ETV Bharat / state

ಹಂದಿಗೆ ಡಿಕ್ಕಿ ತಪ್ಪಿಸಲು ಹೋಗಿ ಹಳ್ಳಕ್ಕೆ ಬಿದ್ದ ಗೂಡ್ಸ್ ವಾಹನ : 8 ಜನರಿಗೆ ಗಾಯ

author img

By

Published : Feb 22, 2021, 12:28 PM IST

ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಲಕ್ಷಿಪುರ ಬಳಿ ಕಾಡು ಹಂದಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಗೂಡ್ಸ್ ವಾಹನ ಪಲ್ಟಿಯಾಗಿ 8 ಮಂದಿ ಕೂಲಿ ಕಾರ್ಮಿಕರು ಗಾಯಗೊಂಡಿರುವ ಘಟನೆ ನಡೆದಿದೆ.

ಹಂದಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಹಳ್ಳಕ್ಕೆ ಬಿದ್ದ ಗೂಡ್ಸ್ ವಾಹನ
Goods vehicle fell into a ditch

ಮೈಸೂರು: ಕಾಡು ಹಂದಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಗೂಡ್ಸ್ ವಾಹನ ಪಲ್ಟಿಯಾಗಿ 8 ಮಂದಿ ಕೂಲಿ ಕಾರ್ಮಿಕರು ಗಾಯಗೊಂಡಿರುವ ಘಟನೆ ಹೆಚ್.ಡಿ. ಕೋಟೆ ತಾಲೂಕಿನ ಲಕ್ಷಿಪುರ ಬಳಿ ನಡೆದಿದೆ.

ಹಂದಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಹಳ್ಳಕ್ಕೆ ಬಿದ್ದ ಗೂಡ್ಸ್ ವಾಹನ

ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಲಕ್ಷಿಪುರ ಬಳಿ ಕಾಡು ಹಂದಿಯೊಂದು ರಸ್ತೆ ದಾಟುತ್ತಿತ್ತು. ಈ ವೇಳೆ ಅದೇ ದಾರಿಯಲ್ಲಿ ಕೂಲಿ ಕಾರ್ಮಿಕರು ಮತ್ತು ವಿದ್ಯಾರ್ಥಿಗಳನ್ನು ಕರೆದುಕೊಂಡು ಸಾಗುತ್ತಿದ್ದ ಗೂಡ್ಸ್​ ವಾಹನ ಹಂದಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ರಸ್ತೆ ಬದಿಯ ಹಳ್ಳಕ್ಕೆ ಮಗುಚಿ ಬಿದ್ದಿದೆ. ಪರಿಣಾಮ ವಾಹನದಲ್ಲಿದ್ದ 8 ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಹೆಚ್​.ಡಿ.ಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಓದಿ: ರಾಮಮಂದಿರ ನಿರ್ಮಾಣಕ್ಕೆ ಬಲವಂತವಾಗಿ ದೇಣಿಗೆ ಸಂಗ್ರಹಿಸುತ್ತಿಲ್ಲ: ಸಚಿವ ಎಸ್​.ಟಿ. ಸೋಮಶೇಖರ್

ಈ ಸಂಬಂಧ ಬೀಚನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.