ETV Bharat / state

ಪತ್ನಿಯನ್ನು ಬೆಂಕಿ ಹಚ್ಚಿ ಕೊಂದಿದ್ದ ಪತಿಗೆ ಜೀವಾವಧಿ ಶಿಕ್ಷೆ

author img

By

Published : Jan 28, 2022, 6:36 PM IST

2018ರ ಅಕ್ಟೋಬರ್​​​​​​​ನಲ್ಲಿ ಬಸವಯ್ಯ ಪತ್ನಿಯೊಂದಿಗೆ ಜಗಳವಾಡಿ ಆಕೆಯ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು..

Man sentenced to life imprisonment for killing his wife
ಪತ್ನಿಯನ್ನು ಬೆಂಕಿ ಹಚ್ಚಿ ಕೊಂದಿದ್ದ ಪತಿಗೆ ಜೀವಾವಧಿ ಶಿಕ್ಷೆ

ಮೈಸೂರು : ಮೂರು ವರ್ಷಗಳ ಹಿಂದೆ ತನ್ನ ಪತ್ನಿಯ ಮೇಲೆ ಸೀಮೆಎಣ್ಣೆ ಸುರಿದು ಕೊಲೆ ಮಾಡಿದ್ದ ಪತಿಗೆ ನಗರದ 5ನೇ ಮತ್ತು ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ತಾಲೂಕಿನ ಕೇರ್ಗಳ್ಳಿ ಗ್ರಾಮದ ಬಸವಯ್ಯ ಎಂಬುವನು ಜೀವಾವಧಿ ಶಿಕ್ಷೆಗೆ ಗುರಿಯಾದವ. ಈತ 22 ವರ್ಷಗಳ ಹಿಂದೆ ನಾಗರತ್ನ ಎಂಬುವರನ್ನು ಮದುವೆಯಾಗಿದ್ದ. ಬಸವಯ್ಯನಿಗೆ ಕುಡಿತದ ಚಟವಿದ್ದು, ಪ್ರತಿದಿನ ಕುಡಿದು ಪತ್ನಿಯ ಶೀಲದ ಬಗ್ಗೆ ಅನುಮಾನಿಸಿ ಜಗಳವಾಡುತ್ತಿದ್ದ.

2018ರ ಅಕ್ಟೋಬರ್​​​​​​​ನಲ್ಲಿ ಬಸವಯ್ಯ ಪತ್ನಿಯೊಂದಿಗೆ ಜಗಳವಾಡಿ ಆಕೆಯ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.

ಇದನ್ನೂ ಓದಿ: ಡಾ.ನೀರಜ್ ಅವರ ಫಾರ್ಮ್ ಹೌಸ್‌ನಲ್ಲಿಂದು ಸಂಜೆಯೊಳಗೆ ಸೌಂದರ್ಯ ಅಂತ್ಯಕ್ರಿಯೆ

ಈ ಸಂಬಂಧ ಜಯಪುರ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಧೀಶೆ ಅಶ್ವಿನಿ ವಿಜಯ್ ಸಿರಿಯಣ್ಣವರ್​​​​​ರವರು ಆರೋಪಿ ಬಸವಯ್ಯನಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರ ನಾಗಪ್ಪ ಸಿ.ನಾಕ್​​​​​ಮನ್ ವಾದ ಮಂಡಿಸಿದ್ದಾರೆ‌.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.