ಭರವಸೆಗಳನ್ನು ಈಡೇರಿಸಿಲ್ಲ. ಆದರೆ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ನೀಡಿದ್ದ ಪ್ರಣಾಳಿಕೆಯನ್ನು ಭಾಗಶಃ ಈಡೇರಿಸಿದ್ದಾರೆ. ಇದು ಸಹ ಬಿಜೆಪಿಯ ಅಸೂಯೆಗೆ ಕಾರಣವಾಗಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿ ಅವರ ಅಸೂಯೆಗೆ ಮುದ್ದು ಕೊಡುತ್ತೇವೆ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ: ಮಳೆ ಹಾನಿ ಪ್ರದೇಶಗಳ ಮೂಲ ಸೌಕರ್ಯ ಮರು ಸ್ಥಾಪನೆಗೆ 500 ಕೋಟಿ ರೂ. ಬಿಡುಗಡೆ: ಸಿಎಂ ಆದೇಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.