ETV Bharat / state

ಮೈಸೂರಲ್ಲಿ ಹೆಲಿಟೂರಿಸಂ, ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಖಚಿತ: ಸಚಿವ ಯೋಗೇಶ್ವರ್

author img

By

Published : Jul 19, 2021, 11:59 PM IST

ಇಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಅವರು ಮೈಸೂರಲ್ಲಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಜಿಲ್ಲೆಯಲ್ಲಿನ ಪ್ರವಾಸೋದ್ಯಮ ಅಭಿವೃದ್ಧಿ ಕುರಿತಂತೆ ಕೈಗೊಳ್ಳುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

Minister Yogeshwar
ಸಚಿವ ಸಿ‌.ಪಿ.ಯೋಗೇಶ್ವರ್

ಮೈಸೂರು: ಜಿಲ್ಲೆಯಲ್ಲಿ ಹೆಲಿಟೂರಿಸಂ ಆದಷ್ಟು ಬೇಗ ಪ್ರಾರಂಭವಾಗುತ್ತದೆ. ರೂಪುರೇಷೆಗಳನ್ನು ಬದಲಾವಣೆ ಮಾಡಿಕೊಂಡು ಆರಂಭಿಸುತ್ತೇವೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.

ತಲಕಾಡಿನ ಸರ್ಕಾರಿ ಅತಿಥಿಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕರ್ನಾಟಕದ ಎಲ್ಲಾ ವಿಮಾನ ನಿಲ್ದಾಣಗಳನ್ನು ಹೆಲಿ ಹೆಲಿಟೂರಿಸಂ ಬರೆಸಿಕೊಳ್ಳಲು ಅವಕಾಶ ಮಾಡಿ ಕೊಟ್ಟಿದೆ. ಮೈಸೂರಿನ ವಿಮಾನ ನಿಲ್ದಾಣದಲ್ಲೇ ಹೆಲಿ ಹೆಲಿಟೂರಿಸಂ ಆರಂಭಿಸುತ್ತೇವೆ. ಬೆಂಗಳೂರಿನಲ್ಲಿ ಇನ್ನು 15 ರಿಂದ 20 ದಿನಗಳ ಒಳಗೆ ಹೆಲಿ ಹೆಲಿಟೂರಿಸಂ ಆರಂಭವಾಗುತ್ತದೆ ಎಂದರು.

ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಸುದ್ದಿಗೋಷ್ಠಿ

ಕೆಆರ್​​ಎಸ್​​​ ಡಿಸ್ನಿಲ್ಯಾಂಡ್ ನಿರ್ಮಾಣ ಯೋಜನೆ :

ಕೆಆರ್​​ಎಸ್​​​ನಲ್ಲಿ ಡಿಸ್ನಿಲ್ಯಾಂಡ್ ನಿರ್ಮಾಣ ಯೋಜನೆ ನಮ್ಮ ಸರ್ಕಾರದ್ದಲ್ಲ. ಹಿಂದಿನ ಸರ್ಕಾರದ ಯೋಜನೆ‌ ಹಾಗೂ ನೀರಾವರಿ ಇಲಾಖೆಗೆ ಸೇರಿದ ಯೋಜನೆಯಾಗಿದೆ. ಡಿಸ್ನಿಲ್ಯಾಂಡ್ ಅಲ್ಲ ಕೆಆರ್​​ಎಸ್ ಹಿನ್ನೀರಿನಲ್ಲಿ ವಾಟರ್ ಸ್ಪೋರ್ಟ್ ಮಾಡುತ್ತೇವೆ ಎಂದು ತಿಳಿಸಿದರು.

ಚಾಮುಂಡಿ ಬೆಟ್ಟದಲ್ಲಿ ರೋಪ್ ವೇ:

ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಮಾಡುವ ವಿಚಾರವಾಗಿ ವಿರೋಧ ಮಾಡಿದರೂ ನಾವು ಈ ಯೋಜನೆಯನ್ನು ಮಾಡುತ್ತೇವೆ. ವಿರೋಧಗಳನ್ನೆಲ್ಲ ಪಕ್ಕಕ್ಕಿಟ್ಟು ರೋಪ್ ವೇ ಮಾಡುತ್ತೇವೆ. ಮೊದಲಿಗೆ ವಿರೋಧ ವ್ಯಕ್ತವಾದರೂ ನಂತರ ಅವರೇ ಒಪ್ಪಿಕೊಳ್ಳುತ್ತಾರೆ. ಈಗಾಗಲೇ ರೋಪ್ ವೇಗೆ ಡಿಪಿಆರ್ ಆಗಿದೆ ಎಂದು ಹೇಳಿದರು.

ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಸುದ್ದಿಗೋಷ್ಠಿ

ತಲಕಾಡಿನಲ್ಲಿ ಗಂಗರ ಉತ್ಸವ:

ಇತಿಹಾಸ ಪ್ರಸಿದ್ಧ ತಲಕಾಡಿನಲ್ಲಿ ಗಂಗರ ಉತ್ಸವ ನಡೆಸಲಾಗುವುದು. ಇತಿಹಾಸ ಗೊತ್ತಿಲ್ಲದವರು ಇತಿಹಾಸ ಸೃಷ್ಟಿಸಲು ಸಾಧ್ಯವಿಲ್ಲ. ಅದೇ ರೀತಿ ತಲಕಾಡಿನ ಇತಿಹಾಸ ಎಲ್ಲರಿಗೂ ತಿಳಿಯಬೇಕು. ಪ್ರವಾಸೋದ್ಯಮ‌ ಕಾರಣಕ್ಕೆ ತಲಕಾಡನ್ನು ಇನ್ನಷ್ಟು ಅಭಿವೃದ್ಧಿ ಪಡಿಸಬೇಕಿದೆ. ತಲಕಾಡಿನ ಇತಿಹಾಸ ಮುಂದಿನ ಪೀಳಿಗೆಗೆ ಕೊಂಡೊಯ್ಯಲು ಇಲ್ಲಿ ಅಭಿವೃದ್ಧಿ ಮಾಡಲು ತೀರ್ಮಾನ ಮಾಡಲಾಗಿದೆ. ಮೈಸೂರಿಗೆ ಬರುವ ಪ್ರವಾಸಿಗರು ಇಲ್ಲಿಗೂ ಸಹ ಬರುವಂತಾಗಬೇಕು. ಧಾರ್ಮಿಕ ಕೇಂದ್ರವಾಗಿ ಮಾತ್ರ ಅಲ್ಲದೆ ಪ್ರವಾಸಿ ತಾಣವಾಗಿ ಸಹ ಅಭಿವೃದ್ಧಿ ಆಗಬೇಕಿದೆ ಎಂದು ಹೇಳಿದರು.

ಗಂಗರ ಉತ್ಸವ ನಡೆಸಲು ಚಿಂತನೆ :

ಮೈಸೂರು ಸರ್ಕ್ಯೂಟ್ ವ್ಯಾಪ್ತಿಯಲ್ಲಿ ಅಭಿವೃದ್ಧಿಗೆ ಚಿಂತನೆ ಮಾಡಲಾಗಿದೆ. ಆದರೆ ಪೂರಕ ವ್ಯವಸ್ಥೆ ಇಲ್ಲ. ಈ ಹಿನ್ನೆಲೆಯಲ್ಲಿ ಪ್ರತಿವರ್ಷ ತಲಕಾಡು ಗಂಗರ ಉತ್ಸವ ನಡೆಸಲು ತೀರ್ಮಾನ ಮಾಡಲಾಗಿದೆ. ಈ ವರ್ಷವೇ ದಸರಾ ವೇಳೆಗೆ ಗಂಗರ ಉತ್ಸವ ನಡೆಸಲು ಚಿಂತನೆ ನಡೆಸಲಾಗಿದೆ. 12 ವರ್ಷಕ್ಕೊಮ್ಮೆ ಪಂಚಲಿಂಗ ದರ್ಶನ ಮಾಡಲಾಗುತ್ತಿದೆ. ಪ್ರತಿವರ್ಷ ಗಂಗರ ಉತ್ಸವ‌ ನಡೆಸಿದರೆ ಮೂಲ ಸೌಕರ್ಯ ಅಭಿವೃದ್ಧಿ ಆಗಲಿದೆ. ಈ ಬಗ್ಗೆ ವಿವಿಧ ಇಲಾಖೆಗಳ ಜೊತೆ ಚರ್ಚಿಸಿ ಅನುಮೋದನೆ ಪಡೆಯುತ್ತೇನೆ ಎಂದರು.

ಓದಿ: ರಾಜ್ಯದಲ್ಲಿ ಇಳಿಕೆ ಕಂಡ ಕೊರೊನಾ: 1,291 ಮಂದಿಗೆ ಸೋಂಕು ದೃಢ, 40 ಬಲಿ

ರಾಜ್ಯದಲ್ಲಿ ಸಾಕಷ್ಟು ಪ್ರವಾಸಿ ತಾಣವಿದ್ದರೂ ಶಾಲಾ ಮಕ್ಕಳಿಗೆ ಮೂಲಸೌಕರ್ಯ ಇಲ್ಲ. ನಮ್ಮ ಇಲಾಖೆ, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸಭೆ ನಡೆಸಿ ಮೈಸೂರು ಸೇರಿದಂತೆ ರಾಜ್ಯದ 10 ಕಡೆಗಳಲ್ಲಿ ಶಾಲಾ ಮಕ್ಕಳಿಗೆ ಮೂಲ ಸೌಕರ್ಯ ಕಲ್ಪಿಸಲು ಚಿಂತನೆ ನಡೆಸುತ್ತೇವೆ. ಸರ್ಕಾರದಿಂದ ಉಚಿತ ವಸತಿ ಹಾಗೂ ಊಟದ ವ್ಯವಸ್ಥೆ ಕಲ್ಪಿಸುತ್ತೇವೆ. ಈ ಸಂಬಂಧ ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡುತ್ತೇನೆ. ವಿವಿಧ ಇಲಾಖೆಗಳ ಜೊತೆ ಚರ್ಚೆ ಮಾಡಿ ಅಂತಿಮ ರೂಪುರೇಷೆ ಮಾಡುತ್ತೀವಿ ಎಂದು ತಿಳಿಸಿದರು‌.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.