ETV Bharat / state

ಯಡಿಯೂರಪ್ಪ, ಶಾ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್​​ ಪ್ರತಿಭಟನೆ

author img

By

Published : Nov 4, 2019, 2:26 PM IST

ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ನಗರ ಹಾಗೂ ಗ್ರಾಮಾಂತರ ಕಾಂಗ್ರೆಸ್ ಘಟಕದಿಂದ ಗಾಂಧಿ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.

ಕಾಂಗ್ರೇಸ್ ಪ್ರತಿಭಟನೆ

ಮೈಸೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ನಗರ ಹಾಗೂ ಗ್ರಾಮಾಂತರ ಕಾಂಗ್ರೆಸ್ ಘಟಕದಿಂದ ಗಾಂಧಿ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.

ಕಾಂಗ್ರೆಸ್​ ಪ್ರತಿಭಟನೆ

ಹುಬ್ಬಳಿಯಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮುಖ್ಯಮಂತ್ರಿ ಬಿಎಸ್​ವೈ ಅವರು ಮಾತನಾಡಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ‌‌. ಆಪರೇಷನ್ ಕಮಲ ಮಾಡುವಂತೆ ಅಮಿತ್ ಶಾ ಸೂಚನೆ ಕೊಟ್ಟಿದ್ದಾರೆ. ಅದರಂತೆ ಕೆಲಸ ಮಾಡಲಾಗಿದೆ ಎಂದು ಬಿಎಸ್​​ವೈ ಹೇಳಿದ್ದಾರೆ. ಹಾಗಾಗಿ ಈ ಇಬ್ಬರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಮಾತನಾಡಿ, ಆಪರೇಷನ್​ ಕಮಲ ಮಾಡಿರುವುದು ಆಡಿಯೋ ಮೂಲಕ ಬಹಿರಂಗವಾಗಿದೆ. ಹಾಗಾಗಿ ನೈತಿಕ ಹೊಣೆ ಹೊತ್ತು ಈ ಇಬ್ಬರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಇದೇ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​ ವಿರುದ್ಧವೂ ಕಿಡಿಕಾರಿದರು.

Intro:ಕಾಂಗ್ರೆಸ್ ಪ್ರತಿಭಟನೆ


Body:ಕಾಂಗ್ರೆಸ್ ಪ್ರತಿಭಟನೆ


Conclusion:ಅಮಿತ್ ಶಾ- ಬಿ.ಎಸ್‌.ವೈ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಕಾಂಗ್ರೆಸ್ ಪ್ರತಿಭಟನೆ
ಮೈಸೂರು: ಕೇಂದ್ರ ಗೃಹಸಚಿವ ಅಮಿತ್ ಶಾ ಹಾಗೂ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ನಗರ ಹಾಗೂ ಗ್ರಾಮಾಂತರ ಕಾಂಗ್ರೆಸ್ ಘಟಕದಿಂದ ಗಾಂಧಿವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.
ಹುಬ್ಬಳಿಯಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ‌‌.ಆಪರೇಷನ್ ಕಮಲ ಮಾಡುವಂತೆ ಅಮಿತ್ ಶಾ ಸೂಚನೆ ಕೊಟ್ಟಿದ್ದಾರೆ ಅದರಂತೆ ಕೆಲಸ ಮಾಡಲಾಗಿದೆ ಬಿ.ಎಸ್.ವೈ ಹೇಳಿದ್ದಾರೆ.ಇಬ್ಬರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಕೇಂದ್ರ ಗೃಹಮಂತ್ರಿ ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲು ಅವರು ಸಿದ್ದರಾಮಯ್ಯ ಅವರೇ ಆಡಿಯೋ ಬಿಡುಗಡೆ ಮಾಡಿಸಿದ್ದಾರೆ ಎಂದು ಹೇಳಿದ್ದಾರೆ.ಅವರಿಗೆ ಸಾಮಾನ್ಯ ಜ್ಞಾನ ಇಲ್ಲವೆಂದು ಕಿಡಿಕಾರಿದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.