ETV Bharat / state

ಮದ್ಯ ಮಾರಾಟ ನಿಲ್ಲಿಸುವಂತೆ ಒತ್ತಾಯಿಸಿ ಮೈಸೂರಿನಲ್ಲಿ​​ ಪ್ರತಿಭಟನೆ

author img

By

Published : May 9, 2020, 7:24 PM IST

ರಾಜ್ಯ ಸರ್ಕಾರ ಮದ್ಯ ಮಾರಾಟ ನಿಲ್ಲಿಸಬೇಕೆಂದು ಒತ್ತಾಯಿಸಿ ಮೈಸೂರಿನ ಕಾಂಗ್ರೆಸ್ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಮೈಸೂರಿನಲ್ಲಿ​​ ಪ್ರತಿಭಟನೆ
ಮೈಸೂರಿನಲ್ಲಿ​​ ಪ್ರತಿಭಟನೆ

ಮೈಸೂರು: ಕೊರೊನಾ ಮುಕ್ತವಾಗುವವರೆಗೂ ರಾಜ್ಯ ಸರ್ಕಾರ ಮದ್ಯ ಮಾರಾಟ ನಿಲ್ಲಿಸಬೇಕೆಂದು ಒತ್ತಾಯಿಸಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪ ಅಮರ್ ನಾಥ್ ನೇತೃತ್ವದಲ್ಲಿ ಕಾಂಗ್ರೆಸ್ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಮೈಸೂರಿನಲ್ಲಿ​​ ಪ್ರತಿಭಟನೆ
ಮೈಸೂರಿನಲ್ಲಿ​​ ಪ್ರತಿಭಟನೆ

ಕೋವಿಡ್​ ವೈರಸ್ ಭೀತಿ ಇದ್ದರೂ, ರಾಜ್ಯ ಸರ್ಕಾರ ಮದ್ಯ ಮಾರಾಟಕ್ಕೆ ಅನುಮತಿ ನೀಡಿರುವುದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಅನೇಕರು ಮುಗಿಬಿದ್ದು ಮದ್ಯ ಖರೀದಿ ಮಾಡುತ್ತಿದ್ದಾರೆ. ಅಲ್ಲದೇ ಕುಡಿದ ಅಮಲಿನಲ್ಲಿ ಅಪರಾಧ ಕೃತ್ಯಗಳು ಸಹ ನಡೆದಿವೆ ಎಂದು ಆರೋಪಿಸಿದರು.

ಕೊರೊನಾ ವೈರಸ್ ವಿರುದ್ಧ ಹೋರಾಟ ಮಾಡಿ, ಮೊದಲಿಗೆ ರಾಜ್ಯವನ್ನು ಕೋವಿಡ್​ ಮುಕ್ತ ಮಾಡಬೇಕು. ಆದರೆ, ರೆಡ್ ಝೋನ್​ಗಳಲ್ಲಿಯೂ ಮದ್ಯ ಮಾರಾಟಕ್ಕೆ ಅನುಮತಿ ನೀಡಿರುವುದರಿಂದ ಸೋಂಕಿತರ ಸಂಖ್ಯೆ ಹೆಚ್ಚಳವಾಗಲಿದೆ. ಸೋಂಕು ನಿಯಂತ್ರಣಕ್ಕೆ ಗಮನ‌ ಹರಿಸಬೇಕು. ವಲಸೆ ಕಾರ್ಮಿಕರಿಗೆ ಸೂಕ್ತ ಭದ್ರತೆ ಕೊಡಿ ಎಂದು ಆಗ್ರಹಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.