ETV Bharat / state

Child marriage: ಅಪ್ರಾಪ್ತೆಯನ್ನು ಮದುವೆಯಾದ ಆರೋಪ.. ಗ್ರಾ.ಪಂ ಅಧ್ಯಕ್ಷನ ವಿರುದ್ಧ ಪ್ರಕರಣ

author img

By ETV Bharat Karnataka Team

Published : Sep 12, 2023, 12:34 PM IST

Updated : Sep 12, 2023, 1:31 PM IST

Gram Panchayat president married minor girl
ಅಪ್ರಾಪ್ತೆಯನ್ನು ಮದುವೆಯಾದ ಗ್ರಾಪಂ ಅಧ್ಯಕ್ಷ

Child Marriage Case: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಮದುವೆಯಾಗಿ ಕಾನೂನು ಉಲ್ಲಂಘಿಸಿರುವ ಆರೋಪದಡಿ ಪಂಚಾಯಿತಿ ಅಧ್ಯಕ್ಷನ ವಿರುದ್ಧ ಕ್ರಮ ಜರುಗಿಸುವಂತೆ ಊರಿನ ಪ್ರಮುಖರು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಮೈಸೂರು: ನಂಜನಗೂಡು ತಾಲೂಕೊಂದರ ಗ್ರಾಮ ಪಂಚಾಯಿತಿ ಅಧ್ಯಕ್ಷರೊಬ್ಬರು ಅಪ್ರಾಪ್ತೆಯನ್ನು ಮದುವೆಯಾದ ಆರೋಪ ಕೇಳಿಬಂದಿದೆ. ಈ ಸಂಬಂಧ ಪಂಚಾಯಿತಿ ಅಧ್ಯಕ್ಷನ ವಿರುದ್ಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ರೈತ ಸಂಘದ ಉಪಾಧ್ಯಕ್ಷ ಮಹೇಶ್‌ ಸೇರಿದಂತೆ ಗ್ರಾಮದ ಪ್ರಮುಖರು ನಂಜನಗೂಡಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು (ಸಿಡಿಪಿಒ) ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ತಾಲೂಕು ಶಿಶು ಅಭಿವೃದ್ಧಿ ಅಧಿಕಾರಿ ಕವಿತಾ ಮುಂದಿನ ಕ್ರಮ ಜರುಗಿಸಿದ್ದಾರೆ.

ಗ್ರಾ.ಪಂ ಅಧ್ಯಕ್ಷ ನಂಜನಗೂಡು ತಾಲೂಕಿನ ಮತ್ತೊಂದು ಗ್ರಾಮದ ಬಾಲಕಿಯನ್ನು 2023ರ ಫೆಬ್ರವರಿ 15ರಂದು ನಂಜನಗೂಡಿನ ಕಲ್ಯಾಣ ಮಂಟಪವೊಂದರಲ್ಲಿ ಮದುವೆಯಾಗಿದ್ದಾರೆ. ಶಾಲಾ ದಾಖಲಾತಿ ಪ್ರಕಾರ ಬಾಲಕಿಯ ಜನ್ಮ ದಿನಾಂಕ 2005ರ ಮೇ 19 ಆಗಿದೆ. ಆಕೆಗೆ ಇನ್ನೂ 18 ವರ್ಷ ತುಂಬಿಲ್ಲ. ಹೀಗಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷನ ವಿರುದ್ಧ ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಬಾಲಕಿಯನ್ನು ಮದುವೆ ಮಾಡಿಕೊಂಡಿರುವುದಲ್ಲದೇ ಆಕೆ ಈಗ ಗರ್ಭಿಣಿಯಾಗಿದ್ದು, ಇದು ಕೂಡ ಕಾನೂನು ಉಲ್ಲಂಘನೆಯಾಗಿದೆ. ಈ ಸಂಬಂಧ ಸಮಗ್ರ ತನಿಖೆ ನಡೆಸಿ ಈತನ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ತಮ್ಮ ಸಹಿಯೊಂದಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. ಇದರಿಂದ ಹಾಲಿ ಗ್ರಾಪಂ ಅಧ್ಯಕ್ಷ ತನ್ನ ಸ್ಥಾನವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ನಂಜನಗೂಡು ಪೊಲೀಸರು ಈ ಕುರಿತು ಸೋಮವಾರ ರಾತ್ರಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ : ಬಾಲ್ಯ ವಿವಾಹದ ವಿರುದ್ಧ ಅಸ್ಸಾಂನಲ್ಲಿ ಶಿಸ್ತು ಕ್ರಮ: ಮೌಲಾನಾ, ಪೂಜಾರಿಗಳು ಸೇರಿ 2044 ಜನರ ಬಂಧನ

Last Updated :Sep 12, 2023, 1:31 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.