ETV Bharat / state

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ

author img

By

Published : Nov 27, 2021, 8:52 PM IST

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ
ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ

ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 6 ಮಂದಿ ಆರೋಪಿಗಳ‌ ವಿರುದ್ಧ ‌1,499 ಪುಟಗಳಷ್ಟು ದೋಷಾರೋಪ ಪಟ್ಟಿಯನ್ನು ಇಲ್ಲಿನ 3ನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದೆ. ಬಂಧಿಸಲಾಗಿದ್ದ 7 ಮಂದಿಯ ಪೈಕಿ ಓರ್ವ ಆರೋಪಿಯ ಪಾತ್ರ ಘಟನೆಯಲ್ಲಿ ಇಲ್ಲ ಎಂಬುದು ಗೊತ್ತಾದ ನಂತರ‌ ಆತನನ್ನು ಬಿಟ್ಟು ಉಳಿದ 6 ಮಂದಿಯ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿದೆ..

ಮೈಸೂರು : ನಗರವನ್ನೇ ಬೆಚ್ಚಿ ಬೀಳಿಸಿದ್ದ ಚಿನ್ನದ ಅಂಗಡಿ ದರೋಡೆ, ಕೊಲೆ ಹಾಗೂ‌ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳ ವಿರುದ್ಧ ಪೊಲೀಸರು ದೋಷಾರೋಪ ಪಟ್ಟಿಯನ್ನು ಇಲ್ಲಿನ ಮೂರನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 6 ಮಂದಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ :

ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 6 ಮಂದಿ ಆರೋಪಿಗಳ‌ ವಿರುದ್ಧ ‌1,499 ಪುಟಗಳಷ್ಟು ದೋಷಾರೋಪ ಪಟ್ಟಿಯನ್ನು ಇಲ್ಲಿನ ಮೂರನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದೆ.

ಬಂಧಿಸಲಾಗಿದ್ದ 7 ಮಂದಿಯ ಪೈಕಿ ಒಬ್ಬ ಆರೋಪಿಯ ಪಾತ್ರ ಘಟನೆಯಲ್ಲಿ ಇಲ್ಲ ಎಂಬುದು ಗೊತ್ತಾದ ನಂತರ‌ ಆತನನ್ನು ಬಿಟ್ಟು ಉಳಿದ 6 ಮಂದಿಯ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿದೆ.

ಐಪಿಸಿ 397, 376 ಬಿ, 109, 120 ಬಿ, 334, 325, 326, ಸೆಕ್ಷನ್ಸ್ ಗಳನ್ನು ಆರೋಪಿಗಳ ವಿರುದ್ಧ ಹಾಕಲಾಗಿದ್ದು, ವಿಚಾರಣೆ ಅರಂಭವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ದರೋಡೆ ಪ್ರಕರಣದಲ್ಲಿ 8 ಮಂದಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ :

ಚಿನ್ನದ ಅಂಗಡಿ ದರೋಡೆ ಮತ್ತು ಕೊಲೆ ಪ್ರಕರಣದಲ್ಲಿ 8 ಮಂದಿಯ ವಿರುದ್ಧ ಇಲ್ಲಿನ 2ನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ 1,410 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.

ಐಪಿಸಿ 396, 394, 120 ಬಿ ಸೆಕ್ಷನ್ಸ್‌ಗಳನ್ನು ಆರೋಪಿಗಳ ವಿರುದ್ಧ ಹಾಕಲಾಗಿದೆ. ಆರೋಪಿಗಳ ಪೈಕಿ 7 ಮಂದಿಯನ್ನು ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿಯ ಹುಡುಕಾಟ ನಡೆದಿದೆ ಎಂದು ಪೊಲೀಸರು ‌ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.